CM Corona Negative : ಕೊರೊನಾದಿಂದ ಗುಣಮುಖರಾದ ಸಿಎಂ ಬೊಮ್ಮಾಯಿ : ಕೋವಿಡ್‌ ತುರ್ತು ಸಭೆ ಆರಂಭ

ಬೆಂಗಳೂರು : ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇಂದು ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್‌ಗೆ ಒಳಗಾಗಿದ್ದು, ನೆಗೆಟಿವ್‌ ವರದಿ ಬಂದಿದೆ. ಇದರ ಬೆನ್ನಲ್ಲೇ ಸಿಎಂ ಬಸವರಾಜ್‌ ಬೊಮ್ಮಾಯಿ (CM Corona Negative) ಅವರು ಕೋವಿಡ್‌ ತುರ್ತು ಸಭೆಯಲ್ಲಿ ಭಾಗಿಯಾಗಿದ್ದಾರೆ.

ಕೊರೊನಾ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಕಳೆದ ಒಂದು ವಾರದಿಂದಲೂ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದರು. ಆರಂಭದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಬೊಮ್ಮಾಯಿ ಅವರು ಬಿಡುಗಡೆಗೊಂಡು ಮನೆಯಿಂದಲೇ ಕಾರ್ಯನಿರ್ವಹಿಸುತ್ತಿದ್ದರು. ಒಂದು ವಾರದ ನಂತರ ಕೋವಿಡ್‌ ಟೆಸ್ಟ್‌ಗೆ ಸಿಎಂ ಒಳಗಾಗಿದ್ದು, ಇದೀಗ ಕೋವಿಡ್‌ ವರದಿ ನೆಗೆಟಿವ್‌ ಬಂದಿದೆ.

ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಇಂದು ತಮ್ಮ ಆರ್.‌ಟಿ.ನಗರದ ತಮ್ಮ ಮನೆಯಿಂದಲೇ ವರ್ಚುವಲ್‌ ಮೀಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ. ಸಿಎಂ ಮನೆಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್‌ ಅವರು ಭಾಗಿಯಾಗಿದ್ದಾರೆ. ಉಳಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ, ಕಂದಾಯ ಸಚಿವ ಆರ್.‌ ಅಶೋಕ್‌, ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಸೇರಿದಂತೆ ಕೋವಿಡ್‌ ತಜ್ಞರು, ಅಧಿಕಾರಿಗಳು ಕೂಡ ವರ್ಚುವಲ್‌ ಮೀಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಯಾವೆಲ್ಲಾ ನಿಯಮಗಳನ್ನು ಕೈಗೊಳ್ಳಬಹುದು ಅನ್ನುವ ಕುರಿತು ಅಧಿಕಾರಿಗಳಿಂದ ಮಾಹಿತಿಯನ್ನು ಪಡೆಯಲಿದ್ದಾರೆ. ನಂತರದಲ್ಲಿ ರಾಜ್ಯ ಸರಕಾರ ಯಾವ ಕ್ರಮಗಳನ್ನು ಕೈಗೊಳ್ಳಬಹುದು ಅನ್ನುವ ಕುರಿತು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಫೆಬ್ರವರಿ ತಿಂಗಳಲ್ಲಿ ಸೋಂಕಿನ ಪ್ರಮಾಣ ಭಾರೀ ಏರಿಕೆಯಾಗುವ ಸಾಧ್ಯತೆಯಿದೆ. ಈ ಹಿಂದೆ ತಜ್ಞರು ರಾಜ್ಯದಲ್ಲಿ ಕೋವಿಡ್‌ ಪಾಸಿಟಿವಿಟಿ ದರ ಐದಕ್ಕಿಂತ ಹೆಚ್ಚಳವಾದ್ರೆ ಕಡ್ಡಾಯವಾಗಿ ಲಾಕ್‌ಡೌನ್‌ ಜಾರಿ ಮಾಡುವಂತೆ ಸಲಹೆಯನ್ನು ನೀಡಿದ್ದರು. ಆದರೆ ಸೋಂಕಿನ ಪ್ರಮಾಣ ಶೇ.೩ಕ್ಕಿಂತ ಅಧಿಕವಾಗುತ್ತಿದ್ದಂತೆಯೇ ರಾಜ್ಯ ಸರಕಾರ ಹಲವು ನಿರ್ಬಂಧವನ್ನು ಹೇರಲಾಗಿದೆ. ಈ ಹಿನ್ನೆಲೆಯಲ್ಲಿಯಲ್ಲಿ ಇಂದಿನ ಸಭೆ ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ.

ದಿನ ಕಳೆಯುತ್ತಿದ್ದಂತೆಯೇ ರಾಜ್ಯದಲ್ಲಿ ಕೋವಿಡ್‌ ವೈರಸ್‌ ಸೋಂಕಿನ ಪ್ರಮಾಣ ಏರಿಕೆಯನ್ನು ಕಾಣುತ್ತಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ಆರು ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳನ್ನು ಬಂದ್‌ ಮಾಡಿ ಆದೇಶ ಹೊರಡಿಸಲಾಗಿದೆ. ಆದರೆ ಜಿಲ್ಲೆಗಳಲ್ಲಿ ಕೋವಿಡ್‌ ವೈರಸ್‌ ಸೋಂಕಿನ ಪ್ರಮಾಣ ಏರಿಕೆಯಾಗಿದೆ. ಹೀಗಾಗಿ ರಾಜ್ಯದಾದ್ಯಂತ ಶಾಲೆಯನ್ನು ಬಂದ್‌ ಮಾಡುವ ನಿರ್ಧಾರವನ್ನು ರಾಜ್ಯ ಸರಕಾರ ಕೈಗೊಳ್ಳಲಿದೆಯಾ ಅನ್ನೋದನ್ನು ಕಾದು ನೋಡಬೇಕಾಗಿದೆ. ವೀಕೆಂಡ್‌ ಕರ್ಪ್ಯೂ, ನೈಟ್‌ ಕರ್ಪ್ಯೂ ವಿರುದ್ದ ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ : 15ರಿಂದ 18 ವರ್ಷ ಪ್ರಾಯದ ವಿದ್ಯಾರ್ಥಿಗಳ ಲಸಿಕೆ ಅಭಿಯಾನದಲ್ಲಿ ತಮಿಳುನಾಡು ಸಾಧನೆ

ಇದನ್ನೂ ಓದಿ : New Covid-19 cases : ದೇಶದಲ್ಲಿ ಒಂದೇ ದಿನ 2.58 ಲಕ್ಷ ಕೊರೊನಾ ಪ್ರಕರಣಗಳು ಧೃಡ

(CM Basavaraj Bommai Corona Negative, emergency meeting start )

Comments are closed.