ಕರ್ನಾಟಕದಲ್ಲಿಂದು ಪ್ರಧಾನಿ ಮೋದಿ, ಅಮಿತಾ ಶಾ, ಯೋಗಿ ಆದಿತ್ಯನಾಥ್‌ ಆರ್ಭಟ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Election Campaign) ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ (PM Modi) , ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) , ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಘಟಾನುಘಟಿ ನಾಯಕರು ಅಬ್ಬರದ ಪ್ರಚಾರ ಕಾರ್ಯವನ್ನು ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಇಂದು ಬೆಂಗಳೂರಿನಲ್ಲಿ ರೋಡ್‌ ಶೋ ನಡೆಸಲಿದ್ದು, ಬಾದಾಮಿ ಮತ್ತು ಹಾವೇರಿಯಲ್ಲಿಯೂ ಚುನಾವಣಾ ಪ್ರಚಾರ ಕಾರ್ಯವನ್ನು ನಡೆಸಲಿದ್ದಾರೆ. ಇನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸವದತ್ತಿ, ಅಥಣಿ, ರಾಯಭಾಗ್‌, ಚಿಕ್ಕೋಡಿ ಹಾಗೂ ಯಮಕನಮರಡಿಯಲ್ಲಿ ಚುನಾವಣಾ ಪ್ರಚಾರ (Karnataka Election Campaign) ನಡೆಸಲಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಅವರು ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆರ್ಭಟಿಸಲಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಉಡುಪಿ ಜಿಲ್ಲೆಯ ಕಾರ್ಕಳ ಹಾಗೂ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಪ್ರಚಾರ ಕಾರ್ಯವನ್ನು ನಡೆಸಲಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಮದ್ದೂರು, ಚಿಂತಾಮಣಿ ಹಾಗೂ ಬಾಗೇಪಲ್ಲಿ, ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಔರಾದ್‌, ಬಾಲ್ಕಿ, ಬಸವಕಲ್ಯಾಣ, ಹುಮ್ನಾಬಾದ್‌, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಸರ್ಮ ವಿರಾಜಪೇಟೆ, ಮಡಿಕೇರಿ, ಬೆಳ್ತಂಗಡಿ, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಡ್‌ ಹಗರಿಬೊಮ್ಮನಹಳ್ಳಿ, ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ.

ಉಳಿದಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಬ್ಯಾಡಗಿ, ಹಾವೇರಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀರ್ಥಹಳ್ಳಿ, ಬೈಂದೂರು, ಹೊನ್ನಾಳಿ ಹಾಗೂ ಸೊರಬ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಯಾದಗಿರಿ, ಸೇಡಂ, ಕಲ್ಬುರ್ಗಿ ಗ್ರಾಮೀಣ, ನಟ ಕಿಚ್ಚ ಸುದೀಪ್‌ ದೇವನಹಳ್ಳಿ, ದೊಡ್ಡಬಳ್ಳಾಪುರ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಹೊಸಕೋಟೆ ವಿಧಾನಸಭಾ ಚುನಾವಣೆಯಲ್ಲಿ ರೋಡ್‌ ಶೋ ನಡೆಸಿ ಬಿಜೆಪಿ ಪರ ಮತಯಾಚನೆ ನಡೆಸಲಿದ್ದಾರೆ.

ಮೇ ೧೦ರಂದು ನಡೆಯಲಿರುವ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇನ್ನು ಎರಡು ದಿನಗಳಷ್ಟೇ ಬಾಕಿ ಉಳಿದಿದೆ. ಹೀಗಾಗಿ ಬಿಜೆಪಿ ಶತಾಯಗತಾಯ ಅಧಿಕಾರಕ್ಕೆ ಬರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲ ಬೃಹತ್‌ ರೋಡ್‌ ಶೋ ನಡೆಸಲಿದ್ದು, ಬೆಂಗಳೂರಿನ ಸಂಚಾರದಲ್ಲಿ ಬದಲಾವಣೆಯನ್ನು ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ : Horoscope Today May 06: ಹೇಗಿದೆ ಇಂದಿನ ಜಾತಕಫಲ

ಇದನ್ನೂ ಓದಿ : Manipur Violence : ಮಣಿಪುರ ಹಿಂಸೆ – ಪ್ರೀತಿ ಏಕೆ ಆ ಭೂಮಿ ಮೇಲಿದೆ ?

ಇದನ್ನೂ ಓದಿ : Congress collusion SDPI : ಎಸ್‌ಡಿಪಿಐ ಜೊತೆಗೆ ಕಾಂಗ್ರೆಸ್‌ ಒಪ್ಪಂದ : ವಿಡಿಯೋ ರಿಲೀಸ್‌ ಮಾಡಿದ ಬಿಜೆಪಿ

Comments are closed.