Karnataka Election 2023 : ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ,124 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ (Karnataka Election 2023) ಘೋಷಣೆಗೆ ಮುನ್ನವೇ ಕಾಂಗ್ರೆಸ್‌ 124 ಕ್ಷೇತ್ರಗಳಿಗೆ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕ್ಷೇತ್ರ ಹುಡುಕಾಟ ನಡೆಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಕೊನೆಗೂ ವರುಣಾ ಕ್ಷೇತ್ರದಿಂದಲೇ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ದೇವನಹಳ್ಳಿಯಿಂದ ಕೆ.ಎಚ್.ಮುನಿಯಪ್ಪ, ಟಿ.ನರಸೀಪುರ ಕ್ಷೇತ್ರದಿಂದ ಎಚ್.ಸಿ.ಮಹದೇವಪ್ಪ, ಬಂಟ್ವಾಳ ಕ್ಷೇತ್ರದಿಂದ ರಮಾನಾಥ ರೈ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ಯೋಜನೆ ರೂಪಿಸಿದೆ.

ಬಹುತೇಕ ಕ್ಷೇತ್ರಗಳಿಗೆ ಕಾಂಗ್ರೆಸ್‌ ಹೊಸ ಮುಖಗಳನ್ನು ಪರಿಚಯಿಸಿದೆ. ಮೊದಲ ಹಂತದಲ್ಲಿ ಏಕ ಅಭ್ಯರ್ಥಿಗಳಿರುವ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಎರಡನೇ ಹಂತದಲ್ಲಿ ಉಳಿದ ನೂರು ಕ್ಷೇತ್ರಗಳಲ್ಲಿ ಅಭ್ಯರ್ಥಿ ಪ್ರಕಟವಾಗುವ ಸಾಧ್ಯತೆಯಿದೆ. ಬಾರೀ ಪೈಪೋಟಿಯಿಂದ ಕೂಡಿರುವ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಎಐಸಿಸಿ ಪರಿಶೀಲನೆ ನಡೆಸುತ್ತಿದ್ದು, ಚುನಾವಣಾ ಘೋಷಣೆಯ (Karnataka Election 2023) ನಂತರದಲ್ಲಿ ಅಭ್ಯರ್ಥಿಗಳ ಘೋಷಣೆಯಾಗುವ ಸಾಧ್ಯತೆಯಿದೆ.

Karnataka Election 2023 Congress 124 constituency ticket announced 1

ಕಾಂಗ್ರೆಸ್‌ ಹಿರಿಯ ಮುಖಂಡರಾದ ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ರೆ, ಬೆಳಗಾವಿ ಗ್ರಾಮಾಂತರ ಕ್ಷೇತ್ರದಿಂದ ಲಕ್ಷ್ಮೀ ಹೆಬ್ಬಾಳ್ಕರ್‌, ಬಸವನ ಬಾಗೇವಾಡಿಯಿಂದ ಶಿವಾನಂದ ಪಾಟೀಲ್‌, ಬಬಲೇಶ್ವರದಿಂದ ಎಂ.ಬಿ.ಪಾಟೀಲ್‌, ಚಿತ್ರಾಪುರಿಂದ ಪ್ರಿಯಾಂಕ ಖರ್ಗೆ, ಬಾಲ್ಕಿಯಿಂದ ಈಶ್ವರ ಖಂಡ್ರೆ, ಹಳಿಯಾಳದಿಂದ ಆರ್.ವಿ.ದೇಶಪಾಂಡೆ, ಹಾವೇರಿಯಿಂದ ರುದ್ರಪ್ಪ ಲಮಾಣಿ, ಹಿರಿಯೂರಿನಿಂದ ಡಿ.ಸುಧಾಕರ್‌, ದಾವಣಗೆರೆ ಉತ್ತರ ಕ್ಷೇತ್ರದಿಂದ ಎಸ್. ಎಸ್.ಮಲ್ಲಿಕಾರ್ಜುನ್‌.

Karnataka Election 2023 Congress 124 constituency ticket announced 1
Karnataka Election 2023 Congress 124 constituency ticket announced 1

, ಭದ್ರಾವತಿಯಿಂದ ಬಿ.ಕೆ.ಸಂಗಮೇಶ್‌, ಬೈಂದೂರಿನಿಂದ ಗೋಪಾಲ ಪೂಜಾರಿ, ಕಾಪುವಿನಿಂದ ವಿನಯ ಕುಮಾರ್‌ ಸೊರಕೆ, ಕೊರಟಗೆರೆಯಿಂದ ಡಾ.ಜಿ.ಪರಮೇಶ್ವರ್‌, ಮಧುಗಿರಿಯಿಂದ ಕೆ.ಎನ್.ರಾಜಣ್ಣ, ಬ್ಯಾಟರಾಯನಪುರದಿಂದ ಕೃಷ್ಣ ಬೈರೇಗೌಡ, ಸರ್ವಜ್ಞ ನಗರದಿಂದ ಕೆ.ಜೆ.ಜಾರ್ಜ್‌, ಗಾಂಧಿನಗರದಿಂದ ದಿನೇಶ್‌ ಗುಂಡೂರಾವ್‌, ಚಾಮರಾಜಪೇಟೆಯಿಂದ ಜಮೀರ್‌ ಅಹ್ಮದ್‌ ಖಾನ್‌, ಬಸವನಗುಡಿಯಿಂದ ಯು.ಬಿ. ವೆಂಕಟೇಶ್‌, ಬಿ.ಟಿ.ಎಂ. ಲೇಔಟ್‌ನಿಂದ ರಾಮಲಿಂಗಾ ರೆಡ್ಡಿ, ದೇವನಹಳ್ಳಿಯಿಂದ ಕೆ.ಎಚ್.ಮುನಿಯಪ್ಪ, ಮಂಗಳೂರು ಕ್ಷೇತ್ರದಿಂದ ಯು.ಟಿ.ಖಾದರ್ ಅವರಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ : Rahul Gandhi sacked : ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ವಜಾ

Karnataka Election 2023 Congress 124 constituency ticket announced 1

Comments are closed.