Karnataka Heavy Rain Alert : ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು : (Karnataka Heavy Rain Alert) ರಾಜ್ಯದಲ್ಲಿ ಮುಂಗಾರು ಮಳೆ ಪ್ರವೇಶವಾಗಿದ್ದರೂ, ಅದರ ದುರ್ಬಲತೆಯಿಂದಾಗಿ ಕಳೆದ ವಾರದಲ್ಲಿ ಸಾಧಾರಣ ಮಳೆಯಾಗಿತ್ತು. ಇದೀಗ ಮತ್ತೆ ಮುಂಗಾರು ಮಳೆ ಚುರುಕಾಗುವ ಸಾಧ್ಯತೆ ಇರುವುದರಿಂದ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣದಿಂದ ಕೂಡಿದ್ದು, ಸಂಜೆ ಹೊತ್ತಿಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇನ್ನು ಬರದ ಬೀತಿಯಲ್ಲಿದ್ದ ರಾಜ್ಯದ ಜನತೆಗೆ ಸಮಾಧಾನ ಸಿಕ್ಕಂತೆ ಆಗಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೋರಾದ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ರಾಜ್ಯದ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ : Sowjanya Murder case : ಸೌಜನ್ಯ ಕೊಲೆ ಪ್ರಕರಣ : 1 ರೂ. ಹಣ ಪಡೆಯದೆ ನಿರಪರಾಧಿಗೆ ನ್ಯಾಯ ಕೊಡಿಸಿದ ಯುವ ನ್ಯಾಯವಾದಿಗಳು

ಇನ್ನು ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಗುಡುಗು ಮಿಂಚಿನ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ತುಮಕೂರು, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಹಲವು ಭಾಗಗಳಲ್ಲಿ ಉತ್ತಮ ಮಳೆ ನಿರೀಕ್ಷೆ ಮಾಡಬಹುದಾಗಿದೆ. ಇನ್ನು ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Karnataka Heavy Rain Alert: Heavy rain is likely in these districts of the state in the next 48 hours

Comments are closed.