ಕಾಂಗ್ರೆಸ್​ ಶಾಸಕನ ಪುತ್ರನಿಗೆ ತನ್ನ ಹೆಸರನ್ನೇ ನಾಮಕರಣ ಮಾಡಿದ ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಕರ್ನಾಟಕದ ಜನತೆಗೆ ವಿವಿಧ ಭಾಗ್ಯಗಳ ಹೊಳೆಯನ್ನೇ ಹರಿಸಿರುವ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆಶಿವಕುಮಾರ್​ (DCM DK Shivakumar) ಗೆ ಹೊಸದೊಂದು ಭಾಗ್ಯ ಒಲಿದುಬಂದಿದೆ.

ರಾಜ್ಯದಲ್ಲಿ ಸಂಪುಟ ವಿಸ್ತರಣೆ, ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್​ ಅವರು ತಮ್ಮ ಜೀವನದಲ್ಲಿ ನಡೆದ ಅತ್ಯಂತ ಖುಷಿಯ ಕ್ಷಣವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

Karnataka DCM DK Shivakumar Named Congress Mla son After himself

ಕುಡುಚಿ ಮತಕ್ಷೇತ್ರದ ಕಾಂಗ್ರೆಸ್​ ಶಾಸಕ ಮಹೇಂದ್ರ ತಮ್ಮಣ್ಣನವರ್​ ಪುತ್ರನಿಗೆ ಡಿಸಿಎಂ ಡಿ.ಕೆ ಶಿವಕುಮಾರ್​ ನಾಮಕರಣ ಮಾಡಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್​ ಗೃಹಕಚೇರಿಗೆ ತಮ್ಮ ಪುತ್ರ ಹಾಗೂ ಪತ್ನಿ, ಮಗಳೊಂದಿಗೆ ಶಾಸಕ ಮಹೇಂದ್ರ ತಮ್ಮಣ್ಣನವರ್​ ಆಗಮಿಸಿ ತಮ್ಮ ಪುತ್ರನಿಗೆ ಡಿಕೆ ಅಮೃತಹಸ್ತದಿಂದ ನಾಮಕರಣ ಮಾಡಿದ್ದಾರೆ.

Also Read : ಕಿಲ್ಲರ್‌ ಕಾಂಗ್ರೆಸ್‌ ಪೋಸ್ಟರ್‌ : ಸರಕಾರಕ್ಕೆ ಶೋಭಾ ಕರಂದ್ಲಾಜೆ ಟಕ್ಕರ್‌

DCM DK Shivakumar : ಶಿವಕುಮಾರ್​.. ಶಿವಕುಮಾರ್​.. ಶಿವಕುಮಾರ್​ :

ಕುಡುಚಿ ಶಾಸಕ ಮಹೇಂದ್ರ ತಮ್ಮಣ್ಣನವರ್​, ತಮ್ಮ ಪುತ್ರನಿಗೆ ಡಿ. ಕೆ ಶಿವಕುಮಾರ್​ ಅವರ ಹೆಸರನ್ನೇ ಇಡಿಸಿದ್ದಾರೆ. ಮಗುವಿನ ಕಿವಿಯಲ್ಲಿ ಡಿ. ಕೆಶಿವಕುಮಾರ್​ ಮೂರು ಬಾರಿ ಶಿವಕುಮಾರ್​ ಎಂದು ಹೇಳುವ ಮೂಲಕ ನಾಮಕರಣ ಮಾಡಿದ್ದಾರೆ.

Karnataka DCM DK Shivakumar Named Congress Mla son After himself

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಂಚಿಕೊಂಡಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ! ನನ್ನ ಗೃಹಕಚೇರಿಯಲ್ಲಿಂದು ಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರ ಮಗನಿಗೆ “ಶಿವಕುಮಾರ್” ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು. ನನ್ನ ಹೆಸರನ್ನು ಮಗುವಿಗೆ ಇಡಲು ನಿರ್ಧರಿಸಿದ ಶಾಸಕರ ಈ ನಡೆಗೆ ನಾನು ಧನ್ಯ!

Also Read : ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಕೇವಲ ನಂದಿನಿ ತಿನಿಸು : ಪ್ಲಾಸ್ಟಿಕ್​ ಬಾಟಲಿ ಬಳಕೆಯೂ ನಿಷೇಧ

ಮುಂದಿನ ದಿನಗಳಲ್ಲಿ ಈ ಮುದ್ದಾದ ಮಗು ನನಗಿಂತಲೂ ಎತ್ತರಕ್ಕೆ ಬೆಳೆಯಲಿ, ತಂದೆ-ತಾಯಿಗಳಿಗೆ ಒಳ್ಳೆಯ ಹೆಸರು ತರುವಂತಾಗಲಿ ಎಂದು ಶುಭಹಾರೈಸಿದೆ. ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ, ಈ “ಶಿವಕುಮಾರ” ಕರುನಾಡ ಬೆಳಗುವ ಕುವರನಾಗಲಿ ಎಂದು ಮನತುಂಬಿ ಹಾರೈಸುವೆ ಎಂದು ಬರೆದುಕೊಂಡಿದ್ದಾರೆ.

Karnataka DCM DK Shivakumar Named Congress Mla son After himself

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories