ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಗೌರವಧನ ಹೆಚ್ಚಳ

ಬೆಂಗಳೂರು : ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಮಾಸಿಕ ಗೌರವಧನವನ್ನು ಹೆಚ್ಚಿಸಿ (Karnataka govt Increased honorarium) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರಾ.ಪಂ.ಅಧ್ಯಕ್ಷರ ಗೌರವಧನ 3 ಸಾವಿರದಿಂದ 6 ಸಾವಿರ, ಜಿ.ಪಂ.ಉಪಾಧ್ಯಕ್ಷರ ಗೌರವಧನ 2 ಸಾವಿರದಿಂದ 4 ಸಾವಿರ, ಜಿ.ಪಂ.ಸದಸ್ಯರ ಗೌರವಧನವನ್ನು 1 ಸಾವಿರದಿಂದ 2 ಸಾವಿರಕ್ಕೆ ಹೆಚ್ಚಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದೆ

ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ಸರಕಾರ ಜನಪ್ರತಿನಿಧಿಗಳು, ಅಧಿಕಾರಿಗಳ ಬೇಡಿಕೆಗಳನ್ನು ಈಡೇರಿಸುತ್ತಿದೆ. ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಅತಿಥಿ ಶಿಕ್ಷಕರಿಗೆ ಶುಭ ಸುದ್ದಿಯನ್ನು ಕೊಟ್ಟಿದೆ. ಅತಿಥಿ ಶಿಕ್ಷಕರ ಗೌರವಧನವನ್ನು ಎರಡೂವರೆ ಸಾವಿರ ರೂಪಾಯಿ ಹೆಚ್ಚಿಸಿ ಆದೇಶ ಹೊರಡಿಸಲಾಗಿತ್ತು. ಗೌರವ ಸಂಭಾವನೆಯನ್ನು ರೂ.2500 ಹೆಚ್ಚಿಸಲಾಗಿದೆ.

2021-22ನೇ ಸಾಲಿನಲ್ಲಿ ನೇಕಾರ ಸಮ್ಮಾನ್ ಯೋಜನೆಯಡಿ 49,544 ನೇಕಾರರಿಗೆ ಡಿಬಿಟಿ ಮೂಲಕ ರೂ.990.88 ಲಕ್ಷಗಳನ್ನು ಬಿಡುಗಡೆ ಮಾಡಲಾಗಿದೆ. ನೇಕಾರ ಸಮ್ಮಾನ್ ಯೋಜನೆಯಡಿ ನೋಂದಾಯಿತ ಕೈಮಗ್ಗ ನೇಕಾರರಿಗೆ ಆರ್ಥಿಕ ಸಹಾಯವನ್ನು 2022-23 ರ ಬಜೆಟ್ ಪ್ರಕಾರ ರೂ.2,000/- ರಿಂದ ರೂ.5,000/- ಕ್ಕೆ ಹೆಚ್ಚಿಸಲಾಗಿದೆ. ಈವರೆಗೆ 46,864 ಅರ್ಜಿಗಳನ್ನು ಪರಿಶೀಲಿಸಿ ಅನುಮೋದನೆ ನೀಡಲಾಗಿದೆ.

ನೇಕಾರರಿಗೆ ಶೂನ್ಯ ಬಡ್ಡಿ ದರದಲ್ಲಿ 2 ಲಕ್ಷದವರೆಗೆ ಸಾಲ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನೇಕಾರರ ಸಮಸ್ಯೆಗಳ ಕುರಿತು ಚರ್ಚಿಸಿ ಕೆಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ನೇಕಾರರ ಬೇಡಿಕೆಗೆ ಅನುಗುಣವಾಗಿ ಶೇ.50ರಷ್ಟು ಸಹಾಯಧನ ನೀಡಲು ನಿರ್ಧರಿಸಲಾಗಿದೆ.

ಪವರ್ ಲೂಮ್ ನಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನೆರವು ನೀಡಲಾಗುವುದು. ಮನೆಯಲ್ಲಿ ಕೆಲಸ ಮಾಡುವ ನೇಕಾರರ ಗುಡಿ ಕೈಗಾರಿಕೆಗಳನ್ನು ಒಳಗೊಳ್ಳಲು ಮತ್ತು ನೇಕಾರರು ಉತ್ಪಾದಿಸುವ ಬಟ್ಟೆಗಳನ್ನು ಖರೀದಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಇಲ್ಲಿಂದಲೇ ಸಮವಸ್ತ್ರ ಖರೀದಿಸುವ ವ್ಯವಸ್ಥೆ ಜಾರಿಗೊಳಿಸಲು ಕ್ರಮಕೈಗೊಳ್ಳಲಾಗುವುದು. ನೇಕಾರರ ಮಕ್ಕಳಿಗಾಗಿ ವಿದ್ಯಾನಿಧಿ ಯೋಜನೆ ವಿಸ್ತರಣೆ. ಸಂಘಟಿತ ಕಾರ್ಮಿಕರಿಗೆ ಸಹಾಯ ಮಾಡಲು ಸರ್ಕಾರದಿಂದ ಸಹಾಯ. ಮುಂದಿನ ಬಜೆಟ್ ನಲ್ಲಿ ಅನುದಾನ ಘೋಷಣೆ ಮಾಡುತ್ತೇವೆ ಎಂದು ಸಿ.ಎಂ.ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ : D.C Kurmarao M.: ವಾರಾಹಿ ಎಡದಂಡೆ ಕಾಮಗಾರಿ ವ್ಯಾಪ್ತಿಯ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

ಇದನ್ನೂ ಓದಿ : Karnataka assembly election 2023: ಟಿಕೆಟ್‌ ಹಂಚಿಕೆಗೆ ಕಾಂಗ್ರೆಸ್ ಚುನಾವಣಾ ಸಮಿತಿ

ಇಂಗ್ಲಿಷ್‌ ಸುದ್ದಿಗಾಗಿ ಫಾಲೋ ಮಾಡಿ : NEWSNEXT.LIVe

Karnataka govt Increased honorarium of President, Vice President, Members of Grama Panchayat

Comments are closed.