Karnataka Election Result 2023 : ಉಡುಪಿ ಜಿಲ್ಲೆಯಲ್ಲಿ ಖಾತೆ ತೆರೆಯದ ಕಾಂಗ್ರೆಸ್, ಐದು ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ

ಉಡುಪಿ : Karnataka Election Result 2023 : ಕರಾವಳಿ ಜಿಲ್ಲೆ ಎಂದೇ ಪ್ರಖ್ಯಾತಿ ಪಡೆದ ಉಡುಪಿಯಲ್ಲಿ ಒಟ್ಟು 5 ವಿಧಾನಸಭಾ ಕ್ಷೇತ್ರಗಳಿವೆ. ಕಾರ್ಕಳ, ಕಾಪು, ಉಡುಪಿ, ಕುಂದಾಪುರ ಹಾಗೂ ಬೈಂದೂರು ಕ್ಷೇತ್ರವನ್ನು ಹೊಂದಿರುವ ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೆಸ್‌ ಹಾಗೂ ಬಿಜೆಪಿಯ ನಡುವೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದ್ದು, 5 ವಿಧಾನ ಸಭಾ ಕ್ಷೇತ್ರಗಳ ಪೈಕಿ ಐದು ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಗೆಲುವಿನ ಪತಾಕೆ ಹಾರಿಸಿದೆ. ರಾಜ್ಯದಾದ್ಯಂತ ಕಾಂಗ್ರೆಸ್‌ ಪರ ಅಲೆ ವ್ಯಕ್ತವಾಗಿದ್ದರೂ ಕೂಡ ಕರಾವಳಿ ಭಾಗದಲ್ಲಿ ಮಾತ್ರ ಕಾಂಗ್ರೆಸ್‌ ಖಾತೆ ತೆರೆಯಲು ವಿಫಲವಾಗಿದೆ.

ಕರಾವಳಿ ಬಿಜೆಪಿ ಭದ್ರಕೋಟೆ. ಹೀಗಾಗಿ ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ( Karnataka Election Result 2023) ಬಿಜೆಪಿಯು ಗೆಲುವು ಸಾಧಿಸಿದೆ. ಈ ಭಾರೀ ಉಡುಪಿಯಲ್ಲಿ ಯಶ್‌ಪಾಲ್‌ ಸುವರ್ಷ, ಕಾಪುವಿನಲ್ಲಿ ಗುರ್ಮೆ ಸುರೇಶ್‌ ಶೆಟ್ಟಿ, ಕುಂದಾಪುರದಲ್ಲಿ ಕಿರಣ್‌ ಕೊಡ್ಗಿ, ಕಾರ್ಕಳದಲ್ಲಿ ಸುನಿಲ್‌ ಕುಮಾರ್‌, ಬೈಂದೂರು ಗುರುರಾಜ್‌ ಗಂಟಿಹೊಳೆ ಅವರು ಗೆಲುವು ಸಾಧಿಸಿದ್ದಾರೆ. ಆರಂಭದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿತ್ತು. ಆದರೆ ನಂತರದಲ್ಲಿ ಗುರುರಾಜ್‌ ಗಂಟಿಹೊಳೆ ಗೆಲುವು ಸಾಧಿಸಿದ್ದಾರೆ.

ಉಡುಪಿ ಕ್ಷೇತ್ರ : ಯಶ್‌ಪಾಲ್‌ ಸುವರ್ಣಗೆ ಗೆಲುವು

Karnataka Election Result 2023 Udupi district 5 seats win BJP

ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಯಶಪಾಲ್‌ ಸುವರ್ಣ ಗೆಲುವು ದಾಖಲಿಸಿದ್ದಾರೆ. ಇದೇ ಮೊದಲ ಬಾರಿಗೆ ಯಶಪಾಲ್‌ ಸುವರ್ಣ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಯಶಪಾಲ್‌ ಸುವರ್ಣ 97,079 ಮತಗಳನ್ನು ಪಡೆದುಕೊಂಡಿದ್ರೆ, ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ ರಾಜ್‌ ಕಾಂಚನ್‌ 64,303 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಯಶಪಾಲ್‌ ಸುವರ್ಣ 32,776 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಕಾಪು ವಿಧಾನಸಭಾ ಕ್ಷೇತ್ರ : ಗುರ್ಮೆ ಸುರೇಶ್‌ ಶೆಟ್ಟಿಗೆ ಗೆಲುವು

