Congress CM Candidate : ಇಂದೇ ಘೋಷಣೆಯಾಗುತ್ತಾ ಕಾಂಗ್ರೆಸ್ ಸಿಎಂ ಅಭ್ಯರ್ಥಿ: ಕುತೂಹಲ ಮೂಡಿಸಿದೆ ಕೈಹೈಕಮಾಂಡ್ ಮೀಟಿಂಗ್

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಸದ್ಯ ಚುನಾವಣೆಯದ್ದೇ ಸದ್ದು. ಮುಂಬರುವ ವಿಧಾನಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಸದ್ದಿಲ್ಲದೇ ಸಿದ್ಧತೆ ನಡೆದಿದೆ. ಈ ಮಧ್ಯೆ ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕಾಗಿ (Congress CM Candidate) ತೆರೆಮರೆಯಲ್ಲೇ ಸರ್ಕಸ್ ಕೂಡಾ ನಡೆದಿದೆ. ಈ ಎಲ್ಲ. ಅಂಶಗಳನ್ನು ಮನಗಂಡ ಕಾಂಗ್ರೆಸ್ ಹೈಕಮಾಂಡ್ ರಾಷ್ಟ್ರ ರಾಜಧಾನಿಯಲ್ಲಿ ಮಹತ್ವದ ಸಭೆ ಕರೆದಿದ್ದು ರಾಗಾ ಬುಲಾವ್ ಮೇರೆಗೆ ರಾಜ್ಯ ಕೈ ನಾಯಕರು ದೆಹಲಿಗೆ ದೌಡಾಯಿಸಿದ್ದಾರೆ.

ಸದ್ಯ ರಾಜ್ಯ ಕಾಂಗ್ರೆಸ್ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಾಗುತ್ತಿದೆ. ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಅಧಿಕಾರ ಹಿಡಿಯುವ ಕನಸಿನಲ್ಲಿದ್ದಾರೆ ಡಿ.ಕೆ.ಶಿವಕುಮಾರ್. ಈ ಎಲ್ಲ ಬೆಳವಣಿಗೆ ಮಧ್ಯೆ ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಸ್ಥಾನಕ್ಕೆ ತೀವ್ರ ಪೈಪೋಟಿ ಇದೆ. ಶತಾಯ ಗತಾಯ ಮುಖ್ಯಮಂತ್ರಿಯಾಗಲೇಬೇಕೆಂದು ಡಿಕೆಶಿ ಸರ್ಕಸ್ ಆರಂಭ ಮಾಡಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಈಗ ರಾಹುಲ್ ಗಾಂಧಿ ರಾಜ್ಯ ನಾಯಕರ ಜೊತೆ ಸಭೆ ನಡೆಸಲು‌ನಿರ್ಧರಿಸಿದ್ದಾರೆ. ಇದಕ್ಕಾಗಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ದೆಹಲಿಗೆ ಬುಲಾವ್ ನೀಡಿದ್ದಾರೆ. ಗುರುವಾರ ಸಂಜೆ ವೇಳೆಗೆ ರಾಹುಲ್ ಗಾಂಧಿ ಹಾಗೂ ಪಕ್ಷದ ಪ್ರಮುಖರ ಸಮ್ಮುಖದಲ್ಲಿ ನಡೆಯೋ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ನ ಘಟಾನುಘಟಿ ನಾಯಕರು ಭಾಗಿಯಾಗಲಿದ್ದಾರೆ.

ಇದಕ್ಕಾಗಿ ಈಗಾಗಲೇ ಮಾಜಿಸಿಎಂ ಸಿದ್ಧರಾಮಯ್ಯ, ಡಿ.ಕೆ.ಶಿವಕುಮಾರ್, ರಾಮಲಿಂಗಾ ರೆಡ್ಡಿ, ಪರಿಷತ್ ನಾಯಕ ಬಿ.ಕೆ.ಹರಿಪ್ರಸಾದ್, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಸಲೀಂ‌ ಅಹ್ಮದ್, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ, ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ನಾಯಕರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಬಿಜೆಪಿ ವಿರುದ್ಧ ಸಾಕಷ್ಟು ಹೋರಾಟಗಳನ್ನು ಸಂಘಟಿಸಿದ್ದು, ಈಶ್ವರಪ್ಪ ವಿರುದ್ಧ ಉಭಯ ಸದನಗಳಲ್ಲೇ ಹೋರಾಟ ನಡೆಸಿದೆ. ಕಾಂಗ್ರೆಸ್ ನ ಈ ಹೋರಾಟದ ವೈಖರಿ ಹೈಕಮಾಂಡ್ ಮನಸ್ಸು ಗೆದ್ದಿದ್ದು ಅದಕ್ಕಾಗಿ ಮೆಚ್ಚುಗೆ ಸೂಚಿಸಿದೆ ಎನ್ನಲಾಗಿದೆ.

ಈ ಮಧ್ಯೆ ಮುಂಬರುವ ವಿಧಾನಸಭಾ ಚುನಾವಣೆಯ ನಾಯಕತ್ವ ಸಮಸ್ಯೆ ಬಗೆಹರಿಸಿ ರಾಜ್ಯ ಕಾಂಗ್ರೆಸ್ ನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಹೈಕಮಾಂಡ್ ಈ ಸಭೆ ಕರೆದಿದ್ದು, ಚುನಾವಣೆ ಸಿದ್ದತೆ ಸೇರಿದಂತೆ ಹಲವು ವಿಚಾರಗಳು ಚರ್ಚೆಗೆ ಬರೋ ಸಾಧ್ಯತೆ ಇದೆ. ಪಂಚ ರಾಜ್ಯಗಳಲ್ಲಿ ಚುನಾವಣೆಗೂ ಮುನ್ನ ಕಾಂಗ್ರೆಸ್ ಸಿಎಂ ಘೋಷಣೆ ಮಾಡಿತ್ತು. ಹೀಗಾಗಿ ರಾಜ್ಯದಲ್ಲೂ ಸಿಎಂ ಅಭ್ಯರ್ಥಿ ಘೋಷಣೆಯಾಗುತ್ತಾ ಅನ್ನೋ ಕುತೂಹಲವೂ ಜನರನ್ನು ಕಾಡುತ್ತಿದೆ.

ಇದನ್ನೂ ಓದಿ : ಮುಸ್ಲಿಂರನ್ನು ಗೂಂಡಾ ಎಂದ ಸಚಿವ ಈಶ್ವರಪ್ಪ: ಶಿವಮೊಗ್ಗದಲ್ಲಿ ಸಚಿವರ ವಿರುದ್ಧ ದೂರು

ಇದನ್ನೂ ಓದಿ : ಎನ್ಐಎ ಹೆಗಲೇರುತ್ತಾ ಹರ್ಷ ಕೊಲೆ ಪ್ರಕರಣ : ಸಿಎಂ ಬೊಮ್ಮಾಯಿ ಹೇಳಿದ್ದೇನು ?

(Karnataka Congress CM Candidate Declare Today, Rahul Gandhi Meeting held In Delhi)

Comments are closed.