5 Lakh Compensation : ನೆರೆ ಸಂತ್ರಸ್ತರ ನೆರವಿಗೆ ನಿಂತ ಬೊಮ್ಮಾಯಿ : ಮನೆ ಕಳೆದುಕೊಂಡವರಿಗೆ 5 ಲಕ್ಷ ಪರಿಹಾರ

ಬೆಂಗಳೂರು : ರಾಜ್ಯದ ಪ್ರವಾಹ ಸಂತ್ರಸ್ತರ ನೆರವಿಗೆ ರಾಜ್ಯ ಸರಕಾರ ಧಾವಿಸಿದೆ. ನೆರೆ ಹಾವಳಿಯಿಂದ ತತ್ತರಿಸಿದವರಿಗೆ ತುರ್ತು 10 ಸಾವಿರ ಪರಿಹಾರ ಹಾಗೂ ಮನೆ ಕಳೆದು ಕೊಂಡವರಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪ್ರವಾಹದಿಂದ ತತ್ತರಿಸಿದ ಜನರಿಗೆ ತುರ್ತಾಗಿ 10 ಸಾವಿರ ರೂಪಾಯಿ ಪರಿಹಾರವನ್ನು ನೀಡಲಾಗುತ್ತಿದೆ. ಮನೆಗಳಿಗೆ ಸ್ವಲ್ಪ ಹಾನಿಯಾದ್ರೆ 50 ಸಾವಿರ, ಭಾಗಶಃ ಹಾನಿಯಾದ್ರೆ 3 ಲಕ್ಷ ಹಾಗೂ ಮನೆಯನ್ನು ಸಂಪೂರ್ಣವಾಗಿ ಕಳೆದುಕೊಂಡವರಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ವಿತರಿಸಲಾಗುವುದು ಎಂದಿದ್ದಾರೆ.

ರಾಜ್ಯದಲ್ಲಿ ಒಟ್ಟು 11 ಜಿಲ್ಲೆಗಳ ಸುಮಾರು ೪೬೬ ಗ್ರಾಮಗಳು ಪ್ರವಾಹದಿಂದ ತತ್ತರಿಸಿವೆ. ಕೃಷ್ಣ ನದಿ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಇದುವರೆಗೆ 13 ಮಂದಿ ಸಾವನ್ನಪ್ಪಿದ್ದು, ಓರ್ವರು ನಾಪತ್ತೆಯಾಗಿದ್ದಾರೆ. ರಸ್ತೆ ಸಂಪರ್ಕ ಕಡಿದು ಹೋಗಿದೆ. ಈ ನಿಟ್ಟಿನಲ್ಲಿ ಸರಕಾರ ಕ್ರಮಕೈಗೊಂಡಿದೆ ಎಂದರು.

ಬೆಳೆ, ಮಳೆ ಹಾನಿಯ ಕುರಿತು ಮುಂದಿನ 15 ದಿನಗಳಲ್ಲಿ ಸಮೀಕ್ಷೆಯನ್ನು ನಡೆಸಲಾಗುತ್ತದೆ. ಬೆಳೆ ಕಳೆದುಕೊಂಡವರಿಗೆ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮವನ್ನು ಕೈಗೊಳ್ಳಲಾಗುತ್ತದೆ. ಪ್ರವಾಹ ಪರಿಹಾರಕ್ಕಾಗಿ ಸುಮಾರು 150 ಕೋಟಿ ರೂಪಾಯಿ ಹಣವನ್ನು ವಿನಿಯೋಗ ಮಾಡಲಾಗುತ್ತದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 700 ಕೋಟಿ ರೂಪಾಯಿ ಹಣವಿದ್ದು, ಅದರಲ್ಲಿ150 ಕೋಟಿ ರೂಪಾಯಿಯನ್ನು ಎನ್‌ಡಿಆರ್‌ಎಫ್‌ ನಿಧಯಿಂದ ಬಳಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದಿದ್ದಾರೆ.

Comments are closed.