ಭಾನುವಾರ, ಏಪ್ರಿಲ್ 27, 2025
Homekarnatakaವೇತನ ಹೆಚ್ಚಳ, ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಕ್ರಮ : ಮುಷ್ಕರ ಕೈಬಿಟ್ಟ ಸರಕಾರಿ...

ವೇತನ ಹೆಚ್ಚಳ, ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಕ್ರಮ : ಮುಷ್ಕರ ಕೈಬಿಟ್ಟ ಸರಕಾರಿ ನೌಕರರು

- Advertisement -

ಬೆಂಗಳೂರು : Karnataka Government Employees Strike Cancel : ರಾಜ್ಯದಲ್ಲಿ ಸರಕಾರಿ ನೌಕರರು ನಡೆಸುತ್ತಿರುವ ಮುಷ್ಕರವನ್ನು ಕೈಬಿಡಲಾಗಿದೆ. ರಾಜ್ಯ ಸರಕಾರ ತಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದನೆಯನ್ನು ಕೊಟ್ಟಿದೆ. ವೇತನವನ್ನು ಹೆಚ್ಚಳ ಮಾಡಲಾಗಿದ್ದು, ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ಸಮಿತಿಯನ್ನು ರಚಿಸಲಾಗಿದೆ. ಸರಕಾರ ಆದೇಶ ನಮಗೆ ಸಂತೃಪ್ತಿಯನ್ನು ತಂದಿಲ್ಲ, ತೃಪ್ತಿ ತಂದಿದೆ. ಹೋರಾಟ ನಿರಂತರವಾಗಿ ನಡೆಯಲಿದೆ. ಆದರೆ ಮುಷ್ಕರವನ್ನು ಈ ಕ್ಷಣದಿಂದಲೇ ಕೈಬಿಡುತ್ತಿದ್ದೇವೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಢಕ್ಷರಿ ತಿಳಿಸಿದ್ದಾರೆ.

ರಾಜ್ಯ ಸರಕಾರಿ ನೌಕರರ ಮುಷ್ಕರಕ್ಕೆ ರಾಜ್ಯ ಸರಕಾರ ತಲೆಬಾಗಿದೆ. ಅನಿರ್ಧಿಷ್ಟಾವಧಿ ಮುಷ್ಕರದ ಬಿಸಿ ತಟ್ಟುತ್ತಿದ್ದಂತೆಯೇ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸರಕಾರಿ ನೌಕರರ ವೇತನದಲ್ಲಿ ಶೇ. 17ರಷ್ಟು ವೇತನ ಹೆಚ್ಚಳ ಮಾಡಲಾಗಿದ್ದು, ಎಪ್ರಿಲ್ ನಿಂದಲೇ ಹೊಸ ಆದೇಶ ಜಾರಿಗೆ ಬರಲಿದೆ. ರಾಜ್ಯ ಸರಕಾರ ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿಗೆ ಸಂಬಂಧಿಸಿದಂತೆ ಅಧಿಕೃತ ಆದೇಶ ಹೊರ ಬೀಳುತ್ತಿದ್ದಂತೆಯೇ ಸರಕಾರಿ ನೌಕರರು ತಮ್ಮ ಮುಷ್ಕರವನ್ನು (Karnataka Government Employees Strike Cancel) ಕೈಬಿಟ್ಟಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಷಢಕ್ಷರಿ ಅವರು, ರಾಜ್ಯ ಸರಕಾರಿ ನೌಕರರ ಸಂಘದ ಎರಡು ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಜೊತೆಗೆ ಸಂಘದ ಪದಾಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಾಗಿದೆ ಸಂಘರ್ಷದ ಹೋರಾಟ ಬೇಡಾ, ತಮ್ಮ ಪಟ್ಟನ್ನು ಸಡಿಲ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರಕಾರ ಏಳನೇ ವೇತನ ಆಯೋಗವನ್ನು ರಚನೆ ಮಾಡಿದೆ. ಆದರೆ ವರದಿಯನ್ನು ನೀಡಲು ಎರಡು ತಿಂಗಳ ಕಾಲಾವಕಾಶ ಬೇಕು ಎಂದು ವೇತನ ಆಯೋಗದ ಅಧ್ಯಕ್ಷರು ತಿಳಿಸಿದ್ದರು. ಏಳನೇ ವೇತನ ಆಯೋಗದ ವರದಿ ವಿಳಂಭವಾಗುವ ಹಿನ್ನೆಲೆಯಲ್ಲಿ ತುರ್ತು ಕ್ರಮದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ವೇತನವನ್ನು ಶೇ.17 ಷ್ಟು ಹೆಚ್ಚಳ ಮಾಡಿದೆ. ಆದರೆ ನಾವು ಶೇ.40 ರಷ್ಟು ಫಿಟ್ ಮೆಂಟ್ ಕೇಳಿದ್ದೇವೆ. ಅದನ್ನು ಏಳನೇ ವೇತನ ಆಯೋಗದ ಮುಂದೆಯೂ ಕೇಳುತ್ತೇವೆ. ಮುಂದಿನ ದಿನಗಳಲ್ಲಿ ತಮ್ಮ ಬೇಡಿಕೆಯನ್ನು ಈಡೇರಿಸುವುದಾಗಿ ಸರಕಾರದ ಅಧಿಕಾರಿಗಳು ಭರವಸೆಯನ್ನು ನೀಡಿದ್ದಾರೆ ಎಂದು ಷಡಕ್ಷರಿ ತಿಳಿಸಿದ್ದಾರೆ.

