ಬೆಂಗಳೂರು : ಕರ್ನಾಟಕದಲ್ಲಿಂದು ಕೊರೊನಾ ಮಹಾಸ್ಪೋಟ ಸಂಭವಿಸಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 48,296 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ ಇಂದು ಒಂದೇ ದಿನ 217 ಮಂದಿ ಸಾವನ್ನಪ್ಪಿದ್ದಾರೆ.
ಇನ್ನ ಸಿಲಿಕಾನ್ ಸಿಟಿ ಬೆಂಗಳೂರಿಗರು ಕೊರೊನಾ ಸ್ಪೋಟದ ತೀವ್ರತೆಗೆ ಬೆಚ್ಚಿಬಿದ್ದಿದ್ದಾರೆ. 26,756 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿ ದ್ದು, 93 ಮಂದಿಯನ್ನು ಸೋಂಕು ಬಲಿಪಡೆದಿದೆ. ಇನ್ನು ಅರಮನೆ ನಗರಿ ಮೈಸೂರು ಕೊರೊನಾ ಆರ್ಭಟಕ್ಕೆ ತತ್ತರಿಸಿ ಹೋಗಿದೆ. 3500 ಪ್ರಕರಣ ದಾಖಲಾಗಿದ್ದು 13 ಮಂದಿಯನ್ನು ಕೊರೊನಾ ಬಲಿ ಪಡೆದಿದೆ.
ಅಲ್ಲದೇ ದಕ್ಷಿಣ ಕನ್ನಡ, ಬಳ್ಳಾರಿ, ಕಲಬುರಗಿ, ಮಂಡ್ಯ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿದಾಟಿದ್ದು, ಸಾವಿನ ಸಂಖ್ಯೆಯಲ್ಲಿಯೂ ಭಾರೀ ಏರಿಕೆಯನ್ನು ಕಂಡಿದೆ.

