ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತ ಆರಂಭ : ರಾಹುಲ್ ಗಾಂಧಿಯಿಂದ 5 ಗ್ಯಾರಂಟಿ ಘೋಷಣೆ

ಬೆಂಗಳೂರು : ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (Karnataka cm Siddaramaiah) ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.‌ ನೂತನ ಕಾಂಗ್ರೆಸ್‌ ಸರಕಾರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಮತನಾಡಿದ ರಾಹುಲ್‌ ಗಾಂಧಿ, ಕಾಂಗ್ರೆಸ್‌ ಪಕ್ಷದ ಐದು ಗ್ಯಾರಂಟಿಗಳನ್ನು ನೀಡಿದೆ. ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ, ಯುವ ನಿಧಿ ಗ್ಯಾರಂಟಿಗಳನ್ನು ನಾವು ನೀಡಿದ್ದೇವು ಮುಂದಿನ ದಿನಗಳಲ್ಲಿ ಶೀಘ್ರದಲ್ಲೇ ಈಡೇರಿಸುತ್ತೇವೆ ಎಂದು ಹೇಳಿದರು.

ಇನ್ನು ರಾಜ್ಯ ಸರಕಾರದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ ಕೆಲವೇ ಹೊತ್ತಿನಲ್ಲಿ ನೂತನ ಸರಕಾರ ಸಂಪುಟ ಸಭೆ ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಗ್ಯಾರಂಟಿಗಳನ್ನು ಅನುಮೋದನೆ ಆಗಲಿವೆ ಎಂದು ಹೇಳಿದರು. ಜನರು ಪ್ರೀತಿ, ಶಕ್ತಿ ಕಾಂಗ್ರೆಸ್‌ಗೆ ನೀಡಿದ್ದನ್ನು ಮರೆಯಲು ಸಾಧ್ಯವಿಲ್ಲ ಎಂದು ರಾಹುಲ್‌ ಗಾಂಧಿ ಹೇಳಿದರು.

ಅಷ್ಟೇ ಅಲ್ಲದೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಮೊದಲ ಕ್ಯಾಬಿನೆಟ್‌ನಲ್ಲಿ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ಈ ಹಿಂದಿನ ಸರಕಾರದಲ್ಲಿ ಕೂಡ ನಾವು ಅಭಿವೃದ್ಧಿ ಕೆಲಸ ಮಾಡಿದ್ದೇವೆ. ನುಡಿದಂತೆ ನಾವು ನಡೆಯುತ್ತೇವೆ ಎಂದು ಹೇಳಿದರು. ಇನ್ನು ಸಂಚಿವ ಸಂಪುಟ ರಚನೆಗಾಗಿ ನೂತನ ಕಾಂಗ್ರೆಸ್‌ ಸಚಿವರಾಗಿ ಡಾ. ಜಿ ಪರಮೇಶ್ವರ, ಕೆಹೆಚ್‌ ಮುನಿಯಪ್ಪ, ಕೆಜೆ ಜಾರ್ಜ್‌, ಎಂ ಬಿ ಪಾಟೀಲ್‌, ಸತೀಶ್‌ ಜಾರಕಿಹೋಳಿ, ಪ್ರಿಯಾಂಕ್‌ ಖರ್ಗೆ, ರಾಮಲಿಂಗಾ ರೆಡ್ಡಿ ಹಾಗೂ ಬಿಝಡ್‌ ಜಮೀರ್‌ ಅಹ್ಮದ್‌ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಇದನ್ನೂ ಓದಿ : ಸಿದ್ದರಾಮಯ್ಯ ಪಟ್ಟಾಭಿಷೇಕ, ಡಿಸಿಎಂ ಆಗಿ ಡಿಕೆ ಶಿವಕುಮಾರ್‌ ಪ್ರಮಾಣವಚನ

ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ ಪ್ರಮಾಣವಚನ : ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಉಪಸ್ಥಿತಿ, ಸೋನಿಯಾ ಗಾಂಧಿ ಗೈರು

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭದಲ್ಲಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಿದ್ದು, ದೇವರ ಹೆಸರಿನಲ್ಲಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದು, ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ. ಅಲ್ಲದೇ ಸಚಿವರಾಗಿ ಡಾ.ಜಿ.ಪರಮೇಶ್ವರ್‌ ಅವರು ಸಂವಿಧಾನದ ಹೆಸರಿನಲ್ಲಿ, ಕೆ.ಎಚ್.ಮುನಿಯಪ್ಪ ದೇವರ ಹೆಸರಿನಲ್ಲಿ, ಕೆಜೆ ಜಾರ್ಜ್‌, ಎಂ.ಬಿ. ಪಾಟೀಲ್‌ ಅವರು ಕೂಡ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಜೊತೆ 8 ಸಚಿವರ ಪ್ರಮಾಣ ವಚನ

Karnataka cm Siddaramaiah: Congress rule begins in Karnataka: Rahul Gandhi announces 5 guarantees

Comments are closed.