ಕರ್ನಾಟಕದಲ್ಲಿ ಕೋವಿಡ್‌ -19 ಪ್ರಕರಣ ಹೆಚ್ಚಳ, 24 ಗಂಟೆಯಲ್ಲಿ 2 ಸಾವು

ಕೋವಿಡ್ -19 ಉಪ ತಳಿ ಜೆಎನ್‌ 1 (COVID Subvariant JN1) ಆರ್ಭಟ ನೆರೆಯ ಕೇರಳದಲ್ಲಿ ಹೆಚ್ಚಳವಾಗುತ್ತಿದ್ದರೆ, ಕರ್ನಾಟಕದಲ್ಲಿ ಕೋವಿಡ್‌ -19 ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿದೆ. ರಾಜ್ಯದಲ್ಲಿ ಒಂದೇ 22 ಮಂದಿಗೆ ಕೋವಿಡ್‌ ಪಾಸಿಟಿವ್‌ ಇರುವುದು ದೃಢಪಟ್ಟಿದೆ.

ಬೆಂಗಳೂರು : ಕೋವಿಡ್ -19 ಉಪ ತಳಿ ಜೆಎನ್‌ 1 (COVID Subvariant JN1) ಆರ್ಭಟ ನೆರೆಯ ಕೇರಳದಲ್ಲಿ ಹೆಚ್ಚಳವಾಗುತ್ತಿದ್ದರೆ, ಕರ್ನಾಟಕದಲ್ಲಿ ಕೋವಿಡ್‌ -19 ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿದೆ. ರಾಜ್ಯದಲ್ಲಿ ಒಂದೇ 22 ಮಂದಿಗೆ ಕೋವಿಡ್‌ ಪಾಸಿಟಿವ್‌ ಇರುವುದು ದೃಢಪಟ್ಟಿದೆ. ಅಲ್ಲದೇ 24 ಗಂಟೆಯ ಅವಧಿಯಲ್ಲಿ ಇಬ್ಬರು ಕೋವಿಡ್‌ ಹೆಮ್ಮಾರಿಗೆ ಬಲಿಯಾಗಿದ್ದಾರೆ,

ಕೇರಳದಲ್ಲಿ ಕೋವಿಡ್‌ -19 ಹೆಮ್ಮಾರಿಯ ಆರ್ಭಟ ಮುಂದುವರಿಯುತ್ತಿದ್ದಂತೆಯೇ ಕರ್ನಾಟಕದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರವನ್ನು ವಹಿಸಿದೆ. ಕೋವಿಡ್‌ ಟೆಸ್ಟ್‌ಗಳನ್ನು ಹೆಚ್ಚಳ ಮಾಡಿದೆ. ನಿನ್ನೆ ರಾಜ್ಯದಲ್ಲಿ ಒಟ್ಟು ೮೦೮ ಮಂದಿಗೆ ಕೋವಿಡ್‌ ಟೆಸ್ಟ್‌ ಮಾಡಿಸಲಾಗಿದ್ದು, ಈ ಪೈಕಿ 22 ಮಂದಿಗೆ ಕೋವಿಡ್‌ ಪಾಸಿಟಿವ್‌ ಇರುವುದು ದೃಢಪಟ್ಟಿದೆ. ಇದರಿಂದಾಗಿ ಕರ್ನಾಟಕದಲ್ಲಿ ಕೋವಿಡ್‌ ಸಕ್ರೀಯ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿಕೆಯಾಗಿದೆ.

Karnataka Covid-19 Updates 92 Covid Active Cases 2 deaths in 24 hours
Image Credit to Original Source

ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿನಲ್ಲೇ ಅತೀ ಹೆಚ್ಚು ಕೋವಿಡ್‌ ಪ್ರಕರಣ ಪತ್ತೆಯಾಗಿದೆ. ಬೆಂಗಳೂರು ನಗರದಲ್ಲಿ 19, ಬಳ್ಳಾರಿಯಲ್ಲಿ 2 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1 ಕೋವಿಡ್‌ ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು 92 ಸಕ್ರೀಯ ಕೋವಿಡ್‌ ಪ್ರಕರಣಗಳಿದ್ದು, ಇದರಲ್ಲಿ 20 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 72 ಮಂದಿ ಹೋಮ್‌ ಐಸೋಲೇಷನ್‌ನಲ್ಲಿದ್ದಾರೆ. ಉಳಿದಂತೆ 7 ಮಂದಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.

