ಬೆಂಗಳೂರು : ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ (BJP -JDS Alliance) ಇದೀಗ ಮಹತ್ವದ ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗಿದೆ. ಬಿಜೆಪಿ ಜೊತೆ ಮೈತ್ರಿಯಿಂದ ಜೆಡಿಎಸ್ ಜೊತೆಗೆ ಮುನಿಸಿಕೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಇದೀಗ ಮಾಜಿಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರನ್ನೇ ಪಕ್ಷದಿಂದ ಉಚ್ಚಾಟಿಸಿದ್ದಾರೆ.
ಸದ್ಯ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಸಹಿ ಹಾಕಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ಬಾರೀ ವೈರಲ್ ಆಗಿದೆ. ಪತ್ರದಲ್ಲಿ ಜೆಡಿಎಸ್ ಪಕ್ಷವು ದಶಗಳಿಂದಲೂ ಜಾತ್ಯಾತೀಯ ಸಿದ್ದಾಂತವನ್ನು ಪಾಲಿಸುತ್ತಾ ಬಂದಿದೆ. ನಮ್ಮ ಪಕ್ಷದಲ್ಲಿ ಎಲ್ಲಾ ಜಾತಿ, ಧರ್ಮಗಳ ನಾಯಕರು, ಕಾರ್ಯಕರ್ತರು ಪಕ್ಷಕ್ಕಾಗಿ ದುಡಿದಿದ್ದಾರೆ.

ಆದರೆ ಇತ್ತೀಚೆಗೆ ಜೆಡಿಎಸ್ ಶಾಸಕಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಮೈತ್ರಿಯಾಗಿರುವುದು ಕಂಡು ಬಂದಿದೆ.
ಇದನ್ನೂ ಓದಿ : ಕರ್ನಾಟಕದ ಮಾಜಿ ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು
ಈ ತತ್ ಕ್ಷಣದಿಂದ ಎಚ್‌ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದಿಂ ಉಚ್ಚಾಟಿಸಲು ತೀರ್ಮಾನಿಸಲಾಗಿದೆ ಎಂದು ಪತ್ರವಲ್ಲಿ ಉಲ್ಲೇಖಿಸಲಾಗಿದೆ. ಪತ್ರವು ಸಿಎಂ ಇಬ್ರಾಹಿಂ ಅವರ ಲೆಟರ್ ಹೆಡ್ ಹಾಗೂ ಅವರ ಸಹಿಯನ್ನು ಒಳಗೊಂಡಿದೆ.

ಎಚ್‌ಡಿ ಕುಮಾರಸ್ವಾಮಿ ಅವರು ಬಿಜೆಪಿ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಕುಮಾರಸ್ವಾಮಿ ಅವರ ವಿರುದ್ದ ಮುನಿಸಿಕೊಂಡಿದ್ದರು. ಅಲ್ಲದೇ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿರೋಧಿಸುವ ಸಮಾನ ಮನಸ್ಕರು ಚಿಂತನ ಮಂಥನ ನಡೆಸಿದ್ದರು.
ಇದನ್ನೂ ಓದಿ : ಲೋಕಸಭಾ ಚುನಾವಣೆ 2024: ತುಮಕೂರಿಗೆ ದೇವೇಗೌಡ್ರು, ಹಾಸನಕ್ಕೆ ಪ್ರಜ್ವಲ್, ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ !
ಕುಮಾರಸ್ವಾಮಿ ಅವರ ವಿರುದ್ದ ಬಹಿರಂಗವಾಗಿ ವಾಗ್ದಾಳಿಯನ್ನು ನಡೆಸಿದ್ದರು. ನಮ್ಮದೇ ನಿಜವಾದ ಜಾತ್ಯಾತೀತ ದಳ ಎಂದು ಹೇಲಿಕೊಂಡಿದ್ದರು. ಜೆಡಿಎಸ್ ಯಾವುದೇ ಕಾರಣಕ್ಕೂ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಈ ಕುರಿತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಜೊತೆಗೆ ಮಾತನಾಡಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಘೋಷಿಸಿದ್ದರು.
ಇದು ನಕಲಿ ಪತ್ರ ಎಂದು ಸಿಎಂ ಇಬ್ರಾಹಿಂ
ಇದರ ಬೆನ್ನಲ್ಲೇ ಈ ಪತ್ರ ಹರಿದಾಡಿದ್ದು ಹಲವು ಅನುಮಾನಗಳನ್ನು ಹುಟ್ಟುಹಾಕಿತ್ತು. ಆದರೆ ಈ ಪತ್ರದ ಕುರಿತು ಮಾತನಾಡಿರುವ ಸಿಎಂ ಇಬ್ರಾಹಿಂ ಅವರೇ ಇದೊಂದು ನಕಲಿ ಪತ್ರ. ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡುತ್ತೇನೆ ಎಂದು ಹೇಳಿದ್ದರು. ಆರಂಭದಲ್ಲಿ ಎಲ್ಲರಿಗೂ ಈ ಪತ್ರ ಅಚ್ಚರಿಯನ್ನು ಮೂಡಿಸಿತ್ತು.
Karnataka CM Ibrahim Expels HD Kumaraswamy Nikhil Kumaraswamy for JDS Clarification Jds State President