ಕರ್ನಾಟಕದಲ್ಲಿ 2 ವಾರ ಸಂಪೂರ್ಣ ಲಾಕ್ ಡೌನ್ : ರಾಜ್ಯ ಸರಕಾರಕ್ಕೆ ತಜ್ಞರ ಸಲಹೆ

ಬೆಂಗಳೂರು : ರಾಜ್ಯದಲ್ಲಿ ಎರಡು ವಾರಗಳ ಕಾಲ ಸಂಪೂರ್ಣವಾಗಿ ಲಾಕ್ ಡೌನ್ ಜಾರಿ ಮಾಡಿ. ಜನತಾ ಕರ್ಪ್ಯೂ, ನೈಟ್ ಕರ್ಪ್ಯೂ ಯಿಂದ ಯಾವುದೇ ಪ್ರಯೋಜನವೂ ಇಲ್ಲ ಎಂದು ತಜ್ಞರು ರಾಜ್ಯ ಸರಕಾರಕ್ಕೆ ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಕಳೆದೊಂದು ವಾರದಿಂದಲೂ ಜನತಾ ಕರ್ಪ್ಯೂ ಜಾರಿ ಮಾಡಲಾಗಿದೆ. ಆದರೆ ಮಧ್ಯಾಹ್ನದ ವರೆಗೆ ಅಗತ್ಯ ವಸ್ತುಗಳ ಖರೀದಿಯ ನೆಪದಲ್ಲಿ ಜನರು ಮನೆಯಿಂದ ಹೊರಬರುತ್ತಿದ್ದಾರೆ. ಅಲ್ಲದೇ ನೈಟ್ ಕರ್ಪ್ಯೂ ಜಾರಿಯಲ್ಲಿದ್ದರೂ ಕೂಡ ಜನರನ್ನು ನಿಯಂತ್ರಣ ಮಾಡಲು ಸಾಧ್ಯವಾಗುತ್ತಿಲ್ಲ. ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳದ ಹೊರತು ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಅಸಾಧ್ಯವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದಲ್ಲಿ ಆರೋಗ್ಯ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಸುಪ್ರೀಂ ಕೋರ್ಟ್ ಕೂಡ ಲಾಕ್ ಡೌನ್ ಹೇರಿಕೆ ಮಾಡುವಂತೆ ಸೂಚನೆಯನ್ನು ನೀಡಿದೆ. ಜೊತೆಗೆ ಪ್ರತಿಪಕ್ಷಗಳು ಕೂಡ ಲಾಕ್ ಡೌನ್ ಮಾಡುವುದರ ಬಗ್ಗೆ ವಿರೋಧ ವ್ಯಕ್ತಪಡಿಸಿಲ್ಲ. ಹೀಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಲಾಕ್ ಡೌನ್ ಕುರಿತು ಸ್ಪಷ್ಟ ನಿರ್ಧಾರ ಹೊರಬರುವ ಸಾಧ್ಯತೆಯಿದೆ.

Comments are closed.