ಸಿದ್ದರಾಮಯ್ಯ ಪಟ್ಟಾಭಿಷೇಕ, ಡಿಸಿಎಂ ಆಗಿ ಡಿಕೆ ಶಿವಕುಮಾರ್‌ ಪ್ರಮಾಣವಚನ

ಬೆಂಗಳೂರು : ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Karnataka cm Siddaramaiah) ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಿದ್ದು, ದೇವರ ಹೆಸರಿನಲ್ಲಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಇನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದು, ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ. ಅಲ್ಲದೇ ಸಚಿವರಾಗಿ ಡಾ.ಜಿ.ಪರಮೇಶ್ವರ್‌ ಅವರು ಸಂವಿಧಾನದ ಹೆಸರಿನಲ್ಲಿ, ಕೆ.ಎಚ್.ಮುನಿಯಪ್ಪ ದೇವರ ಹೆಸರಿನಲ್ಲಿ, ಕೆಜೆ ಜಾರ್ಜ್‌, ಎಂ.ಬಿ. ಪಾಟೀಲ್‌ ಅವರು ಕೂಡ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಇನ್ನು ಸಚಿವರಾಗಿ ಸತೀಶ್‌ ಜಾರಕಿಹೊಳಿ ಅವರು ಬುದ್ದ, ಬಸವ, ಅಂಬೇಡ್ಕರ್‌ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಲ್ಲದೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ ಖರ್ಗೆ ಅವರು ತಮ್ಮ ತಂದೆಯ ಸಮ್ಮುಖದಲ್ಲಿ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಕಾಂಗ್ರೆಸ್‌ ಹಿರಿಯ ಮುಖಂಡ ರಾಮಲಿಂಗಾ ರೆಡ್ಡಿ ಅವರು ಕೂಡ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಜಮೀರ್‌ ಅಹ್ಮದ್‌ ಖಾನ್‌ ಅವರು ಅಲ್ಲಾಹ್‌ ಮತ್ತು ತಮ್ಮ ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿ ಆಗಿ ಆಯ್ಕೆಯಾಗುತ್ತಿದ್ದಂತೆಯೇ ವಿಧಾನಸೌಧದ ಸಿಎಂ ಕಚೇರಿಯಲ್ಲಿ ಸಿಎಂ ಬಸವರಾಜ್‌ ಬೊಮ್ಮಾಯಿ ಅವರ ಹೆಸರು ತೆಗೆದು ಸಿದ್ದರಾಮಯ್ಯ ಹೆಸರಿನ ನಾಮಫಲಕವನ್ನು ಅಳವಡಿಸಲಾಗಿದೆ. ಇನ್ನು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲಾ,ಬಿಹಾರ ಮುಖ್ಯಮಂತ್ರಿ ನಿತೇಶ್‌ ಕುಮಾರ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌, ನಟ ಶಿವರಾಜ್‌ ಕುಮಾರ್‌, ನಟ ಕಮಲ್‌ ಹಾಸನ್‌, ನಟಿ ರಮ್ಯಾ, ದುನಿಯಾ ವಿಜಯ್‌, ನಿಶ್ಚಿತಾ ನಾಯ್ಡು, ನಿರ್ದೇಶಕ ರಾಜೇಂದ್ರ ಸಿಂಗ್‌ ಬಾಬು, ಗೀತಾ ಶಿವರಾಜ್‌ ಕುಮಾರ್‌ ಮುಂತಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ :ಸಿಎಂ ಸಿದ್ದರಾಮಯ್ಯ ಪ್ರಮಾಣವಚನ : ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಉಪಸ್ಥಿತಿ, ಸೋನಿಯಾ ಗಾಂಧಿ ಗೈರು

ಇದನ್ನೂ ಓದಿ : ಸಿದ್ದರಾಮಯ್ಯ ಸಿಎಂ ಆಗಿದ್ದು ಹೇಗೆ ? ಸಿದ್ದರಾಮನಹುಂಡಿ To ವಿಧಾನಸೌಧ

Karnataka cm Siddaramaiah Oath ceremony Updates

Comments are closed.