ಇದನ್ನೂ ಓದಿ : ಭಾರತದಲ್ಲಿ ಕೊರೊನಾ ಭೀತಿ, ಜಾರಿಯಾಗುತ್ತಾ ಲಾಕ್‌ಡೌನ್‌ ? ಸರಕಾರ ಮಾರ್ಗಸೂಚಿಯಲ್ಲೇನಿದೆ ?

ಕರ್ನಾಟಕ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ ಬೆಂಗಳೂರು ನಗರದಲ್ಲಿ ಒಟ್ಟು 359 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 19 ಮಂದಿ ಕೋವಿಡ್-19 ಪಾಸಿಟಿವ್ ಇರುವುದು ದೃಢಪಟ್ಟಿದೆ. ಇನ್ನು ಚಿಕ್ಕಬಳ್ಳಾಪುರದಲ್ಲಿ 94 , ಧಾರವಾಡದಲ್ಲಿ ಐವರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರನ್ನು ಪರೀಕ್ಷಿಸಲಾಗಿದ್ದು, ಅವರಲ್ಲಿ ಒಬ್ಬರಿಗೆ ಕೋವಿಡ್ -19 ದೃಢಪಟ್ಟಿದೆ.

Karnataka Covid-19 Updates 92 Covid Active Cases 2 deaths in 24 hours
Image Credit to Original Source

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಕೋವಿಡ್ -19 ಪರೀಕ್ಷೆಗೆ ಒಳಪಡಿಸಿದಾಗ, ಅವರೂ ಕರೋನಾ ಪಾಸಿಟಿವ್ ಎಂದು ವರದಿ ದೃಢಪಡಿಸಿತು. ಕೋವಿಡ್ -19 ಸೋಂಕಿತ ವ್ಯಕ್ತಿಯನ್ನು ಪ್ರತ್ಯೇಕಿಸಲಾಗಿದೆ ಮತ್ತು ಅವರ ಸಂಪರ್ಕಗಳನ್ನು ಪತ್ತೆಹಚ್ಚಲಾಗಿದೆ ಮತ್ತು ಕರೋನಾ ಪರೀಕ್ಷಿಸಲಾಗುತ್ತಿದೆ. ಈ ಮೂಲಕ ಜಿಲ್ಲಾಡಳಿತ ಕೋವಿಡ್-19 ನಿಯಂತ್ರಣಕ್ಕೆ ಬಂದಿದೆ.

ಇದನ್ನೂ ಓದಿ : ಅಯ್ಯಪ್ಪ ಭಕ್ತರಿಗೆ ಗುಡ್‌ನ್ಯೂಸ್‌ : ಶಬರಿಮಲೆಯಲ್ಲಿ ದೇವರ ದರ್ಶನ ಅವಧಿ 1 ಗಂಟೆ ಹೆಚ್ಚಳ, ನೂಕುನುಗ್ಗಲು ನಿಯಂತ್ರಣ

ಚಿಕ್ಕಮಗಳೂರು ಜಿಲ್ಲೆಗೂ ಕೋವಿಡ್‌ ಹೆಮ್ಮಾರಿ ವ್ಯಾಪಿಸಿದೆ. ಜಿಲ್ಲೆಯಲ್ಲಿ ಇಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದೆ. ಅಲ್ಲದೇ ಮತ್ತೊಮ್ಮೆ ಇಬ್ಬರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ರಾಮನಗರದಲ್ಲಿ ಎರಡನೇ ಕೋವಿಡ್ ಪ್ರಕರಣ ದಾಖಲಾಗಿದೆ. 21 ವರ್ಷದ ಮಹಿಳೆಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಆಕೆಯ ತಾಯಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಕಾರವಾರದಲ್ಲಿ ಒಬ್ಬರಿಗೆ ಕೋವಿಡ್ ಸೋಂಕು ತಗುಲಿದೆ. ಕೋವಿಡ್ -19 ನಿಂದ ಬೆಂಗಳೂರಿನಲ್ಲಿ ಈಗಾಗಲೇ ಒಂದು ಸಾವು ಸಂಭವಿಸಿದೆ.

ಇದನ್ನೂ ಓದಿ : ಚಿಕ್ಕಮಗಳೂರಿನ ಬಾಬಾಬುಡ್‌ ಗಿರಿಯಲ್ಲಿ ದತ್ತ ಜಯಂತಿ : ಅರ್ಚರಿಗೆ ಅಂಗರಕ್ಷಕರ ನೇಮಕ

Karnataka Covid-19 Updates 92 Covid Active Cases 2 deaths in 24 hours

Comments are closed.