ಸೋಮವಾರ, ಏಪ್ರಿಲ್ 28, 2025
HomeCorona UpdatesKarnataka Corona Updates : ಕೊರೊನಾ ಮಹಾಸ್ಪೋಟ : 41 ಸಾವಿರ ಹೊಸ ಕೇಸ್‌, ಪಾಸಿಟಿವಿಟಿ...

Karnataka Corona Updates : ಕೊರೊನಾ ಮಹಾಸ್ಪೋಟ : 41 ಸಾವಿರ ಹೊಸ ಕೇಸ್‌, ಪಾಸಿಟಿವಿಟಿ ದರ ಶೇ.22 ಕ್ಕೆ ಏರಿಕೆ

- Advertisement -

ಬೆಂಗಳೂರು : ರಾಜ್ಯದಲ್ಲಿ (Karnataka Corona Updates)ಕೊರೊನಾ ಮಹಾಸ್ಪೋಟ ಸಂಭವಿಸಿದೆ. ಇಂದು ಕರ್ನಾಟಕದಲ್ಲಿ ಬರೋಬ್ಬರಿ 41 ಸಾವಿರಕ್ಕೂ ಅಧಿಕ ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಅದ್ರಲ್ಲೂ ಬೆಂಗಳೂರಲ್ಲಿ 25 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ಪತ್ತೆಯಾಗಿದ್ರೆ, ಜಿಲ್ಲೆಗಳಲ್ಲಿಯೂ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಮಾಹಿತಿ ನೀಡಿದ್ದಾರೆ.

ದಿನೇ ದಿನೇ ಕೊರೊನಾ ವೈರಸ್‌ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆ ಕಾಣುತ್ತಿದೆ. ರಾಜ್ಯದಲ್ಲಿಂದು ಪಾಸಿಟಿವಿಟಿ ದರ ಶೇ. 22 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯ ಅವಧಿಯಲ್ಲಿ 1,85,872 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 42, 457 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸಕ್ರೀಯ ಪ್ರಕರಣಗಳ ಸಂಖ್ಯೆ 2,50, 381ಕ್ಕೆ ಏರಿಕೆಯಾಗಿದೆ. ಇನ್ನು ಬೆಂಗಳೂರಲ್ಲಿಯೇ ಬರೋಬ್ಬರಿ 25,295 ಹೊಸ ಕೊರೊನಾ ಸೋಂಕಿತ ಪ್ರಕರಣ ಪತ್ತೆಯಾಗಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ 1.78 ಲಕ್ಷಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 20 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಈ ಪೈಕಿ 7 ಮಂದಿ ಬೆಂಗಳೂರಲ್ಲಿ ಮೃತರಾಗಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿತ ಪ್ರಕರಣ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ್‌ ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯದ ಸುಮಾರು 18 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಾಯಿತು. ಸಭೆಯ ನಂತರ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್‌ ಅವರು, ರಾಜ್ಯದಲ್ಲಿ ಪ್ರಸ್ತುತ ನಡೆಸುತ್ತಿರುವ ಟೆಸ್ಟಿಂಗ್‌ ಪ್ರಮಾಣವನ್ನು ಮುಂದುವರಿಸುವ ಕುರಿತು ತೀರ್ಮಾನಿಸಲಾಗಿದೆ.

ಬೆಂಗಳೂರಲ್ಲಿ ಆರಂಭಿಸಿರುವ ಕೊರೊನಾ ವಾರ್‌ ರೂಂ ಮಾದರಿಯಲ್ಲಿಯೇ ಪ್ರತೀ ಜಿಲ್ಲಾ ಕೇಂದ್ರಗಳಲ್ಲಿಯೂ ಸೂಕ್ತವಾದ ವಾರ್‌ ರೂಂ ಆರಂಭಿಸಬೇಕು ಎಂದು ಸೂಚನೆ ನೀಡಲಾಗಿದೆ. ಫೀವರ್‌ ಕ್ಲಿನಿಕ್‌ಗಳನ್ನು ಹೆಚ್ಚಾಗಿ ಆರಂಭಿಸಬೇಕು. ಪಾಸಿಟಿವಿಟಿ ಬಂದವರು ನೇರವಾಗಿ ಭಯ, ಆತಂಕದಿಂದ ಅನಗತ್ಯವಾಗಿ ಆಸ್ಪತ್ರೆಗೆ ಹೋಗುವುದನ್ನು ತಡೆಯುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.

ಇನ್ನು ಕೋವಿಡ್‌ ಪಾಸಿಟಿವ್‌ ಬಂದವರಿಗೆ ಮನೆಗಳಲ್ಲಿಯೇ ಚಿಕಿತ್ಸೆಯನ್ನು ನೀಡುವ ಕಾರ್ಯವನ್ನು ಮಾಡಲಾಗುತ್ತಿದೆ. ಪಾಸಿಟಿವ್‌ಗೆ ಒಳಗಾದ ಪ್ರತಿಯೊಬ್ಬರಿಗೂ ಕೂಡ ಹೋಂ ಐಸೋಲೇಷನ್‌ ಕಿಟ್‌ ನೀಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಹಾಗೂ ಗ್ರಾಮೀಣ ಭಾಗದ ಜನರಿಗೆ ಕಿಟ್‌ ತಲುಪಿಸಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ಸೂಚನೆಯ ಮೇರೆಗೆ ವೈದ್ಯರ ನಡೆ ಹಳ್ಳಿಯ ಕಡೆ ಯೋಜನೆಯನ್ನು ಮತ್ತೆ ಆರಂಭಿಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ : Dolo 650 : ಹುಬ್ಬೇರಿಸುತ್ತೆ ಕಳೆದ 2 ವರ್ಷಗಳಲ್ಲಿ ದೇಶದಲ್ಲಿ ಮಾರಾಟವಾದ ಡೋಲೋ 650 ಮಾತ್ರೆಗಳ ಸಂಖ್ಯೆ

ಇದನ್ನೂ ಓದಿ : 11 ಬಾರಿ ಕೊರೊನಾ ಲಸಿಕೆ ಸ್ವೀಕರಿಸಿದ್ದ ವೃದ್ಧನಿಗೆ ಬಿಗ್​ ರಿಲೀಫ್​​

(Karnataka Corona Updates : today record 41,457 new case, positivity rate hike 22 % )

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular