Karnataka Budget 2023 : ಸಿದ್ದರಾಮಯ್ಯ ಬಜೆಟ್‌ನಲ್ಲಿ ಕರಾವಳಿಗೆ ಸಿಕ್ಕಿದ್ದೇನು ?

ಬೆಂಗಳೂರು : ರಾಜ್ಯ ಬಜೆಟ್‌ನಲ್ಲಿ (Karnataka Budget 2023) ಕರಾವಳಿ ಜನತೆಗೆ ಒಂದಷ್ಟು ಯೋಜನೆಗಳನ್ನು ಘೋಷಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಕರಾವಳಿ ಭಾಗಗಳಲ್ಲಿ ಜನರನ್ನು ಗಮನದಲ್ಲಿಟ್ಟುಕೊಂಡು ಉಪಯುಕ್ತ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಅವುಗಳನ್ನು ಈ ಕೆಳಗೆ ತಿಳಿಸಲಾಗಿದೆ.

ಸಿದ್ದರಾಮಯ್ಯ ಬಜೆಟ್‌ನಲ್ಲಿ ಕರಾವಳಿಗೆ ಸಿಕ್ಕಿದ್ದೇನು ?

  • ಮೀನುಗಾರ ಮಹಿಳೆಯರಿಗೆ ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿ 50 ಸಾವಿರ ರೂಪಾಯಿಯಿಂದ 3 ಲಕ್ಷ ರೂಪಾಯಿಗೆ ಹೆಚ್ಚಳಗೊಳಿಸಲಾಗಿದೆ.
  • ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದ ಡೀಸೆಲ್‌ ಮಿತಿ ೨ ಲಕ್ಷ ಕಿಲೋ ಲೀಟರ್‌ಗಳವರೆಗೆ ಹೆಚ್ಚಿಸಲು ೨೫೦ ಕೋಟಿ ನೆರವು ಘೋಷಿಸಲಾಗಿದೆ.
  • ಮೀನುಗಾರಿಕಾ ದೋಣಿಗಳ ಸೀಮೆ ಎಣ್ಣೆ ಇಂಜಿನ್‌ಗಳನ್ನು ಪೆಟ್ರೋಲ್‌ ಇಂಜಿನ್‌ಗಳಾಗಿ ಬದಲಾಯಿಸಲು ತಲಾ ೫೦ ಸಾವುರ ಸಹಾಯಧನ ಹಾಗೂ ಐದು ಕೋಟಿ ರೂ. ಆರ್ಥಿಕ ನೆರವು ಘೋಷಣೆ.
  • ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ರೈತರಿಗೆ ಸರಕು ಸಾಗಣಿಕೆಗೆ ಪಿಕ್‌ಆಪ್‌ ವ್ಯಾನ್‌ ಖರೀದಿಗೆ ಶೇ.4 ಬಡ್ಡಿ ದರದಲ್ಲಿ ಏಳು ಲಕ್ಷ ರೂ. ವರೆಗಿನ ಸಾಲ ಸೌಲಭ್ಯ.
  • ಬಂದರು ಅವಲಂಬಿತ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ಉತ್ತರ ಕನ್ನಡ ಜಿಲ್ಲೆಯ ಕೇಣಿಯಲ್ಲಿ ಸರ್ವ ಋತು ಡೀಪ್‌ವಾಟರ್‌ ಗ್ರೀನ್‌ಫೀಲ್ಡ್‌ ಬಂದರು ಅಭಿವೃದ್ಧಿ.
  • ಮೀನುಗಾರಿಕಾ ದೋಣಿಗಳು ತಂಗುವ ಜೆಟ್ಟಿಗಳು ಹಾಗೂ ಬಂದರುಗಳಲ್ಲಿ ಹೂಳು ತೆಗೆಯುವುದು ಮತ್ತು ಮಲ್ಪೆ, ಹೊನ್ನಾವರ, ಭಟ್ಕಳ, ಕುಂದಾಪುರ ಮತ್ತು ಬೆಲೆಕೇರಿ ಬಂದರುಗಳಲ್ಲಿ ಎರಡು ವರ್ಷಗಳಿಗೊಮ್ಮೆ ಹೂಳೆತ್ತಲು ಕ್ರಮ ಜಾರಿ.
  • ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ಬೀಚ್‌ ಪ್ರವಾಸೋದ್ಯಮ ಕಾರ್ಯಪಡೆ ರಚನೆ, ಅಂತಾರಾಷ್ಟ್ರೀಯ ಸರ್ಫಿಂಗ್‌ ತಾಣವಾಗಿ ಸಹಿಹಿತ್ಲು ಕಡಲ ತೀರ ಅಭಿವೃದ್ಧಿ

ಮೀನುಗಾರ ಮಹಿಳೆಯರಿಗೆ ಆರ್ಥಿಕ ಸ್ವಾವಲಂಭನೆ ಹಾಗೂ ವಹಿವಾಟು ವಿಸ್ತರಣೆಗೆ ನೀಡಲಾಗುತ್ತಿದ್ದ ಬಡ್ಡಿರಹಿತ ಸಾಲದ ಮೊತ್ತವನ್ನು 50 ಸಾವಿರ ರೂಪಾಯಿಯಿಂದ 3 ಲಕ್ಷ ರೂಪಾಯಿಗೆ ಏರಿಕೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡಿಸೇಲ್‌ ಮಿತಿಯನ್ನು ಒಂದೂವರೆ ಲಕ್ಷ ಕಿಲೋ ಲೀಟರ್‌ನಿಂದ ಎರಡು ಲಕ್ಷ ಕಿಲೋ ಲೀಟರ್‌ಗಳ ವರೆಗೆ ಹೆಚ್ಚಳ ಮಾಡಲಾಗುವುದು. ಇದರಿಂದ ಮೀನುಗಾರರಿಗೆ ಸರಕಾರದಿಂದ 250 ಕೋಟಿ ರೂಪಾಯಿಗಳಷ್ಟು ನೆರವು ದೊರೆಯಲಿದೆ.

ಇದನ್ನೂ ಓದಿ : Karnataka Budget 2023 : ವಧು-ವರರಿಗೆ ಗುಡ್ ನ್ಯೂಸ್ : ಇನ್ಮುಂದೆ ಆನ್‌ಲೈನ್‌ನಲ್ಲಿ ವಿವಾಹ ನೋಂದಣಿ

ಇದನ್ನೂ ಓದಿ : Karnataka Budget 2023 : ಕನಕಪುರಕ್ಕೆ ಮೆಡಿಕಲ್‌ ಕಾಲೇಜು ಘೋಷಣೆ : ಕೊಟ್ಟ ಮಾತು ಉಳಿಸಿಕೊಂಡ ಡಿಸಿಎಂ ಡಿಕೆ ಶಿವಕುಮಾರ್‌

ಇನ್ನು ಮೀನುಗಾರರ ಸೀಮೆಎಣ್ಣೆ ದೋಣಿಗಳ ಇಂಜಿನ್‌ಗಳನ್ನು ಡಿಸೇಲ್‌ ಹಾಗೂ ಪೆಟ್ರೋಲ್‌ ಇಂಜಿನ್‌ ಆಗಿ ಪರಿವರ್ತಿಸಲು 50 ಸಾವಿರ ರೂಪಾಯಿ ಸಹಾಯಧನ ನೀಡುವುದಾಗಿ ಘೋಷಣೆ ಮಾಡಲಾಗಿದೆ. ಕಾಟ್ಲಾ, ರೌ ಮೀನುಗಳ ಮರಿಗಳ ಉತ್ಪಾದನೆಯನ್ನು ಹೆಚ್ಚಳ ಮಾಡುವುದರ ಜೊತೆಗೆ ಒಳನಾಡು ಮೀನುಗಾರಿಕಾ ಅಭಿವೃದ್ದಿಗೆ ಯೋಜನೆ ರೂಪಿಸಲಾಗಿದೆ. ಇನ್ನು ಸಿಗಡಿ ಕೃಷಿಗೆ ಉತ್ತಮ ಮಾರುಕಟ್ಟೆ ಒದಗಿಸಲಾಗುತ್ತದೆ. ಅಲ್ಲದೇ ಶೈತ್ಯಾಗಾರಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಆರಂಭಿಸಲು ಯೋಜನೆಯನ್ನು ರೂಪಿಸಲಾಗಿದೆ ಎಂದು ಘೋಷಣೆ ಮಾಡಿದ್ದಾರೆ.

Karnataka Budget 2023: What did the coast get in Siddaramaiah’s budget?

Comments are closed.