Bitcoin : ಬಿಟ್‌ ಕಾಯಿನ್‌ ಹಗರಣ : ಪ್ರಿಯಾಂಕ ಖರ್ಗೆ ಹೇಳಿಗೆಕೆ ಪ್ರತಿಕ್ರಿಯಿಸಲಾರೆ ಎಂದ ಸಿಎಂ ಬೊಮ್ಮಾಯಿ

ನವದೆಹಲಿ : ರಾಜ್ಯದಲ್ಲೀಗ ಬಿಟ್‌ ಕಾಯಿನ್‌ ( Bitcoin ) ಹಗರಣ ಭಾರೀ ಸದ್ದು ಮಾಡುತ್ತಿದೆ. ಬಿಟ್‌ ಕಾಯಿನ್‌ ಹಗರಣದಿಂದಲೇ ರಾಜ್ಯದಲ್ಲಿ ಸಿಎಂ ಬದಲಾಗ್ತಾರೆ ಅನ್ನುವ ಕುರಿತು ಕಾಂಗ್ರೆಸ್‌ ಶಾಸಕ ಪ್ರಿಯಾಂಕ ಖರ್ಗೆ ಹೇಳಿಕೆ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಗರಂ ಆಗಿದ್ದಾರೆ. ಬಿಟ್ ಕಾಯಿನ್ ( Bitcoin ) ಹಗರಣದಲ್ಲಿ ಕಾಂಗ್ರೆಸ್ ನಾಯಕರೂ ಇದ್ದಾರೆ ಎಂದು ಹೇಳುವ ಮೂಲಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ ಎಂದಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಟ್‌ ಕಾಯಿನ್‌ ಹಗರಣದಲ್ಲಿ ಕಾಂಗ್ರೆಸ್‌ ನಾಯಕರಿದ್ದಾರೆ. ಪ್ರಿಯಾಂಕ ಖರ್ಗೆ ಅವರ ಹೇಳಿಕೆಯ ಕುರಿತು ಪ್ರತಿಕ್ರಿಯಿಸುವಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ತಾನು ಯಾವುದೇ ಹೇಳಿಕೆಯನ್ನೂ ನೀಡುವುದಿಲ್ಲ ಎಂದಿದ್ದಾರೆ. ಅಲ್ಲದೇ ಪ್ರಿಯಾಂಕ ಖರ್ಗೆ ಅವರ ವಿರುದ್ದ ಗರಂ ಆಗಿದ್ದಾರೆ.

ಈ ಮೊದಲು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ಶಾಸಕ ಪ್ರಿಯಾಂಕ ಖರ್ಗೆ, ರಾಜ್ಯದಲ್ಲಿ ಬಿಟ್ ಕಾಯಿನ್ ( Bitcoin ), ಕರೆನ್ಸಿ ಸೇರಿದಂತೆ ಹಲವು ಅಕ್ರಮ ದಂಧೆಗಳು ಬಿಂದಾಸಾಗಿ ನಡೆಯುತ್ತಿವೆ. ಇದರಲ್ಲಿ ಸಾವಿರಾರು ಕೋಟಿ ರೂಪಾಯಿಯ ವ್ಯವಹಾರ ಈಗಾಗಲೇ ಆಗಿದೆ. ಅಧಿಕಾರಿಗಳು ಹಾಗೂ ಪ್ರಭಾವಿ ನಾಯಕರು ಸಪೋರ್ಟ್ ನಿಂದ ನಡೆಯುತ್ತಿದೆ ಎಂದಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರದರ್ಶಕ ತನಿಖೆ ನಡೆಸಿದರೆ ಈ ಹಗರಣದಲ್ಲಿ ಯಾರು ಭಾಗವಹಿಸಿದ್ದಾರೆ ಎನ್ನುವುದು ಒಂದೇ ಒಂದು ತಿಂಗಳಲ್ಲಿ ಹೊರಬರಲಿದೆ ಎಂದಿದ್ದಾರೆ.

ರಾಜ್ಯದಲ್ಲಿ ಬಿಟ್‌ ಕಾಯಿನ್‌ ಹಗರಣದಿಂದಾಗಿ ಸಿಎಂ ಸ್ಥಾನಕ್ಕೆ ಕುತ್ತು ಬರಲಿದೆ. ಈ ಹಗರಣದಲ್ಲಿ ಕಾಂಗ್ರೆಸ್, ಬಿಜೆಪಿ ಯಾವುದೇ ನಾಯಕರು ಇರಲಿ ಮೊದಲು ತನಿಖೆ ನಡೆಸಿ ಕ್ರಮ ಜರುಗಿಸಬೇಕಾಗಿದೆ. ಆದರೆ ಪ್ರಮುಖ ಆರೋಪಿ ಶ್ರೀಕಿಯನ್ನು ವಿಚಾರಣೆಗೆ ಬಿಡುತ್ತಿಲ್ಲ, ಆತನನ್ನು 10 ದಿನ ವಿಚಾರಣೆ ನಡೆಸಿದರೆ ಈ ಹಗರಣ ಸಂಪೂರ್ಣ ಹೊರಬರುತ್ತದೆ ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಬಿಟ್ ಕಾಯಿನ್ ಪ್ರಕರಣ ಸಿಎಂ ಬಲಿ ಪಡೆಯುತ್ತೆ : ಪ್ರಿಯಾಂಕ್ ಖರ್ಗೆ

ಇದನ್ನೂ ಓದಿ : ರಸ್ತೆ ಮಧ್ಯದಲ್ಲಿ ಹೊತ್ತಿ ಉರಿದ ಬಸ್‌ : 12 ಪ್ರಯಾಣಿಕರು ಸಜೀವ ದಹನ

(Karnataka CM Basavaraj Bommai Reaction About Bitcoin case )

Comments are closed.