ಭಾನುವಾರ, ಏಪ್ರಿಲ್ 27, 2025
HomekarnatakaAnti Conversion Bill : ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾನೂನು ಜಾರಿ : ಕಾಯಿದೆಯಲ್ಲಿ ಏನಿದೆ...

Anti Conversion Bill : ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾನೂನು ಜಾರಿ : ಕಾಯಿದೆಯಲ್ಲಿ ಏನಿದೆ ಗೊತ್ತಾ

- Advertisement -

ಬೆಂಗಳೂರು : ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ, ಗದ್ದಲದ ನಡುವೆಯೂ ಮತಾಂತರ ನಿಷೇಧ ಮಸೂದೆಯನ್ನು (Anti Conversion Bill) ಮಂಡಿಸಲಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ತೀವ್ರ ವಿರೋಧದ ವ್ಯಕ್ತಪಡಿಸಿವೆ. ಆದರೆ ಗೃಹ ಸಚಿವ ಅರಗ ಜ್ಞಾನೇಂದ್ರ ವಿಧೇಯಕವನ್ನು ಮಂಡಿಸಿದ್ದು ನಾಳೆ ವಿಧೇಯಕದ ಕುರಿತು ವಿಸ್ತೃತ ಚರ್ಚೆ ನಡೆಯಲಿದೆ. ವಿಧೇಯಕ ಯಾವೆಲ್ಲ ಅಂಶಗಳನ್ನು ಒಳಗೊಂಡಿದೆ ಎಂಬುದನ್ನು ಗಮನಿಸೋದಾದರೇ,

ಮತಾಂತರ ನಿಷೇಧ ವಿಧೇಯಕದಲ್ಲಿ ಇರುವ ಪ್ರಮುಖ ಅಂಶಗಳೇನು?

  • ಬಲವಂತ, ವಂಚನೆ, ಒತ್ತಾಯ ಹಾಗೂ ಆಮಿಷದ ಮೂಲಕ ನಡೆಸುವ ಮತಾಂತರ ಹಾಗೂ ಮದುವೆಯಾಗುವ ಭರವಸೆಯ ಮೂಲಕ ನಡೆಸುವ ಮತಾಂತರಕ್ಕೆ ನಿಷೇಧವಿದೆ.‌
  • ವ್ಯಕ್ತಿಯು ಆತನ ನಿಕಟ ಪೂರ್ವ ಧರ್ಮಕ್ಕೆ ಮರು ಮತಾಂತರಗೊಂಡರೆ ಅದನ್ನು ಈ ಅಧಿನಿಯಮದ ಅಡಿಯಲ್ಲಿ ಮತಾಂತರವೆಂದು ಪರಿಗಣಿಸಲಾಗುವುದಿಲ್ಲ
  • ಮತಾಂತರಗೊಂಡ ವ್ಯಕ್ತಿಯ ಪೋಷಕರು, ಸಹೋದರ, ಸಹೋದರಿ, ಸಹವರ್ತಿ ಅಥವಾ ಸಹೋದ್ಯೋಗಿಗಳಿಗೂ ಮತಾಂತರದ ಬಗ್ಗೆ ದೂರನ್ನು ನೀಡಿದರೆ ಎಫ್ ಐಆರ್ ದಾಖಲಿಸುವ ಅವಕಾಶವಿದೆ.
  • ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ಇಪ್ಪತ್ತೈದು ಸಾವಿರ ರೂಪಾಯಿಗಳ ದಂಡ‌ ವಸೂಲಾತಿಗೆ ಅವಕಾಶವಿದೆ.
  • ಅಪ್ರಾಪ್ತ ವ್ಯಕ್ತಿ, ಮಹಿಳೆ, ಎಸ್ ಸಿ, ಎಸ್ ಟಿ ಸೇರಿದ ವ್ಯಕ್ತಿಯ ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಹತ್ತು ವರ್ಷಗಳ ವರೆಗೆ ಜೈಲು ಶಿಕ್ಷೆಗೆ ಕಾಯ್ದೆಯಲ್ಲಿ ಅವಕಾಶವಿದೆ. ಅಷ್ಟೇ ಅಲ್ಲದೆ 50 ಸಾವಿರ ದಂಡ ವಸೂಲಿಗೂ ಅವಕಾಶವಿದೆ.
  • ಮತಾಂತರಕ್ಕೆ ಬಲಿಯಾದವರಿಗೆ ಆಪಾದಿತನಿಂದ ಸಂದಾಯವಾಗುವಂತೆ ಗರಿಷ್ಠ ಐದು ಲಕ್ಷ ರೂಪಾಯಿ ಪರಿಹಾರ ಕೊಡಿಸಲು ಅವಕಾಶ ಕಲ್ಪಿಸಲಾಗಿದೆ.
  • ಅಪರಾಧ ಪುನರಾವರ್ತನೆ ಆದಲ್ಲಿ ಐದು ವರ್ಷ ಜೈಲು ಶಿಕ್ಷೆ ಹಾಗೂ ಎರಡು ಲಕ್ಷ ದಂಡ ವಸೂಲಿಗೂ ಅವಕಾಶವಿದೆ.
  • ಮತಾಂತರದ ಉದ್ದೇಶದ ಆದ ಮದುವೆಯನ್ನು ಅಸಿಂಧುವೆಂದು ಘೋಷಿಸಲು ನ್ಯಾಯಾಲಯಕ್ಕೆ ಅವಕಾಶ ನೀಡಲಾಗಿದೆ.

ಮತಾಂತರ ಆಗಬೇಕಾದಲ್ಲಿ ಪಾಲಿಸಬೇಕಿದೆ ನಿಯಮಾವಳಿಗಳು!

  • ಮತಾಂತರವಾಗಲು‌ ಮುಂದಾಗಿರುವ ವ್ಯಕ್ತಿ ಕನಿಷ್ಠ ಆರವತ್ತು ದಿನಗಳ ಮೊದಲು ಜಿಲ್ಲಾ ದಂಡಾಧಿಕಾರಿಗೆ ಈ ಬಗ್ಗೆ ತಿಳಿಸಬೇಕು.
  • ಮತಾಂತರ ಮಾಡುವ ವ್ಯಕ್ತಿಯೂ ಈ ಬಗ್ಗೆ ಜಿಲ್ಲಾ ದಂಡಾಧಿಕಾರಿಗೆ ಮೂವತ್ತು ದಿನಗಳ ಮೊದಲೇ ಈ ಬಗ್ಗೆ ಮಾಹಿತಿ ಕೊಡಬೇಕು.
  • ಈ ಮಾಹಿತಿಯನ್ನು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು. ಇದಕ್ಕೆ30 ದಿನಗಳ ಒಳಗಾಗಿ ಆಕ್ಷೇಪನೆ ಬಂದರೆ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿಚಾರಣೆ ನಡೆಸಲು ಅವಕಾಶ ಇದೆ.
  • ವಿಚಾರಣೆಯ ಸಂದರ್ಭದಲ್ಲಿ ತಪ್ಪು ಕಂಡುಬಂದಲ್ಲಿ ಕ್ರಿಮಿನಲ್‌ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲು ಅವಕಾಶವಿದೆ.
  • ಮತಾಂತರಗೊಂಡ ವ್ಯಕ್ತಿಯೂ ಮತಾಂತರಗೊಂಡ ದಿನಾಂಕದಿಂದ‌ ಹಿಡಿದು ಮೂಲ ಧರ್ಮ, ಮತಾಂತರಗೊಂಡ ಧರ್ಮ ಹಾಗೂ ಇನ್ನಿತರ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ನೀಡಬೇಕು.
  • ಅಪರಾಧಕ್ಕೆ ನೆರವು ಹಾಗೂ ದುಷ್ಪ್ರೇರಣೆ ನೀಡಿ ವ್ಯಕ್ತಿಯನ್ನು ಆರೋಪಿಯನ್ನಾಗಿ ಪರಿಗಣಿಸುವ ಅವಕಾಶವೂ ಇದೆ.

ಮತಾಂತರ ಮಾಡುವ ವ್ಯಕ್ತಿಯೂ ಈ ಬಗ್ಗೆ ಜಿಲ್ಲಾ ದಂಡಾಧಿಕಾರಿಗೆ ಮೂವತ್ತು ದಿನಗಳ ಮೊದಲೇ ಈ ಬಗ್ಗೆ ಮಾಹಿತಿ ಕೊಡಬೇಕು.

  • ಈ ಮಾಹಿತಿಯನ್ನು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು. ಇದಕ್ಕೆ30 ದಿನಗಳ ಒಳಗಾಗಿ ಆಕ್ಷೇಪಣೆ ಬಂದರೆ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿಚಾರಣೆ ನಡೆಸಬೇಕು.
  • ವಿಚಾರಣೆಯ ಸಂದರ್ಭದಲ್ಲಿ ತಪ್ಪು ಕಂಡುಬಂದಲ್ಲಿ ಜಿಲ್ಲಾ ದಂಡಾಧಿಕಾರಿ ಕ್ರಿಮಿನಲ್‌ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲು ಅವಕಾಶವಿದೆ.

ಇದನ್ನೂ ಓದಿ : Panama Papers : ಏನಿದು ಪನಾಮ ಪೇಪರ್ಸ್ ಲೀಕ್​? ಇದರಲ್ಲಿ ಐಶ್ವರ್ಯಾ ರೈ ಹೆಸರು ಸಿಲುಕಿದ್ದೇಗೆ? ಇಲ್ಲಿದೆ ಮಾಹಿತಿ

ಇದನ್ನೂ ಓದಿ : New Year 2022 : ಹೊಸ ವರ್ಷಾಚರಣೆ ಡಿಜೆ ಪಾರ್ಟಿಗೆ ಬ್ರೇಕ್‌ : ಸಿಎಂ ಬಸವರಾಜ್‌ ಬೊಮ್ಮಾಯಿ

(Karnataka cabinet Congregation anti-conversion bill : Do You know what’s in the act)

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular