7th pay commission : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ 2024-25ನೇ ಸಾಲಿನ ಬಜೆಟ್ (Karnataka Budget 2024) ಮಂಡನೆ ಮಾಡಿದ್ದಾರೆ. ಬಜೆಟ್‌ನಲ್ಲಿ ಸರಕಾರಿ ನೌಕರರಿಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಸರಕಾರ 7ನೇ ವೇತನ ಆಯೋಗದ ವರದಿ ಸ್ವೀಕರಿಸಿದ ನಂತರ ಜಾರಿಗೆ ತರುವುದಾಗಿ ಘೋಷಣೆ ಮಾಡಿದ್ದಾರೆ.
ಬಜೆಟ್ ಮಂಡನೆ ಮಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ವೇತನ ಆಯೋಗವನ್ನು ರಚಿಸಲಾಗಿದ್ದು, ಆಯೋಗದ ವರದಿ ಸ್ವೀಕರಿಸಿದ ನಂತರ ಪರಿಶೀಲಿಸಿ ಕ್ರಮವಹಿಸಲಾಗುವುದು ಎಂದಿದ್ದಾರೆ. ಈ ಮೂಲಕ ಸರಕಾರಿ ನೌಕರರ ಬಹುದಿನಗಳ ಕನಸು ಶೀಘ್ರದಲ್ಲೇ ನನಸಾಗಲಿದೆ.

ಬಜೆಟ್ ಅಧಿವೇಶನಕ್ಕೂ ಮುನ್ನ ಹಣಕಾಸು ಸಚಿವರಾಗಿರುವ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ 7ನೇ ವೇತನ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಭೇಟಿಯಾಗಿದ್ದರು. ಈ ವೇಳೆಯಲ್ಲಿ ವೇತನ ಆಯೋಗದಿಂದ ಮಾಹಿತಿಯನ್ನು ಪಡೆದುಕೊಂಡಿದ್ದರು ಎನ್ನಲಾಗಿತ್ತು. ಇದೀಗ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆಯ ಹಣ ಪಡೆಯೋಕೆ ಇನ್ಮುಂದೆ ಈ ಕೆಲಸ ಮಾಡುವುದು ಕಡ್ಡಾಯ
ಕೆ.ಸುಧಾಕರ್ ಅವರ ನೇತೃತ್ವದಲ್ಲಿ 7ನೇ ವೇತನ ಆಯೋಗ ರಚನೆ ಮಾಡಲಾಗಿದ್ದು, ಆಯೋಗದ ಅವಧಿಯು 2023ರ ನವೆಂಬರ್‌ನಲ್ಲಿಯೇ ಕೊನೆಗೊಂಡಿತ್ತು. ತದನಂತರದಲ್ಲಿ ಆಯೋಗದ ಅವಧಿಯಲ್ಲಿ ವಿಸ್ತರಣೆ ಮಾಡಲಾಗಿತ್ತು. ಮಾರ್ಚ್ 15 2024 ವರೆಗೆ ಆಯೋಗದ ಅವಧಿ ವಿಸ್ತರಿಸಲಾಗಿದ್ದು, ಕೆಲವೇ ದಿನಗಳಲ್ಲಿ ಆಯೋಗ ವರದಿಯನ್ನು ಪ್ರಕಟಿಸಬೇಕಾಗಿದೆ.
ಇದನ್ನೂ ಓದಿ : 10,000 ರೂ. ಹೂಡಿಕೆ ಮಾಡಿದ್ರೆ ಸಿಗುತ್ತೆ 4.4 ಲಕ್ಷ ರೂ. : ಅಂಚೆ ಇಲಾಖೆಯಿಂದ ಹೊಸ ಯೋಜನೆ
ಲೋಕಸಭಾ ಚುನಾವಣೆ ಎದುರಾಗುವ ಹಿನ್ನೆಲೆಯಲ್ಲಿ ಅವಧಿ ಮುಕ್ತಾಯಕ್ಕೂ ಮೊದಲೇ 7 ನೇ ಆಯೋಗದ ವರದಿಯನ್ನು ಸರಕಾರಕ್ಕೆ ಸಲ್ಲಿಸುವ ಸಾಧ್ಯತೆಯಿದೆ. ಒಂದೊಮ್ಮೆ ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಆಯೋಗದ ವರದಿಯನ್ನು ಸಲ್ಲಿಸಲು ಸಾಧ್ಯವಿಲ್ಲ. ಇದೇ ಕಾರಣದಿಂದಲೇ ಮುಂದಿನ ತಿಂಗಳಿನಲ್ಲಿಯೇ ಸರಕಾರಿ ನೌಕರರಿಗೆ ಗುಡ್‌ನ್ಯೂಸ್ ಸಿಗುವ ಸಾಧ್ಯತೆಯಿದೆ.

ಇದನ್ನೂ ಓದಿ : 10ನೇ ತರಗತಿ ಉತ್ತೀರ್ಣರಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ : 98,083 ಹುದ್ದೆಗಳಿಗೆ ಅರ್ಜಿ ಆಹ್ವಾನ
ಖಾಲಿ ಹುದ್ದೆ ಶೀಘ್ರದಲ್ಲೇ ಭರ್ತಿ :
ಕರ್ನಾಟಕ ಸರಕಾರದ 43 ಇಲಾಖೆಗಳಿಗೆ ಒಟ್ಟು 7,72,025 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ ಕೇವಲ 5,16,೧105 ಹುದ್ದೆಗಳು ಮಾತ್ರವೇ ಭರ್ತಿಯಾಗಿವೆ. ಉಳಿದಂತೆ 2,55,920 ಹುದ್ದೆಗಳು ಖಾಲಿ ಉಳಿದಿವೆ. ಖಾಲಿ ಉಳಿದಿರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಈ ಹಿಂದೆಯೇ ಮಹತ್ವದ ಸುದ್ದಿಯನ್ನು ನೀಡಿದ್ದರು. ಈ ಹಿಂದೆ ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಸಿಎಂ ಐದು ಗ್ಯಾರಂಟಿ ನೀಡುತ್ತಿದ್ದೇವೆ. ವೇತನ ಆಯೋಗದವರು ಸಮಯ ಕೇಳಿದ್ದು, ವರದಿ ಬಂದ ನಂತರ ಮಂಜೂರು ಮಾಡುವುದಾಗಿ ತಿಳಿಸಿದ್ದರು.
Karnataka Budget 2024 7th pay commission Karnataka CM Siddaramaiah Give Good news for Government Employee