karnataka-government-employees-strike-cancel-says-employees-union-president-cs-shadakshari

ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಸಂಘ ಮನವಿಯನ್ನು ಮಾಡಿಕೊಂಡಿದೆ. ಅಂತೆಯೇ ಮುಖ್ಯಮಂತ್ರಿಗಳು ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡಿರುವ ಐದು ರಾಜ್ಯಗಳಲ್ಲಿ ಯಾವ ನಿರ್ಧಾರ, ಆದೇಶ, ಅಲ್ಲಿಯ ಸಮಿತಿಯ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ವರದಿಯನ್ನು ನೀಡುವಂತೆ ಅಪರ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚನೆಯನ್ನು ಮಾಡಿ ಸೂಚನೆಯನ್ನು ಕೊಟ್ಟಿದೆ. ಸಮಿತಿ ಸರಕಾರಕ್ಕೆ ಎರಡು ತಿಂಗಳ ಒಳಗಾಗಿ ವರದಿಯನ್ನು ನೀಡಬೇಕಾಗಿದೆ. ಉಚಿತ ಆರೋಗ್ಯ ಸೇವೆಯನ್ನು ಮುಖ್ಯಮಂತ್ರಿಗಳು ಘೋಷಣೆಯನ್ನು ಮಾಡಿದ್ದು, ಮುಂದಿನ ಹದಿನೈದು ದಿನಗಳ ಒಳಗಾಗಿ ಯೋಜನೆ ಜಾರಿಗೆ ಬರಲಿದೆ. ಇದರಿಂದಾಗಿ ನಲವತ್ತು ಲಕ್ಷ ಜನರಿಗೆ ಅನುಕೂಲವಾಗಲಿದೆ. ಶಿಕ್ಷಕರ ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿಯನ್ನು ಮಾಡಿಕೊಳ್ಳಲಾಗಿದೆ. ಅದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂಧನೆಯನ್ನು ನೀಡಿದ್ದಾರೆ ಎಂದಿದ್ದಾರೆ.

karnataka-government-employees-strike-cancel-says-employees-union-president-cs-shadakshari

ಶೇ.17ರಷ್ಟು ವೇತನ ಹೆಚ್ಚಳ : ಸಿಎಂ ಬೊಮ್ಮಾಯಿ

ಸರಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. 2023ರ ಎಪ್ರಿಲ್ 1ರಿಂದಲೇ ಅಧಿಕೃತ ಆದೇಶ ಜಾರಿಗೆ ಬರಲಿದೆ. ನೌಕರರ ಜೊತೆ ಚರ್ಚೆ ಆದ ಬಳಿಕ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಮಾತಾಡಿದೆ, ಈ ವೇಳೆ ಒಂದು ಒಪ್ಪಂದಕ್ಕೆ ಬಂದಿದ್ದೇವೆ. 17% ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. ಇದು ಮಧ್ಯಂತರ ಪರಿಹಾರ ರೂಪದಲ್ಲಿ ಇರಲಿದೆ. ಆಯೋಗದ ವರದಿ ಬಳಿಕ ಶೇಕಡವಾರು ಪ್ರಮಾಣದಲ್ಲಿ ಬದಲಾವಣೆ ಆಗಬಹುದು. ಸರ್ಕಾರಿ ನೌಕರರು ಮುಷ್ಕರ ಕೈಬಿಡ್ತಾರೆ ಎಂಬ ವಿಶ್ವಾಸವಿದೆ ಎಂದು ಸಿಎಂ ಬೊಮ್ಮಾಯಿ ಅವರು ತಿಳಿಸಿದ್ದಾರೆ.

karnataka-government-employees-strike-cancel-says-employees-union-president-cs-shadakshari

ಎನ್ ಪಿಎಸ್ ರದ್ದತಿಗೆ ಸಮಿತಿ ರಚನೆ :

ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತರಲು ಜೊತೆಗೆ ಎನ್ ಪಿಎಸ್ ರದ್ದು ಬಗ್ಗೆ ಸಮಿತಿ ರಚನೆ ಬಳಿಕ ಸರ್ಕಾರದಿಂದ ಮಹತ್ವದ ನಿರ್ಣಯ ಕೈಗೊಳ್ಳಲಾಗುತ್ತದೆ. ಹೊಸ ಪಿಂಚಣಿ ಯೋಜನೆ (NPS) ರದ್ದು ಮಾಡುವ ಬೇಡಿಕೆ ಕುರಿತು ಪರಾಮರ್ಷೆ ಮಾಡುತ್ತೇವೆ. ಬೇರೆ ರಾಜ್ಯಗಳಲ್ಲಿ ಯಾವ ಸ್ಥಿತಿ ಇದೆ. ಹೊಸ ಪಿಂಚಣಿ ವ್ಯವಸ್ಥೆ ರದ್ದು ಮಾಡಿದ ನಂತರದಲ್ಲಿ ಆರ್ಥಿಕ ಸ್ಥಿತಿಗತಿಯ ಬಗ್ಗೆ ವರದಿಯನ್ನು ನೀಡುವಂತೆ ಸರಕಾರದ ಅಪರ ಕಾರ್ಯದರ್ಶಿಗಳ ನೇತೃತ್ವದಲ್ಲ ಸಮಿತಿಯನ್ನು ರೂಪಿಸಿ, ಸೂಚನೆಯನ್ನು ನೀಡಿದ್ದಾರೆ. ರಾಜ್ಯ ಸರಕಾರ ಇನ್ನೂ 7 ನೇ ವೇತನ ಆಯೋಗದಿಂದ ವರದಿಯನ್ನು ಪಡೆದಿಲ್ಲ. ಆದರೆ ಸರಕಾರಿ ನೌಕರರ ಮುಷ್ಕರದ ಎಫೆಕ್ಟ್ ಬೆನ್ನಲ್ಲೇ ವೇತನ ಏರಿಕೆಯ ಕಾರ್ಯವನ್ನು ಮಾಡಲಾಗುತ್ತಿದೆ.

ಇದನ್ನೂ ಓದಿ : LPG Cylinder price hike : ಸಿಲಿಂಡರ್ ಬೆಲೆ 50 ರೂ ಹೆಚ್ಚಳ: ಪರಿಷ್ಕೃತ ದರ ಪರಿಶೀಲಿಸಿ

ಇದನ್ನೂ ಓದಿ : Govt employees strike: ಸರಕಾರಿ ನೌಕರರ ಮುಷ್ಕರ: ಶಾಲೆ, ಸರಕಾರಿ ಸೇವೆಗಳು ಬಂದ್, ಚಿಕಿತ್ಸೆಗಾಗಿ ರೋಗಿಗಳ ಪರದಾಟ

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular