Mekedatu Project : ತಮಿಳುನಾಡು ವಿರುದ್ಧ ಕರ್ನಾಟಕ ಗರಂ : ಮೇಕೆದಾಟು ಜಾರಿ ಸಿದ್ಧ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು : ತಮಿಳುನಾಡು ವಿಧಾನಸಭೆಯಲ್ಲಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಯೋಜನೆ (Mekedatu Project ) ಜಾರಿ ವಿರುದ್ಧ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ತಮಿಳು ನಾಡು ಸರ್ಕಾರದ ಈ ನಿರ್ಣಯಕ್ಕೆ ಕರ್ನಾಟದಕ‌ ಸಿಎಂ ಸೇರಿದಂತೆ ಪಕ್ಷಾತೀತವಾಗಿ ಎಲ್ಲ ನಾಯಕರಿಂದ ವಿರೋಧ ಹಾಗೂ ಖಂಡನೆ ವ್ಯಕ್ತವಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಮೇಕೆದಾಟು ಯೋಜನೆಗೆ ಈಗಾಗಲೇ ಅನುದಾನ ನಿಗದಿ ಪಡಿಸಿದೆ. ಆದ್ರೆ ಕರ್ನಾಟಕ ಸರ್ಕಾರವು ಬಜೆಟ್ ಅನುದಾನ ಮೀಸಲಿರಿಸಿದೆ. ಇದಕ್ಕೆ ತಮಿಳುನಾಡು ಸರ್ಕಾರದ ಅನುಮತಿ ಪಡೆದಿಲ್ಲ. ಹೀಗಾಗಿ ಈ ಯೋಜನೆಗೆ ತಮಿಳುನಾಡು ವಿಧಾನಸಭೆಯಲ್ಲಿ ವಿರೋಧ ವ್ಯಕ್ತವಾಗಿದ್ದು, ನಿರ್ಣಯವನ್ನು ಅಂಗೀಕರಿಸಲಾಗಿದೆ.

ಇನ್ನು ಕರ್ನಾಟಕದ ಈ ನಿರ್ಣಯ ಹಾಗೂ ತಮಿಳುನಾಡು ಸರ್ಕಾರದ ಅಗ್ರಹದ ಕುರಿತು ಮಾತನಾಡಿದ ತಮಿಳುನಾಡು ಸರ್ಕಾರದ ಸಚಿವ ದೊರೈ ಮುರುಗನ್, ಕರ್ನಾಟಕ ಸರ್ಕಾರದ ಬೇಡಿಕೆಗೆ ಮಾನ್ಯತೆ ನೀಡದಿರಲು ಹಾಗೂ ಮೇಕೆದಾಟು ಆಣೆಕಟ್ಟು ನಿರ್ಮಿಸಲು ಅನುಮತಿ ನೀಡದಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಇನ್ನು ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ವಿರುದ್ಧ ನಿರ್ಣಯ ಮಂಡಿಸಿದಾಗ ಎಐಎಡಿಎಂಕೆ ಬಿಜೆಪಿ ಸೇರಿದಂತೆ ಎಲ್ಲ ಪಕ್ಷದ ಸದಸ್ಯರು ಪಕ್ಷ ಬೇಧ ಮರೆತು ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಈ ಬೆಳವಣಿಗೆಗೆ ಕರ್ನಾಟಕದಲ್ಲಿ ಆಕ್ರೋಶ ವ್ಯಕ್ತವಾಗಿದೆ. ತಮಿಳುನಾಡು ಸರ್ಕಾರದ ನಿರ್ಣಯ ಕಾನೂನು ಬಾಹಿರ ಎಂದು ಸಿಎಂ ಬೊಮ್ಮಾಯಿ ಟ್ವಿಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ರಾಜ್ಯ ಇನ್ನೊಂದು ರಾಜ್ಯದ ಹಕ್ಕನ್ನು ಆಕ್ರಮಿಸಿಕೊಳ್ಳುವಂತಹ ಜನ ವಿರೋಧಿ ನಿರ್ಣಯವಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ತಮಿಳುನಾಡಿಗೆ ನಂಬಿಕೆ ಇಲ್ಲದ ನಿರ್ಣಯ ಇದಾಗಿದೆ. ಈ ನಿರ್ಣಯ ವನ್ನು ಸಮಸ್ತ ಕರ್ನಾಟಕದ ಜನತೆ ಹಾಗೂ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಮೇಕೆದಾಟು ಯೋಜನೆ ಜಾರಿಗೆ ನಮ್ಮ ನಿರ್ಧಾರ ಅಚಲವಾಗಿದೆ. ಮೇಕೆದಾಟು ಯೋಜನೆ ರಾಜ್ಯದಲ್ಲಿ ಹುಟ್ಟುವ ಕಾವೇರಿ ನದಿಗೆ ಸಂಬಂಧಿಸಿದ್ದಾಗಿದೆ.

ಕಾವೇರಿ ನ್ಯಾಯಾಧೀಕರಣ ಅನ್ವಯ ತಮಿಳುನಾಡಿಗೆ 177.25 ಟಿಎಂಸಿ ನೀರನ್ನು ಕೊಟ್ಟ ನಂತರ ಉಳಿದ ನೀರಿನ ಮೇಲೆ ಕರ್ನಾಟಕದ ಹಕ್ಕು ಇದೆ. ತಮಿಳುನಾಡಿನ ಈ ರಾಜಕೀಯ ನಿರ್ಧಾರವನ್ನು ಲೆಕ್ಕಿಸದೆ ಮೇಕೆದಾಟು ಯೋಜನೆಯನ್ನು (Mekedatu Project) ಕೈಗೆತ್ತಿಕೊಳ್ಳಲು ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಭರವಸೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಯೋಜನೆ ಜಾರಿ ಬಗ್ಗೆ ತಿಳಿಸಿರುವ ಸಿಎಂ ಬೊಮ್ಮಾಯಿ ತಮಿಳುನಾಡಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇವಲ ಸಿಎಂ ಬೊಮ್ಮಾಯಿ ಮಾತ್ರವಲ್ಲ ಕಾಂಗ್ರೆಸ್ ನಾಯಕರಾದ ಎಚ್.ಕೆ.ಪಾಟೀಲ್ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : KGF Chapter 2 : 10 ಗಂಟೆಯಲ್ಲಿ ಕೋಟಿ ವೀಕ್ಷಣೆ : ಕೆಜಿಎಫ್-2 ಸಾಂಗ್ ಹೊಸ ದಾಖಲೆ

ಇದನ್ನೂ ಓದಿ : ACB Raid : ಬಿಡಿಎ ಭ್ರಷ್ಟಾಚಾರ : ಬೆಳ್ಳಂಬೆಳಗ್ಗೆ ಬೆಂಗಳೂರಿನ 9 ಕಡೆ ಎಸಿಬಿ ದಾಳಿ

(Karnataka CM Basavaraj Bommai Outrage Tamil Naadu for Mekedatu Project )

Comments are closed.