Bangalore : ರಕ್ಷಣಾ ಇಲಾಖೆ ಪೋಟೋ ತೆಗೆದು ವಿದೇಶಕ್ಕೆ ಕಳುಹಿಸುತ್ತಿದ್ದ ವ್ಯಕ್ತಿಯ ಬಂಧನ

ಬೆಂಗಳೂರು : ದೇಶದ ವಿವಿಧ ರಾಜ್ಯಗಳಲ್ಲಿರುವ ರಕ್ಷಣಾ ಇಲಾಖೆಗೆ ಸಂಬಂಧಿಸಿದ ಪೋಟೋಗಳನ್ನು ತೆಗೆದು ವಿದೇಶಿ ಏಜೆನ್ಸಿಗಳಿಗೆ ಕಳುಹಿಸುತ್ತಿದ್ದ ವ್ಯಕ್ತಿಯನ್ನು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ರಾಜಸ್ತಾನದ ಮೂಲದವನು ಎಂದು ತಿಳಿದುಬಂದಿದೆ. ಆರೋಪಿಯು ದೇಶದ ವಿವಿಧ ರಾಜ್ಯಗಳಲ್ಲಿ ಇರುವ ಮಿಲಿಟರಿ ಏರ್ ಬೇಸ್, ರಕ್ಷಣಾ ಇಲಾಖೆ ಕಚೇರಿ ಪೊಟೊ, ರಕ್ಷಣಾ ಆಸ್ಪತ್ರೆಯ ಪೋಟೋಗಳನ್ನು ತೆಗೆಯುತ್ತಿದ್ದ. ನಂತರ ಪೋಟೋಗಳನ್ನು ವಿದೇಶಿ ಏಜೆನ್ಸಿಗಳಿಗೆ ಕಳುಹಿಸಿಕೊಡುತ್ತಿದ್ದ. ಈ ಕುರಿತು ಮಿಲಿಟರಿ ಇಂಟಲಿಜೆನ್ಸಿ ಅಧಿಕಾರಿಗಳು ನೀಡಿದ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯ ವಿರುದ್ದ ಇದೀಗ ಆಫೀಷಿಯನ್‌ ಸೀಕ್ರೆಟ್‌ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಬಿ ಪೊಲೀಸರು ಹಲವು ಸಮಯಗಳಿಂದಲೂ ಆರೋಪಿ ಬೆಂಗಳೂರಿನಲ್ಲಿ ತಲೆ ಮರೆಯಿಸಿಕೊಂಡಿದ್ದ. ಇದೀಗ ಸಿಸಿಬಿ ಪೊಲೀಸರು ಬಂಧಿಸಿದ್ದು, ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ದಾವಣಗೆರೆ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಇದನ್ನೂ ಓದಿ : ಗಣೇಶ ವಿಸರ್ಜನೆಯ ವೇಳೆಯಲ್ಲಿ ದುರಂತ, 10 ಮಂದಿ ದುರ್ಮರಣ

( Defense Department detains a man who is sending a photo arrested CCB police in Bangalore )

Comments are closed.