ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಇಂದು ರಾಜ್ಯದಲ್ಲಿ ಬರೋಬ್ಬರಿ 39,510 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 20,13,193ಕ್ಕೆ ಏರಿಕೆಯಾಗಿದೆ.
ಕೊರೊನಾ ಸೋಂಕಿನ ಆರ್ಭಟ ಕರ್ನಾಟಕದಲ್ಲಿ ಕೊಂಚ ತಗ್ಗಿದೆ. ಇಂದೂ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ 15,879 ಮಂದಿಗೆ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 9,83,519ಕ್ಕೆ ಏರಿಕೆಯಾಗಿದೆ.

ಬೆಂಗಳೂರಲ್ಲಿ ಸಾವುನ ಸಂಖ್ಯೆ ಏರಿಕೆಯನ್ನು ಕಂಡಿದೆ. ಇಂದು ಸೋಂಕಿಗೆ ತುತ್ತಾಗಿದ್ದ 259 ಮಂದಿ ಸಾವನ್ನಪ್ಪಿದ್ರೆ, ರಾಜ್ಯದಲ್ಲಿ ಬರೋಬ್ಬರಿ 480 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 19,852ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
