ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ತಮಿಳುನಾಡು ಭಾರೀ ಮಳೆಗೆ ತತ್ತರಿಸಿ ಹೋಗಿದೆ. ಇದರ ಬೆನ್ನಲ್ಲೇ ರಾಜ್ಯದಲ್ಲಿಯೂ ಮಳೆರಾಯ ಆರ್ಭಟಿಸಲಿದ್ದಾನೆ. ರಾಜ್ಯದ 10 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆರಾಯ ಅಬ್ಬರಿಸಲಿದ್ದಾನೆ (Karnataka Rain Alert) ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ನಿನ್ನೆಯಿಂದಲೂ ಬೆಂಗಳೂರಲ್ಲಿ ಜಟಿ ಜಟಿ ಮಳೆ ಶುರುವಾಗಿದೆ. ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬರುತ್ತಿದೆ. ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಸೂಚನೆ ನೀಡಿರುವ ಬೆನ್ನಲ್ಲೇ ಬಿಬಿಎಂಪಿ ಮಳೆ ಹಾನಿ ತಡೆಯಲು ಸಿದ್ದತೆಯನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದೆ.

ಕೇವಲ ರಾಜಧಾನಿ ಬೆಂಗಳೂರು ಮಾತ್ರವಲ್ಲ ಅರಮನೆ ನಗರಿ ಮೈಸೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿಯೂ ಮಳೆ ಆರ್ಭಟಿಸಲಿದೆ. ಈ ಹಿನ್ನೆಲೆಯಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ರಾಮನಗರ, ದಾವಣಗೆರೆ, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡಿನ ಇತರ ಜಿಲ್ಲೆಗಳಿಗೆ ನವೆಂಬರ್ 14 ಮತ್ತು ನವೆಂಬರ್ 15ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ.

ಇಷ್ಟು ವರ್ಷಗಳಿಗೆ ಹೋಲಿಕೆ ಮಾಡಿದ್ರೆ ಪ್ರಸಕ್ತ ಸಾಲಿನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಅಕ್ಟೋಬರ್ ತಿಂಗಳಲ್ಲಿ ರಾಜ್ಯದಲ್ಲಿ ಸುರಿದ ಮಳೆಗೆ 21 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ತಮಿಳುನಾಡಿನಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಒಂದೇ ದಿನ 14 ಮಂದಿ ಸಾವನ್ನಪ್ಪಿದ್ದು, 25 ಮಿ.ಮೀ. ಮಳೆ ಸುರಿದಿದೆ. ಅಲ್ಲದೇ ಆಂಧ್ರಪ್ರದೇಶ ಹಾಗೂ ತಮಿಳುನಾಡು ರಾಜ್ಯದಲ್ಲಿ ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ಇದನ್ನೂ ಓದಿ :
ಇದನ್ನೂ ಓದಿ : ಕೋಟ : ಗೋ ಕಳ್ಳರ ವಾಹನ ಅಡ್ಡಗಟ್ಟಿದ ಹಸು : Video Viral
ಇದನ್ನೂ ಓದಿ : ವಿದ್ಯಾರ್ಥಿನಿಗೆ ಶಾಲೆಯಲ್ಲಿಯೇ ಲೈಂಗಿಕ ದೌರ್ಜನ್ಯವೆಸಗಿದ ಪ್ರಾಂಶುಪಾಲ
(Karnataka Heavy Rain Fall in 10 district in next 10 days, today weather Report Bangalore)