ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಕಡಿಮೆಯಾಗಿದ್ದರೂ ಕೂಡ ಇಂದು ಸ್ವಲ್ಪ ಮಟ್ಟಿಗೆ ಏರಿಕೆ ಕಂಡಿದೆ. ಕಳೆದ 24 ಗಂಟೆಗಳಲ್ಲಿ 3,104 ಕೊರೊನಾ ಹೊಸ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2859595ಕ್ಕೆ ಏರಿಕೆಯಾಗಿದೆ.

ಕೊರೊನಾ ಪಾಸಿಟಿವಿಟಿ ರೇಟ್ ರಾಜ್ಯದಲ್ಲಿ ಇಳಿಕೆಯಾಗುತ್ತಿದ್ದಂತೆಯೇ ಅನ್ ಲಾಕ್ ಆದೇಶ ಜಾರಿ ಮಾಡಲಾಗಿದೆ. ಇದೀಗ ಕೊರೊನಾ ಮರಣ ಪ್ರಮಾಣ ಇಳಿಕೆಯಾಗುತ್ತಿದ್ರೆ, ವೈರಸ್ ಸೋಂಕಿನ ಪ್ರಮಾಣದಲ್ಲಿ ಕೊಂಚ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ 3,104 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ರೆ, 4,992 ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ದಿನ ಕಳೆಯುತ್ತಿದ್ದಂತೆಯೇ ಸೋಂಕಿನ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಬೆಂಗಳೂರಲ್ಲಿ 715 ಹೊಸ ಪ್ರಕರಣಗಳು ದೃಢಪಟ್ಟಿದ್ದು,1863 ಸೋಂಕಿತರು ಗುಣಮುಖರಾಗಿದ್ದಾರೆ. ಅಲ್ಲದೇ ಸಾವಿನ ಪ್ರಮಾಣದಲ್ಲಿಯೂ ಇಳಿಕೆಯನ್ನು ಕಂಡಿದ್ದು 15 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿಯೂ ಕೊರೊನಾ ಮರಣ ಪ್ರಮಾಣದಲ್ಲಿಯೂ ಇಳಿಕೆಯಾಗಿದೆ. ರಾಜ್ಯದಲ್ಲಿ ಒಂದೇ ದಿನ 92 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಮೃತರ ಸಂಖ್ಯೆ 35,526ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೊರೊನಾ ಪಾಸಿಟಿವಿಟಿ ದರ ಶೇ.2.65 ರಷ್ಟಿದ್ದರೆ, ಮರಣ ಪ್ರಮಾಣ ಶೇ.2.96 ರಷ್ಟಿದೆ.