ಕರ್ನಾಟಕದಲ್ಲಿ 5 ಲಕ್ಷ ದಾಟಿದ ಸಕ್ರೀಯ ಕೊರೊನಾ ಪ್ರಕರಣ

ಬೆಂಗಳೂರು : ಕರ್ನಾಟಕದಲ್ಲೀಗ ಕೊರೊನಾ ವೈರಸ್ ಸೋಂಕಿನ 2ನೇ ಅಲೆಯ ಆರ್ಭಟ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಗೋಚರಿಸುತ್ತಿಲ್ಲ. ರಾಜ್ಯದಲ್ಲಿ ನಿತ್ಯವೂ ಅರ್ಧ ಲಕ್ಷದಷ್ಟು ಸೋಂಕಿತರು ಪತ್ತೆಯಾಗುತ್ತಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ ಬರೋಬ್ಬರಿ 5,36,641ಕ್ಕೆ ಏರಿಕೆಯಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಲ್ಲಷ್ಟೇ ಆರ್ಭಟಿಸುತ್ತಿದ್ದ ಕೊರೊನಾ ಸೋಂಕು ಇದೀಗ ರಾಜ್ಯದ ಹಳ್ಳಿ ಹಳ್ಳಿಗೂ ವ್ಯಾಪಿಸುತ್ತಿದೆ. ಕರ್ನಾಟಕದ ಪ್ರತೀ ಜಿಲ್ಲೆಯಲ್ಲಿಯೂ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಅದ್ರಲ್ಲೂ ರಾಜ್ಯದ ಅರ್ಧದಷ್ಟು ಜಿಲ್ಲೆಗಳು ಕೊರೊನಾ ಹಾಟ್ ಸ್ಪಾಟ್ ಗಳಾಗಿ ಮಾರ್ಪಟ್ಟಿವೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯನ್ನು ಕಂಡಿದೆ. ಇದೀಗ ರಾಜ್ಯದಲ್ಲಿ ಒಟ್ಟು 5,36,641ಕ್ಕೆ ಏರಿಕೆಯಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಅತೀ ಹೆಚ್ಚು ಸಕ್ರೀಯ ಸೋಂಕಿತ ಪ್ರಕರಣಗಳಿವೆ. ಬೆಂಗಳೂರಲ್ಲಿ 3,41,978 ಸಕ್ರೀಯ ಪ್ರಕರಣಗಳಿವೆ. ಇನ್ನು ಎರಡನೇ ಸ್ಥಾನದಲ್ಲಿ ತುಮಕೂರು ಸೇರಿಕೊಂಡಿದೆ. ತುಮಕೂರಿನಲ್ಲಿ ಒಟ್ಟು 17,813 ಸಕ್ರೀಯ ಪ್ರಕರಣಗಳಿವೆ. ಉಳಿದಂತೆ ಮೈಸೂರಿನಲ್ಲಿ 16,637, ಹಾಸನ 13,206, ಬಳ್ಳಾರಿ 12,460, ಕಲಬುರಗಿ 12,122, ಬೆಂಗಳೂರು ಗ್ರಾಮಾಂತರ 11,579. ದಕ್ಷಿಣ ಕನ್ನಡ 10,961 ಸಕ್ರೀಯ ಪ್ರಕರಣಗಳಿವೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿಯೂ ಸಾವಿರಕ್ಕೂ ಮಿಕ್ಕಿದ ಸಕ್ರೀಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

Comments are closed.