ಬೆಂಗಳೂರು : ಮುಂದಿನ 48 ಗಂಟೆಗಳ ರಾಜ್ಯದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರಾಜ್ಯದ 23 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ , ಉತ್ತರ ಕನ್ನಡ, ಮಲೆನಾಡಿನ ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಒಳನಾಡಿನ ಚಿತ್ರದುರ್ಗ, ಬಾಗಲಕೋಟೆ, ಬೆಂಗಳೂರು, ನಗರ, ಬೆಂಗಳೂರು ಗ್ರಾಮಾಂತರ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬೆಳಗಾವಿ ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿನ ಜನರು ಎಚ್ಚರದಿಂದ ಇರುವಂತೆಯೂ ಸೂಚಿಸಲಾಗಿದ್ದು, ಜಿಲ್ಲಾಡಳಿತಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ.