ಹಳೆ ಪಿಂಚಣಿ ಮರು ಜಾರಿ ಸಾಧ್ಯವಿಲ್ಲ, ಕರ್ತವ್ಯಕ್ಕೆ ಹಾಜರಾಗಿ : ಸರಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು : Karnataka government employees Protest : ರಾಜ್ಯದಲ್ಲಿ ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿ ಮಾಡಲು ಸಾಧ್ಯವಿಲ್ಲ. ಸ್ವಲ್ಪ ಕಲಾವಕಾಶ ಕೊಡಿ, ವೇತನ ಹೆಚ್ಚಳ ಮಾಡುತ್ತೇವೆ. ಆದರೆ ಶೇ.೪೦ರಷ್ಟು ವೇತನ ಹೆಚ್ಚಳ ಸಾಧ್ಯವಿಲ್ಲ. ಎಲ್ಲಾ ಸರಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೂಚನೆಯನ್ನು ನೀಡಿದ್ದಾರೆ.

ಸರಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರದ ಹಿನ್ನೆಲೆಯಲ್ಲಿಂದು ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಷ್ಕರಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಸಿಎಂ ನಿವಾಸದಲ್ಲಿ ಭೇಟಿಯಾಗಿದ್ದರು. ಈ ವೇಳೆಯಲ್ಲಿ ನಿನ್ನೆ ತಡರಾತ್ರಿ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಜೊತೆಗೆ ನಡೆದಿರುವ ಸಭೆಯ ನಿರ್ಧಾರವನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ತಿಳಿಸಿದ್ದಾರೆ. ಈ ವೇಳೆಯಲ್ಲಿ ಸರಕಾರಿ ನೌಕರರ ಮುಷ್ಕರದ ಕುರಿತು ಮಾತನಾಡಿರುವ ಸಿಎಂ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಹಳೆ ಪಿಂಚಣಿ ವ್ಯವಸ್ಥೆಯ ಮರು ಜಾರಿಗೆ ಸಾಧ್ಯವೇ ಇಲ್ಲ ಎಂದಿದ್ದಾರೆ.

ಸರಕಾರಿ ನೌಕರರ ಬೇಡಿಕೆಯಂತೆ ಶೇ.೪೦ರಷ್ಟು ವೇತನವನ್ನು ಸದ್ಯಕ್ಕೆ ಏರಿಕೆ ಮಾಡಲು ಸಾಧ್ಯವಿಲ್ಲ. ಸ್ವಲ್ಪ ಕಾಲಾವಕಾಶ ನೀಡಿದ್ರೆ ಸದ್ಯಕ್ಕೆ ಶೇ.೬ ರಿಂದ ೮ ರಷ್ಟು ವೇತನವನ್ನು ಏರಿಕೆ ಮಾಡುತ್ತೇವೆ. ಆದರೆ ಏಕಾಏಕಿ ಶೇ.೪೦ರಷ್ಟು ಏರಿಕ ಮಾಡಲು ಸಾಧ್ಯವಿಲ್ಲ. ನಿನ್ನೆ ರಾತ್ರಿ ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಭೆ ನಡೆಸಿದ್ದರು. ಆದರೆ ಹಣಕಾಸು ಇಲಾಖೆಯ ಅಧಿಕಾರಿಗಳು ವೇತನ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿಲ್ಲ ಎನ್ನಲಾಗುತ್ತಿದೆ. ಏಳನೇ ವೇತನ ಆಯೋಗದ ಮಧ್ಯಂತರ ವರದಿಯನ್ನು ಪಡೆದು ವೇತನ ಜಾರಿ ಮಾಡುವಂತೆ ಸರಕಾರಿ ನೌಕರರು ಆಗ್ರಹಿಸುತ್ತಿದ್ದಾರೆ. ಆದರೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸದ್ಯಕ್ಕೆ ಮಧ್ಯಂತರ ವರದಿ ಜಾರಿಗೆ ಒಪ್ಪಿಗೆ ಸೂಚಿಸಿಲ್ಲ ಎನ್ನಲಾಗುತ್ತಿದೆ.

ಸರಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ (Karnataka government employees Protest) ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಇಂದು ನೌಕರರ ಸಂಘದ ಪದಾಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ. ಆದರೆ ರಾಜ್ಯ ಸರಕಾರ ನಿರ್ಧಾರಕ್ಕೆ ಸರಕಾರಿ ನೌಕರರು ತಲೆ ಬಾಗುತ್ತಾರಾ ಅನ್ನೋದನ್ನು ಕಾದು ನೋಡಬೇಕಾಗಿದೆ. ಇನ್ನು ಹಳೆ ಪಿಂಚಣಿ ವ್ಯವಸ್ಥೆಯನ್ನು ದೇಶದ ಐದು ರಾಜ್ಯಗಳು ಈಗಾಗಲೇ ಜಾರಿಗೆ ತಂದಿವೆ. ಅದೇ ರೀತಿಯಲ್ಲಿಯೇ ನಮಗೂ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದು ಮಾಡಿ, ಹಳೆಯ ಪಿಂಚಣಿಯನ್ನು ಜಾರಿ ಮಾಡುವಂತೆ ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ : Govt employees strike: ಸರಕಾರಿ ನೌಕರರ ಮುಷ್ಕರ: ಶಾಲೆ, ಸರಕಾರಿ ಸೇವೆಗಳು ಬಂದ್, ಚಿಕಿತ್ಸೆಗಾಗಿ ರೋಗಿಗಳ ಪರದಾಟ

ಇದನ್ನೂ ಓದಿ : Strike of government employees: ಸರಕಾರಿ ನೌಕರರ ಅನಿರ್ದಿಷ್ಟಾವದಿ ಮುಷ್ಕರ ಹಿನ್ನಲೆ ಇಂದು ಸಂಜೆ ತುರ್ತು ಸಭೆ

Comments are closed.