Congress ticket : ಯು.ಟಿ.ಖಾದರ್‌, ರಮಾನಾಥ ರೈ, ರಕ್ಷಿತ್‌ ಶಿವರಾಂಗೆ ಕಾಂಗ್ರೆಸ್‌ ಟಿಕೆಟ್‌

ಮಂಗಳೂರು : ಕಾಂಗ್ರೆಸ್‌ ಪಕ್ಷ (Congress ticket) ವಿಧಾನಸಭಾ ಚುನಾವಣೆಗಾಗಿ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕೆಲವೇ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ ಮಾಡಿದ್ದು, ಹಳೆಯ ಹುಲಿಗಳ ಜೊತೆಗೆ ಹೊಸ ಮುಖಗಳಿಗೆ ಮಣೆ ಹಾಕಿದೆ. ಮಂಗಳೂರು ಕ್ಷೇತ್ರದಿಂದ ಯು.ಟಿ.ಖಾದರ್‌, ಕಾಪುವಿನಿಂದ ವಿನಯ ಕುಮಾರ್‌ ಸೊರಕೆ ಕಣಕ್ಕೆ ಇಳಿದಿದ್ರೆ, ಬಂಟ್ವಾಳ ಕ್ಷೇತ್ರದಿಂದ ರಮಾನಾಥ ರೈ, ಬೈಂದೂರು ಕ್ಷೇತ್ರದಿಂದ ಗೋಪಾಲ ಪೂಜಾರಿ ಅವರನ್ನು ಕಾಂಗ್ರೆಸ್‌ ಕಣಕ್ಕೆ ಇಳಿಸಿದೆ. ಮೂಡಬಿದ್ರೆ ಕ್ಷೇತ್ರದಿಂದ ಮಿಥುನ್‌ ರೈ, ಸುಳ್ಯ ಕ್ಷೇತ್ರದಿಂದ ಕೃಷ್ಣಪ್ಪ ಜಿ., ಬೆಳ್ತಂಗಡಿ ಕ್ಷೇತ್ರದಿಂದ ಯುವ ಕಾಂಗ್ರೆಸ್‌ ಮುಖಂಡ ರಕ್ಷಿತ್‌ ಶಿವರಾಮ್‌ ಹಾಗೂ ಕುಂದಾಪುರ ಕ್ಷೇತ್ರದಿಂದ ದಿನೇಶ್‌ ಹೆಗ್ಡೆ ಅವರಿಗೆ ಟಿಕೆಟ್‌ ನೀಡಿದೆ.

ಉಡುಪಿ ಜಿಲ್ಲೆಯ ಕಾಪು, ಕುಂದಾಪುರ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ ಟಿಕೆಟ್‌ (Congress ticket) ಘೋಷಣೆ ಮಾಡಿದ್ದು, ಉಡುಪಿ, ಕಾರ್ಕಳ ವಿಧಾನಸಭಾ ಕ್ಷೇತ್ರಗಳಿಗೆ ಇನ್ನಷ್ಟೇ ಟಿಕೆಟ್‌ ಘೋಷಣೆಯಾಗಬೇಕಾಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು, ಮೂಡಬಿದಿರೆ, ಬೆಳ್ತಂಗಡಿ, ಸುಳ್ಯ ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರಳಿಗೆ ಟಿಕೆಟ್‌ ಹಂಚಿಕೆ ಮಾಡಿದೆ. ಉಳಿದಂತೆ ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರಗಳಿಗೆ ಇನ್ನಷ್ಟೇ ಅಭ್ಯರ್ಥಿಗಳ ಘೋಷಣೆ ಯಾಗಬೇಕಾಗಿದೆ. ಇದನ್ನೂ ಓದಿ : Pushpa Amar Nath: ಉರಿಗೌಡ ನಂಜೇಗೌಡ ತಮಿಳುನಾಡು ಮೂಲದವರು: ಅವರ ಹೆಸರಲ್ಲಿ ಬಿಜೆಪಿ ರಾಜಕೀಯ ನಾಚಿಕೆಗೇಡು ; ಪುಷ್ಪಾ ಅಮರ್‌ ನಾಥ್‌

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಇನಾಯತ್‌ ಆಲಿ ಹಾಗೂ ಮೊಯಿದ್ದೀನ್‌ ಬಾವಾ ನಡುವೆ ಪೈಪೋಟಿ ಏರ್ಪಟ್ಟಿದೆ. ಇನ್ನು ಪುತ್ತೂರು ಕ್ಷೇತ್ರದಲ್ಲಿ ಅಶೋಕ್‌ ಕುಮಾರ್‌ ರೈ ಹಾಗೂ ಶಕುಂತಲಾ ಶೆಟ್ಟಿ ಅವರ ಹೆಸರು ಮಂಚೂಣಿಯಲ್ಲಿದೆ. ದಕ್ಷಿಣ ಕ್ಷೇತ್ರದಲ್ಲಿ ಐವನ್‌ ಡಿಸೋಜಾ ಹಾಗೂ ಪದ್ಮರಾಜ್‌ ಅವರ ಹೆಸರು ಕೇಳಿಬಂದಿದೆ. ಈ ಮೂರು ಕ್ಷೇತ್ರಗಳಲ್ಲಿ ಪೈಪೋಟಿ ಎದುರಾದ ಹಿನ್ನೆಲೆಯಲ್ಲಿ ಎರಡನೇ ಹಂತದಲ್ಲಿ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆಯಿದೆ. ಇದನ್ನೂ ಓದಿ : Karnataka Election : ಕುಂದಾಪುರಕ್ಕೆ ದಿನೇಶ್‌ ಹೆಗ್ಡೆ ಮೊಳಹಳ್ಳಿ, ಕಾಪುಗೆ ವಿನಯ್‌ ಕುಮಾರ್‌ ಸೊರಕೆ

ಉಡುಪಿ ವಿಧಾನಸಭಾ ಕ್ಷೇತ್ರದಿಂದ ಮೊಗವೀರ ಸಮುದಾಯದ ಅಭ್ಯರ್ಥಿಗಳು ಕಣಕ್ಕೆ ಇಳಿಯುವ ಸಾಧ್ಯತೆಯಿದ್ದು, ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಬಿಲ್ಲವ ಅಥವಾ ಕ್ರೈಸ್ತ ಸಮುದಾಯದ ಅಭ್ಯರ್ಥಿ ಘೋಷಿಸುವ ಸಾಧ್ಯತೆಯಿದೆ. ಇನ್ನು ಪುತ್ತೂರು ಕ್ಷೇತ್ರದಿಂದ ಬಂಟ ಸಮುದಾಯ, ಮಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಲ್ಲವ, ಮಂಗಳೂರು ಉತ್ತರ ಕ್ಷೇತ್ರದಿಂದ ಅಲ್ಪಸಂಖ್ಯಾತ ಅಭ್ಯರ್ಥಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಇದನ್ನೂ ಓದಿ : Karnataka Election 2023 : ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ,124 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

Comments are closed.