ಮುಂದಿನ 3 ಗಂಟೆಯಲ್ಲಿ ಬಿರುಗಾಳಿ ಮಳೆ : ಉಡುಪಿ, ಚಿಕ್ಕಮಗಳೂರು, ದ.ಕ., ಶಿವಮೊಗ್ಗ ಜಿಲ್ಲೆಗೆ ಎಚ್ಚರಿಕೆ

ಬೆಂಗಳೂರು : (Karnataka Heavy Rain alert) ರಾಜಧಾನಿ ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆಗಳಲ್ಲಿ ಭಾರೀ ಸುರಿಯುತ್ತಿದೆ. ಇದೀಗ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಅವಧಿಯಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿನ ಕೆಲವು ಸ್ಥಳಗಳಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ ಸಾಧಾರಣ ಗುಡುಗು ಸಹಿತ ಮಳೆಯಾಗುವ (Karnataka Heavy Rain alert) ಸಾಧ್ಯತೆಯಿದೆ. ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಕಳೆದ ಮೂರು ದಿನಗಳ ಅವಧಿಯಲ್ಲಿ ಮಳೆ ಇಬ್ಬರನ್ನು ಬಲಿ ಪಡೆದಿದೆ. ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಅಂಡರ್‌ಪಾಸ್‌ನಲ್ಲಿ ಕಾರು ಸಿಲುಕಿ ಮೃತಪಟ್ಟ ಬೆನ್ನಲ್ಲೇ, ಬೆಂಗಳೂರಿನ ಕೆಪಿ ಅಗ್ರಹಾರದಲ್ಲಿನ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿ ಲೋಕೇಶ್‌ ಎಂಬ ಯುವಕ ಸಾವನ್ನಪ್ಪಿದ್ದಾನೆ. ಬೆಂಗಳೂರು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಬಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಬಾರಿ ಮುಂಗಾರು ಆಗಮನ ವಿಳಂಭವಾಗಿದೆ. ಈ ಬಾರಿ ಕೇರಳಕ್ಕೆ ಜೂನ್‌ ಮೊದಲ ವಾರದಲ್ಲಿ ಮುಂಗಾರು ಆಗಮನವಾಗಲಿದ್ದು, ಕರ್ನಾಟಕಕ್ಕೆ ವರ್ಷಂಪ್ರತಿಯಂತೆ ಈ ಬಾರಿ ತಡವಾಗಿಯೇ ಮುಂಗಾರು ಆಗಮಿಸಲಿದೆ ಎನ್ನಲಾಗುತ್ತಿದೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಗಾಳಿಯ ತೀವ್ರತೆ ಹೆಚ್ಚಿದ್ದು, ತಾಪಮಾನ ಏರಿಕೆಯಿಂದಾಗಿ ಜನರು ಕಂಗಾಲಾಗಿ ಹೋಗಿದ್ದಾರೆ. ದೆಹಲಿಯಲ್ಲಿ ಈ ಬಾರಿ ಗರಿಷ್ಠ ತಾಪಮಾನ ದಾಖಲಾಗಿದ್ದು, ದೇಶದ ಏಳು ರಾಜ್ಯಗಳಲ್ಲಿ ಬಿಸಿಗಾಳಿ ಬೀಸುವ ಆತಂಕವನ್ನು ಹವಾಮಾನ ಇಲಾಖೆ ತಿಳಿಸಿದೆ. ಇಷ್ಟು ವರ್ಷಗಳಿಗೆ ಹೋಲಿಗೆ ಮಾಡಿದ್ರೆ ರಾಜ್ಯದಲ್ಲಿನ ಬಹುತೇಕ ಜಿಲ್ಲೆಗಳಲ್ಲಿ ಈ ಬಾರಿಯ ತಾಪಮಾನದಲ್ಲಿ ಬಾರೀ ಬದಲಾವಣೆ ಕಂಡು ಬಂದಿದೆ.

ಕರಾವಳಿ, ಮಲೆನಾಡಿನ ಭಾಗಗಳಲ್ಲಿ ರೈತರು ಮಳೆಯ ಬರುವಿಕೆಗಾಗಿ ಕಾದು ಕುಳಿತಿದ್ದಾರೆ. ಮುಂಗಾರು ಬೆಳೆಯ ಬಿತ್ತನೆಯ ಕಾರ್ಯ ಇನ್ನಷ್ಟೇ ಆರಂಭವಾಗಬೇಕಾಗಿದೆ. ಇಷ್ಟು ವರ್ಷ ಸಾಮಾನ್ಯವಾಗಿ ಮಾರ್ಚ್‌, ಎಪ್ರೀಲ್‌ ತಿಂಗಳಲ್ಲಿ ಕರಾವಳಿ ಭಾಗದಲ್ಲಿ ಅಕಾಲಿಕ ಮಳೆ ಸುರಿಯುತ್ತಿದ್ದು, ಆದ್ರಲ್ಲೂ ಮೇ ತಿಂಗಳಲ್ಲಿ ಸುರಿಯುವ ಮಳೆಯನ್ನೇ ನೆಚ್ಚಿಕೊಂಡು ಬಿತ್ತನೆ ಕಾರ್ಯವನ್ನು ಆರಂಭಿಸುತ್ತಿದ್ದರು. ಆದರೆ ಈ ಬಾರಿ ರೈತರ ಲೆಕ್ಕಾಚಾರವನ್ನು ಮಳೆರಾಯ ತಲೆಕೆಳಗೆ ಮಾಡಿದ್ದಾನೆ. ಇನ್ನು ಜೂನ್‌ ಮೊದಲ ವಾರದಲ್ಲಿ ಆಗಮಿಸುವ ಮುಂಗಾರು ಮಳೆಗಾಗಿ ಅನ್ನದಾತರು ಕಾದು ಕುಳಿತಿದ್ದಾರೆ.

ಇದನ್ನೂ ಓದಿ : 2,000 ರೂಪಾಯಿ ನೋಟುಗಳನ್ನು ಬದಲಾಯಿಸಲು ಆಧಾರ್ ಕಾರ್ಡ್ ಅಗತ್ಯವಿದೆಯೇ?

ಇದನ್ನೂ ಓದಿ : ಸಿಲಿಕಾನ್‌ ಸಿಟಿಯಲ್ಲಿ ವರುಣ ಆರ್ಭಟಕ್ಕೆ ಮತ್ತೊಂದು ಬಲಿ

Comments are closed.