ಸಿದ್ದರಾಮಯ್ಯರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ : ಬಿಜೆಪಿ ಶಾಸಕ ಹರೀಶ್‌ ಪೂಂಜಾ ವಿವಾದಾತ್ಮಕ ಹೇಳಿಕೆ

ಬೆಂಗಳೂರು : MLA Harish Poonja Controversy : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎನ್ನುವ ಮೂಲಕ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್‌ ಪೂಂಜಾ ವಿವಾದಾತ್ಮಕ ಹೇಳಿಕ ನೀಡುವ ಮೂಲಕ ವಿವಾದ ಹುಟ್ಟುಹಾಕಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಹರೀಶ್‌ ಪೂಂಜಾ ಮಾತನಾಡಿರುವ ಆಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಬಾರೀ ವೈರಲ್‌ ಆಗಿದೆ.

ಹಿಂದೂ ಕಾರ್ಯಕರ್ತ ಸತ್ಯಜಿತ್‌ ಸುರತ್ಕಲ್‌ ಇತ್ತೀಚೆಗೆ ಕಾಂಗ್ರೆಸ್‌ ಪರ ಪ್ರಚಾರ ಮಾಡಿದ್ದರು. ಇದೀಗ ಕಾಂಗ್ರೆಸ್‌ ಪರ ಪ್ರಚಾರ ಮಾಡಿದ್ದ ಹಿಂದೂ ಕಾರ್ಯಕರ್ತರ ಪರ ಶಾಸಕ ಹರೀಶ್‌ ಪೂಂಜಾ ಆಕ್ರೋಶ ವ್ಯಕ್ತಪಡಿಸಿದ್ದು, 2013ರಿಂದ 2018 ರ ಅವಧಿಯಲ್ಲಿ ಸಿದ್ದರಾಮಯ್ಯನವರ ಅಧಿಕಾರ ಅವಧಿಯಲ್ಲಿ ಕರಾವಳಿ ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆಗಳು ನಡೆದಿತ್ತು. ಜೊತೆಗೆ ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಗಳು ಮೇಲೆ ನಿಷೇಧ ತೆರವು ಮಾಡುವ ಮೂಲಕ ಆರೋಪಿಗಳನ್ನು ರಕ್ಷಿಸಿದೆ ಎಂದು ಆರೋಪಿಸಿದ್ದಾರೆ.

24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದ ಸಿದ್ದರಾಮಯ್ಯನವರಿಗೆ ನೀವು ಮತ ಕೇಳಿದ್ದೀರಿ. ಭಜರಂಗದಳದ ಮೇಲೆ ನಿಷೇಧ ಹೇರಲು ಮುಂದಾಗಿರುವ ಕಾಂಗ್ರೆಸ್‌ಗೆ ಮತ ಯಾಚಿಸಿದ್ದೀರಿ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನರು ಕೇಳುತ್ತಿದ್ದಾರೆ ಎನ್ನುವ ಮೂಲಕ ವಿವಾದ (MLA Harish Poonja Controversy) ಸೃಷ್ಟಿಸಿದ್ದಾರೆ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಹಿಂದುತ್ವದ ಅಸ್ತ್ರವನ್ನು ಪ್ರಯೋಗಿಸು ಚುನಾವಣೆಯಲ್ಲಿ ಗೆದ್ದು ಬಂದಿತ್ತು. ಕರಾವಳಿ ಭಾಗದಲ್ಲಿಯೂ ಅತೀ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಆದರೆ ಈ ಬಾರಿಯ ಚುನಾವಣೆಯಲ್ಲಿಯೂ ಬಿಜೆಪಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪುತ್ತೂರು ಹೊರತು ಪಡಿಸಿ ಉಳಿದೆಲ್ಲಾ ಸ್ಥಳಗಳಲ್ಲಿ ಗೆದ್ದು ಬೀಗಿದೆ. ಈ ಬಾರಿಯ ಚುನಾವಣೆಯಲ್ಲಿ ಕೆಲವು ಹಿಂದೂ ನಾಯಕರೇ ಕಾಂಗ್ರೆಸ್‌ ಪರ ಪ್ರಚಾರ ನಡೆಸಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ. ಸದ್ಯ ಹರೀಶ್‌ ಪೂಂಜಾ ಅವರ ವಿರುದ್ದ ಕಾಂಗ್ರೆಸ್‌ ಕಾರ್ಯಕರ್ತರು ದೂರು ನೀಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ : ಕರ್ನಾಟಕ ವಿಧಾನಸಭೆ ಸ್ಪೀಕರ್‌ ಆಗಿ ಯು.ಟಿ ಖಾದರ್‌ ಅಧಿಕಾರ ಸ್ವೀಕಾರ

ಇದನ್ನೂ ಓದಿ : New Parliament House : ಇತಿಹಾಸ ಪುಟ ಸೇರಲಿರುವ ಹೊಸ ಸಂಸತ್‌ ಕಟ್ಟಡದಲ್ಲಿ ‘ಸೆಂಗೊಲ್’ ಸ್ಥಾಪನೆ ಬಗ್ಗೆ ನಿಮಗೆಷ್ಟು ಗೊತ್ತು ?

Comments are closed.