ಕರ್ನಾಟಕ 14 ದಿನ ಜನತಾ ಕರ್ಪ್ಯೂ : ಯಾವುದಕ್ಕೆ ಅವಕಾಶ…? ಯಾವುದಕ್ಕೆ ನಿರ್ಬಂಧ.?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಯು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ 14 ದಿನಗಳ ಕಾಲ ರಾಜ್ಯದಾದ್ಯಂತ ಲಾಕ್ ಡೌನ್ ಮಾದರಿಯಲ್ಲಿ ಜನತಾ ಕರ್ಪ್ಯೂ ಜಾರಿ ಮಾಡಲಾಗಿದೆ. ಲಾಕ್ ಡೌನ್ ಹೇರಿಕೆಯ ವೇಳೆಯಲ್ಲಿ ಕಠಿಣ ನಿಯಮ ಗಳನ್ನು ಜಾರಿ ಮಾಡಲಾಗಿದ್ದು, ಹೊಸ ಮಾರ್ಗಸೂಚಿಯನ್ನು ರಾಜ್ಯ ಸರಕಾರ ಹೊರಡಿಸಿದೆ.

ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ಈಗಾಗಲೇ ದೇಶದ ಬಹುತೇಕ ರಾಜ್ಯಗಳು ಲಾಕ್ ಡೌನ್ ಜಾರಿ ಮಾಡಿವೆ. ಕರ್ನಾಟಕದಲ್ಲಿ ಸೋಂಕು ತಡೆಗೆ ನೈಟ್ ಕರ್ಪ್ಯೂ, ವೀಕೆಂಡ್ ಲಾಕ್ ಡೌನ್ ಜಾರಿ ಮಾಡಲಾಗಿತ್ತು. ಇದೀಗ ಸುಮಾರು 14 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡಲಾಗಿದೆ.

ಎಪ್ರಿಲ್ 28ರಂದು ರಾತ್ರಿ 9 ಗಂಟೆಯಿಂದಲೇ ಜನತಾ ಕರ್ಪ್ಯೂ ಹೇರಿಕೆ ಮಾಡಲಾಗುತ್ತಿದ್ದು, ಮೇ 12ರ ಬೆಳಗ್ಗೆ 6 ಗಂಟೆಗೆ ಕೊನೆಗೊಳ್ಳಲಿದೆ. ಜನತಾ ಕರ್ಪ್ಯೂ ಲಾಕ್ ಡೌನ್ ಮಾದರಿಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಂದೊಮ್ಮೆ ಲಾಕ್ ಡೌನ್ ಅವಧಿಯಲ್ಲಿಯೂ ಸೋಂಕು ನಿಯಂತ್ರಣಕ್ಕೆ ಬಾರದೇ ಇದ್ದಲ್ಲಿ, ಇನ್ನಷ್ಟು ದಿನಗಳ ಕಾಲ ಜನತಾ ಕರ್ಪ್ಯೂವನ್ನು ಮುಂದುವರಿಸುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಈಗಾಗಲೇ ಘೋಷಣೆಯನ್ನು ಮಾಡಿದ್ದಾರೆ. ಅಲ್ಲದೇ ತುರ್ತು ಸೇವೆಯನ್ನು ಹೊರತು ಪಡಿಸಿ ಅಂತರ್ ಜಿಲ್ಲೆ, ಅಂತರ್ ರಾಜ್ಯ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.

ಯಾವುದಕ್ಕೆ ನಿರ್ಬಂಧ ..?
ಕೊರೊನಾ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಬಿಎಂಟಿಸಿ ಬಸ್, ಕೆಎಸ್‌ಆರ್‌ಟಿಸಿ ಬಸ್, ನಮ್ಮ ಮೆಟ್ರೋ, ಕ್ಯಾಬ್, ಆಟೋ, ಖಾಸಗಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಆದರೆ ತುರ್ತು ಸೇವೆಗೆ ಮಾತ್ರವೇ ಟ್ಯಾಕ್ಸಿ ಬಳಕೆ ಮಾಡಬಹುದಾಗಿದೆ. ಇನ್ನು ಶಾಲೆ – ಕಾಲೇಜು, ಟ್ಯೂಷನ್ ಸೆಂಟರ್ ಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದ್ದು, ಯಾವುದೇ ಕಾರಣಕ್ಕೂ ತೆರೆಯುವಂತಿಲ್ಲ. ಇನ್ನು ಗಾರ್ಮೆಂಟ್ಸ್ ಕಾರ್ಖಾನೆ, ಎಲ್ಲಾ ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್‌ಗಳು, ಜಿಮ್​ಗಳು, ಯೋಗ ಕೇಂದ್ರಗಳು, ಕ್ರೀಡಾ ಸಂಕೀರ್ಣಗಳು, ಸ್ಟೇಡಿಯಂ,ಈಜು ಕೊಳಗಳು, ಮನರಂಜನೆ, ಮನೋರಂಜನಾ ಉದ್ಯಾನಗಳು, ಕ್ಲಬ್‌ಗಳು, ಸಭಾಂಗಣಗಳು ಬಂದ್ ಆಗಲಿದೆ. ಇನ್ನು ಧಾರ್ಮಿಕ ಕೇಂದ್ರಗಳಲ್ಲಿ ಭಕ್ತರಿಗೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದ್ದು, ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲು ಸಿಬ್ಬಂಧಿಗಳಿಗೆ ಮಾತ್ರವೇ ಅವಕಾಶವನ್ನು ಕಲ್ಪಿಸಲಾಗಿದೆ. ಇನ್ನು

ಯಾವುದಕ್ಕೆ ಅವಕಾಶ ..?
ರಾಜ್ಯದಲ್ಲಿ ಕಟ್ಟುನಿಟ್ಟಿನ ನಿಯಮಗಳು ಜಾರಿಯಲ್ಲಿದ್ದರೂ ಕೂಡ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಪ್ರಮುಖವಾಗಿ ಹಾಲು, ದಿನಸಿ ಅಂಗಡಿ, ಮಾಂಸ ಮಾರಾಟ, ಹಣ್ಣು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಜೊತೆಗೆ ಮದ್ಯದಂಗಡಿಗಳನ್ನು ಬೆಳಗ್ಗೆ 6 ರಿಂದ 10 ಗಂಟೆಯ ವರೆಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ ಮದ್ಯದಂಗಡಿ, ಹೋಟೆಲ್ , ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಮಾತ್ರವೇ ನೀಡಬಹು ದಾಗಿದೆ. ಅಲ್ಲದೇ ಆಸ್ಪತ್ರೆ, ಮೆಡಿಕಲ್ ಶಾಪ್, ಬ್ಯಾಂಕ್, ಎಟಿಎಂ, ಪೆಟ್ರೋಲ್ ಬಂಕ್, ಕಟ್ಟಡ ಕಾಮಗಾರಿ, ಸಿಮೆಂಟ್, ಹಾರ್ಡ್‍ವೇರ್ ಶಾಪ್, ಅಗತ್ಯ ವಸ್ತುಗಳ ಉದ್ದಿಮೆ, ಸರಕು ಸಾಗಣೆ, ಕೃಷಿ ಚಟುವಟಿಕೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಇನ್ನು 50 ಜನರನ್ನು ಒಳಗೊಂಡು ಮದುವೆ ಹಾಗೂ ಅಂತ್ಯಕ್ರೀಯೆಯಲ್ಲಿ ಪಾಲ್ಗೊಳ್ಳಲು ಕೇವಲ 5 ಜನರಿಗೆ ಮಾತ್ರವೇ ಅವಕಾಶ ನೀಡಲಾಗಿದೆ.

Comments are closed.