Karnataka Election Result 2023 Udupi district 5 seats win BJP

ಕಾಪು ವಿಧಾನಸಭಾ ಕ್ಷೇತ್ರ ಈ ಬಾರಿಯೂ ಬಿಜೆಪಿ ಪಾಲಾಗಿದೆ. ಇದೇ ಮೊದಲ ಬಾರಿಗೆ ಸ್ಪರ್ಧೆ ಮಾಡಿದ್ದ ಗುರ್ಮೆ ಸುರೇಶ್‌ ಶೆಟ್ಟಿ ಅವರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಗುರ್ಮೆ ಸುರೇಶ್‌ ಶೆಟ್ಟಿ 80,559 ಮತಗಳನ್ನು ಪಡೆದಕೊಂಡಿದ್ರೆ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ವಿನಯ ಕುಮಾರ್‌ ಸೊರಕೆ ಅವರು 67555 ಮತಗಳನ್ನು ಪಡೆಯುವ ಮೂಲಕ ಗುರ್ಮೆ ಸುರೇಶ್‌ ಶೆಟ್ಟಿ ಅವರು 13,004 ಅಂತರದಿಂದ ಗೆಲವು ಸಾಧಿಸಿದ್ದಾರೆ.

Karnataka Election Result 2023 Udupi district 5 seats win BJP

ಕುಂದಾಪುರ ವಿಧಾನಸಭಾ ಕ್ಷೇತ್ರ : ಕಿರಣ್‌ ಕೊಡ್ಗಿಗೆ ಗೆಲುವು

Karnataka Election Result 2023 Udupi district 5 seats win BJP

ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಿರಣ್‌ ಕೊಡ್ಗಿ ಅವರು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕಿರಣ್‌ ಕೊಡ್ಗಿ ಅವರು 95511 ಮತಗಳನ್ನು ಪಡೆದುಕೊಂಡಿದ್ರೆ, ಕಾಂಗ್ರೆಸ್‌ ಅಭ್ಯರ್ಥಿ ದಿನೇಶ್‌ ಹೆಗ್ಡೆ ಮೊಳಹಳ್ಳಿ ಅವರು 56248 ಮತಗಳನ್ನು ಪಡೆಯುವ ಮೂಲಕ ಅಂತರದಿಂದ ಸೋಲನ್ನು ಕಂಡಿದ್ದಾರೆ.

Karnataka Election Result 2023 Udupi district 5 seats win BJP

ಕಾರ್ಕಳ ವಿಧಾನಸಭಾ ಕ್ಷೇತ್ರ : ಸುನಿಲ್‌ ಕುಮಾರ್‌ಗೆ ಗೆಲುವು

Karnataka Election Result 2023 Udupi district 5 seats win BJP

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸ ಕಾರ್ಕಳ ಸುನಿಲ್‌ ಕುಮಾರ್‌ ಅವರು ಗೆಲುವು ಸಾಧಿಸಿದ್ದಾರೆ. ವಿ. ಸುನಿಲ್‌ ಕುಮಾರ್‌ 77,028 ಮತಗಳನ್ನು ಗಳಿಸಿದ್ರೆ, ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಉದಯ್‌ ಶೆಟ್ಟಿ ಮುನಿಯಾಲು 72,426 ಮತ ಹಾಗೂ ಶ್ರೀರಾಮ ಸೇನೆಯ ಪ್ರಮೋದ್‌ ಮುತಾಲಿಕ್‌ ಅವರು 4508 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಸುನಿಲ್‌ ಕುಮಾರ್‌ 4,602 ಅಂತರದಿಂದ ಗೆಲುವು ಸಾಧಿಸಿದ್ದಾರೆ.

Karnataka Election Result 2023 Udupi district 5 seats win BJP

ಬೈಂದೂರು ವಿಧಾನಸಭಾ ಕ್ಷೇತ್ರ : ಗುರುರಾಜ್‌ ಗಂಟಿಹೊಳೆಗೆ ಗೆಲುವು

ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಗುರುರಾಜ್‌ ಗಂಟಿಹೊಳೆ ಅವರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ಅಭ್ಯರ್ಥಿ ಗುರುರಾಜ್‌ ಗಂಟಿಹೊಳೆ ಅವರು 98,628 ಮತಗಳನ್ನು ಪಡೆದುಕೊಂಡಿದ್ರೆ, ಕಾಂಗ್ರೆಸ್‌ ಅಭ್ಯರ್ಥಿ ಗೋಪಾಲ ಪೂಜಾರಿ ಅವರು 82,475 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಗುರುರಾಜ್‌ ಗಂಟಿಹೊಳೆ ಅವರು, 16,153 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ : ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು : ಸಿಎಂ ಬಸವರಾಜ್‌ ಬೊಮ್ಮಾಯಿ ರಾಜೀನಾಮೆ

ಇದನ್ನೂ ಓದಿ : Karnataka Election Result : ಬಿಜೆಪಿಯಲ್ಲಿ ಸೋಲು ಕಂಡ ಪ್ರಭಾವಿ ನಾಯಕರು

Comments are closed.