Rain School Holiday : ಭಾರೀ ಮಳೆ ಹಿನ್ನೆಲೆ : ಎರಡು ದಿನ ಶಾಲೆಗಳಿಗೆ ರಜೆ ಘೋಷಣೆ

ಚಿಕ್ಕಬಳ್ಳಾಪುರ/ಕೋಲಾರ : ನಿರಂತರವಾಗಿ ಮಳೆ (Heavy Rain) ಸುರಿಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ನವೆಂಬರ್‌ ೧೯ ಮತ್ತು ೨೦ರಂದು ಎರಡು ದಿನಗಳ ಕಾಲ ಶಾಲೆಗಳಿಗೆ ರಜೆ (Rain School Holiday) ಘೋಷಣೆ ಮಾಡಿ ಜಿಲ್ಲಾಡಳಿತಗಳು ಆದೇಶ ಹೊರಡಿಸಿವೆ.

ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಕುರಿತು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಗಳ ಸರಕಾರಿ, ಅನುದಾನಿತ, ಅನುದಾನರಹಿತ, ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಿದ್ದಾರೆ.

ಭಾರೀ ಮಳೆಯಿಂದಾಗಿ ಮಕ್ಕಳ ಹಿತದೃಷ್ಠಿಯಿಂದ ಈ ಆದೇಶ ಹೊರಡಿಸಲಾಗಿದೆ ಎಂದು ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

( Karnataka heavy rain 2 days school holiday declare chikkaballapura and kolara )

Comments are closed.