Karnataka Budget 2023 : ಇಂದು ಕರ್ನಾಟಕ ರಾಜ್ಯ ಬಜೆಟ್‌, ಸಿಎಂ ಸಿದ್ದರಾಮಯ್ಯ ಮೇಲೆ ಜನರ ನಿರೀಕ್ಷೆಗಳೇನು ?

ಬೆಂಗಳೂರು : Karnataka Budget 2023 : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾಜ್ಯ ಬಜೆಟ್‌ ಮಂಡನೆ ಮಾಡಲಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದ ಬಜೆಟ್‌ ಹೆಚ್ಚು ಮಹತ್ವ ಪಡೆದುಕೊಂಡಿದೆ. ಕಾಂಗ್ರೆಸ್‌ ಸರಕಾರ ಗ್ಯಾರಂಟಿ ಯೋಜನೆಗಳ ಜಾರಿಗೆ ಹೊರಟಿದ್ದು, ಗ್ಯಾರಂಟಿ ಜೊತೆಗೆ ಯಾವೆಲ್ಲಾ ಯೋಜನೆಗಳನ್ನು ಜಾರಿ ಮಾಡಲಿವೆ ಅನ್ನೋ ಕುತೂಹಲವೂ ವ್ಯಕ್ತವಾಗಿದೆ.

ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡನೆ ಮಾಡುವ ಮೂಲಕ ರಾಜ್ಯದಲ್ಲಿ ಅತೀ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಪಾತ್ರರಾಗಲಿದ್ದಾರೆ. ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದ ಬಸವರಾಜ್‌ ಬೊಮ್ಮಾಯಿ ಅವರು 3.09 ಲಕ್ಷ ಕೋಟಿ ರೂಪಾಯಿಗಳ ಪೂರಕ ಬಜೆಟ್‌ ಮಂಡಿಸಿದ್ದರು. ಈ ಬಾರಿ ಐದು ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂಪಾಯಿ ವೆಚ್ಚವಾಗುವುದರಿಂದ ಈ ಬಾರಿಯ ಬಜೆಟ್‌ ಗಾತ್ರವು 3.39 ಲಕ್ಷ ಕೋಟಿಗೆ ಏರಿಕೆ ಆಗಬಹುದು ಎನ್ನಲಾಗುತ್ತಿದೆ. ತಮ್ಮ ಗ್ಯಾರಂಟಿ ಯೋಜನೆಗಳ ಜಾರಿಗಾಗಿ ರಾಜ್ಯ ಸರಕಾರ ಈ ಬಾರಿಯ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ವಿಲೀನ ಮಾಡುವ ಸಾಧ್ಯತೆಯಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಯಿಂದ ಈಗಾಗಲೇ ಗೃಹಲಕ್ಷ್ಮೀ ಯೋಜನೆ ಜಾರಿಗೆ ಸಿದ್ದತೆ ನಡೆದಿದೆ. ಈ ಯೋಜನೆಯ ಮೂಲಕ ಮನೆಯ ಯಜಮಾನಿಗೆ ಪ್ರತೀ ತಿಂಗಳು 2 ಸಾವಿರ ರೂಪಾಯಿ ದೊರೆಯಲಿದೆ. ಇನ್ನು ಸಾರಿಗೆ ಇಲಾಖೆ ಮಹಿಳೆಯರಿಗೆ ಸರಕಾರಿ ಸಾಮಾನ್ಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಈಗಾಗಲೇ ಅವಕಾಶವನ್ನು ಕಲ್ಪಿಸಿದೆ. ಅನ್ನಭಾಗ್ಯ ಯೋಜನೆಯ ಮೂಲಕ ಜನರಿಗೆ ಹತ್ತು ಕೆಜಿ ಅಕ್ಕಿ ನೀಡುವ ಯೋಜನೆ ಪ್ರಗತಿಯಲ್ಲಿದೆ. ಆದರೆ ಅಕ್ಕಿಯ ಅಲಭ್ಯತೆಯಿಂದ ಪಡಿತರ ಖಾತೆದಾರರ ಬ್ಯಾಂಕ್‌ ಖಾತೆಗೆ ಹಣ ಜಮೆ ಆಗಲಿದೆ. ಗೃಹಜ್ಯೋತಿ ಯೋಜನೆಯ ಅಡಿಯಲ್ಲಿ ಜನರಿಗೆ 200 ಯೂನಿಟ್‌ ವಿದ್ಯುತ್‌ ಲಭ್ಯವಾಗುತ್ತಿದ್ದು, ಈ ಯೋಜನೆ ಜುಲೈ ತಿಂಗಳಿನಿಂದಲೇ ಜಾರಿಗೆ ಬಂದಿದೆ. ಯುವನಿಧಿ ಯೋಜನೆಯ ಕುರಿತು ಸರಕಾರ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಈ ಯೋಜನೆಯ ಮೂಲಕ ಪದವೀಧರ ನಿರುದ್ಯೋಗಿಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ ಅನುಕೂಲವಾಗಲಿದೆ. ರಾಜ್ಯದಲ್ಲಿ ಮುಚ್ಚಿರುವ ಇಂದಿರಾ ಕ್ಯಾಂಟೀನ್‌ಗಳು ಮತ್ತೆ ಕಾರ್ಯಾರಂಭ ಮಾಡಲಿವೆ.

ಇದನ್ನೂ ಓದಿ : Rain Alert School Holiday : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (ಜುಲೈ 7) ಶಾಲೆ, ಕಾಲೇಜಿಗೆ ರಜೆ

Karnataka Budget 2023 : ರಾಜ್ಯ ಬಜೆಟ್‌ನ ಮೇಲೆ ಜನರ ನಿರೀಕ್ಷೆಗಳೇನು ?

ಕಳೆದ ಬಜೆಟ್‌ನಲ್ಲಿ ರಾಜ್ಯದ ಕರಾವಳಿ ಭಾಗಕ್ಕೆ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದರೂ ಕೂಡ ಜಾರಿಯಾಗಿಲ್ಲ. ಪ್ರಮುಖವಾಗಿ ಮೀನುಗಾರ ಮಹಿಳೆಯರಿಗೆ ೫ ಲಕ್ಷ ರೂಪಾಯಿ ಬಡ್ಡಿರಹಿತ ಸಾಲ, ಮೀನುಗಾರರ ವಿಮೆ ೧೦ ಲಕ್ಷಕ್ಕೆ ಏರಿಕೆ, ಹಡಗುಗಳ ಖರೀದಿಗೆ ೨೫ ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯ, ಅಇಡಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ೫೦ ಕೋಟಿ ರೂಪಾಯಿ ಮೀಸಲು. ಬ್ರಹ್ಮಾವರದ ಸಹಕಾರಿ ಸಕ್ಕರೆ ಕಾರ್ಖಾನೆ ಪುನಶ್ಚೇತನ, ಕರಾವಳಿಯ ಬಂದರುಗಳ ಅಭಿವೃದ್ದಿ. ಕರಾವಳಿ ಪ್ರವಾಸೋದ್ಯಮಕ್ಕೆ ಪೂರಕ ಯೋಜನೆ, ಕರಾವಳಿ ಜಿಲ್ಲೆಯ ರೈತರ ಅನುಕೂಲಕ್ಕಾಗಿ ಬ್ರಹ್ಮಾವರದಲ್ಲಿ ಕೃಷಿ ಕಾಲೇಜು, ಕರಾವಳಿ ಪ್ರಾಧಿಕಾರ ಮೇಲ್ದರ್ಜೆಗೆ ಸೇರಿದಂತೆ ಹಲವು ನಿರೀಕ್ಷೆಗಳನ್ನು ಇಟ್ಟುಕೊಳ್ಳಲಾಗಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನ ಅಭಿವೃದ್ದಿ ಹಲವು ಯೋಜನೆಗಳು ಜಾರಿ ಆಗುವ ಕುರಿತು ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ. ಗುಂಡಿ ಮುಕ್ತ ರಸ್ತೆ, ರಾಜಕಾಲುವೆ ಸಮಸ್ಯೆ, ತ್ಯಾಜ್ಯ ವಿಲೇವಾರಿ, ವಾಹನ ಸಂಚಾರ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಲುವಾಗಿ ಯೋಜನೆ ಜಾರಿಯಾಗುವ ಕುರಿತು ರಾಜ್ಯ ಬಜೆಟ್‌ನ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳನ್ನು ಇಟ್ಟುಕೊಳ್ಳಲಾಗಿದೆ. ಮೈಸೂರು ಕರ್ನಾಟಕದ ಭಾಗದಲ್ಲಿಯೂ ಹಲವು ನಿರೀಕ್ಷೆಗಳಿವೆ. ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ, ಆನೆಧಾಮ ಸ್ಥಾಪನೆ, ಮಂಡ್ಯದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಚಾಮರಾಜನಗರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ, ಗುಣಮಟ್ಟದ ಶಿಕ್ಷಣ ಮತ್ತು ಶಾಲೆಗಳ ಅಭಿವೃದ್ಧಿಗೆ ಅನುದಾನದ ಅವಶ್ಯಕತೆ, ಶ್ರೀರಂಗಪಟ್ಟಣ ಮೆಕ್ಸಿಕೋ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಸ್ಮಾರಕಗಳ ಸಂರಕ್ಷಣೆ, ಚಿಕ್ಕಮಗಳೂರು ಹಾಗೂ ಕೊಡಗು ಕಾಫಿ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್‌ ಕುರಿತು ನಿರೀಕ್ಷೆಗಳಿವೆ.

ಇದನ್ನೂ ಓದಿ : Rain Alert School Holiday : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (ಜುಲೈ 7) ಶಾಲೆ, ಕಾಲೇಜಿಗೆ ರಜೆ

ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ 70 ಸಾವಿರ ಕೋಟಿ ರೂಪಾಯಿ ಮೀಸಲು. ತೊಗರಿ ಅಭಿವೃದ್ಧಿ ಮಂಡಳಿಗೆ 100 ಕೋಟಿ ರೂ., ಪ್ರತ್ಯೇಕ ಕೈಗಾರಿಕಾ ನೀತಿ ಜತೆಗೆ ಮೆಗಾ ಟೆಕ್ಸ್‌ಟೈಲ್ ಪಾರ್ಕ್‌ಗೆ ಅನುದಾನದ ಸೌಲಭ್ಯ, ಉದ್ಯೋಗ ನೇಮಕಾತಿಯಲ್ಲಿ ಮೀಸಲಾತಿ, ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಪ್ರದೇಶಾಭಿವೃದ್ದಿ ಮಂಡಳಿ, ದಾವಣಗೆರೆಯಲ್ಲಿ ವಿಮಾನ ನಿಲ್ದಾಣ ಆರಂಭಕ್ಕೆ ಜಾಗ ಮಂಜೂರು, ಸರಕಾರಿ ವೈದ್ಯಕೀಯ ಕಾಲೇಜು ಮಂಜೂರಾತಿ, ಕೈಗಾರಿಕಾ ಕಾರಿಡಾರ್‌, ಚಿತ್ರದುರ್ಗದ ಅಭಿವೃದ್ದಿಗೆ ಪ್ರತ್ಯೇಕ ಯೋಜನೆ ಜಾರಿಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕ ಭಾಗದ ಜನರು ಕೂಡ ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಕೃಷಿ, ಕೈಗಾರಿಕೆ, ಉದ್ಯೋಗ, ಇಂಡಸ್ಟ್ರೀಯಲ್‌ ಕಾರಿಡಾರ್‌ ಸೇರಿದಂತೆ ಹಲವು ನಿರೀಕ್ಷೆಗಳಿವೆ.

Comments are closed.