ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಅಬ್ಬರಕ್ಕೆ ರಾಜ್ಯ ತತ್ತರಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತುರ್ತು ಸಭೆ ಕರೆದಿದ್ದಾರೆ.
ಸಿಎಂ ನಿವಾಸ ಕಾವೇರಿಯಲ್ಲಿ ಬೆಳಗ್ಗೆ 9.30ಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತುರ್ತು ಸಭೆ ನಡೆಸಲಿದ್ದು, ಸಭೆಯಲ್ಲಿ ಹಿರಿಯ ಅಧಿಕಾರಿಗಳು, ಸಚಿವರು ಭಾಗಿಯಾಗಲಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗಿದೆ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿಯ ಕುರಿತು ಸಭೆಯಲ್ಲಿ ನಿರ್ಧಾರವಾಗುವ ಸಾಧ್ಯತೆಯಿದೆ.
ಕೊರೊನಾ ಸೋಂಕಿನ ಹೆಚ್ಚಳದ ಹಿನ್ನೆಲೆಯಲ್ಲಿ ನೈಟ್ ಕರ್ಪ್ಯೂ ವಿಸ್ತರಣೆ, ಲಾಕ್ ಡೌನ್ ಹೇರಿಕೆ, ಶಾಲೆಗಳಿಗೆ ರಜೆ ಘೋಷಣೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ.