Karnataka Heavy Rainfall Alert : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜೂನ್‌ 27ರ ತನಕ ಭಾರೀ ಮಳೆ ಸಾಧ್ಯತೆ

ಬೆಂಗಳೂರು : (Karnataka Heavy Rainfall Alert) ಕಳೆದ ಮೂರು ನಾಲ್ಕು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ವರುಣನ ಆರ್ಭಟ ಜೋರಾಗಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ದಿನವಿಡೀ ಮಳೆರಾಯನ ಆರ್ಭಟ ಜೋರಾಗಿದೆ. ಹೀಗಾಗಿ ಕರಾವಳಿ ಭಾಗಗಳಲ್ಲಿ ಕೃಷಿ ಚಟುವಟಿಕೆಗಳು ಭರದಿಂದ ಸಾಗುತ್ತಿದೆ. ಇನ್ನು ಜೂನ್‌ ತಿಂಗಳ ಅಂತ್ಯದ ವೇಳೆಗೆ ಕರ್ನಾಟಕ ಕರಾವಳಿ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್‌ 27ರ ವರೆಗೂ ಭಾರೀ ಮಳೆಯಾಗಲಿದ್ದು, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕಳೆದ ಎರಡು ದಿನಗಳಿಂದ ಮಲೆನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಜೋರಾಗಿ ಮಳೆಯಾಗುತ್ತಿದೆ. ನಿನ್ನೆ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ದಿನವಿಡೀ ಮಳೆಯಾಗಿದ್ದು, ಜನತೆ ಮುಂಗಾರು ಮಳೆ ಶುರುವಾಯಿತು ಎಂದು ಸಿಟ್ಟುಸಿರು ಬಿಟ್ಟಿದ್ದಾರೆ.

ಇನ್ನು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಿದ್ದು, ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಆದರೆ ದಿನವಿಡೀ ಮೋಡ ಕವಿದ ವಾತಾವರಣ ಇರಲಿದೆ. ಬೆಂಗಳೂರು ನಗರದಲ್ಲಿ ನಿನ್ನೆ ಮೋಡ ಕವಿದ ವಾತಾವರಣದಿಂದ ಕೂಡಿದ್ದು, ಸಂಜೆಯ ವೇಳೆಗೆ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗಿದೆ.

ಇದನ್ನೂ ಓದಿ : Gruha Lakshmi Scheme : ಗೃಹಲಕ್ಷ್ಮೀ ಯೋಜನೆಗೆ ಜೂನ್ 27 ರಿಂದ ಅರ್ಜಿ ಸಲ್ಲಿಕೆ ಆರಂಭ

ಇದನ್ನೂ ಓದಿ : Nalin Kumar Katelu : ಯೂಟರ್ನ್‌ ಹೊಡೆದ ನಳಿನ್‌ ಕುಮಾರ್‌ ಕಟೀಲು : ರಾಜೀನಾಮೆ ನೀಡಿಲ್ಲ ಎಂದ ಬಿಜೆಪಿ ರಾಜ್ಯಾಧ್ಯಕ್ಷ

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂಗಾರು ಇನ್ನು ಚುರುಕುಗೊಂಡಿಲ್ಲ. ಆದ್ದರಿಂದ ಮಳೆಗಾಗಿ ಜನರು ಇನ್ನು ಕೆಲವು ದಿನಗಳ ಕಾಲ ಕಾಯಬೇಕಿದೆ. ಇನ್ನು ನಾಳೆ ಸೋಮವಾರ ಬೀದರ್‌, ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಂ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Heavy Rainfall Alert: Heavy rainfall is likely in various districts of Karnataka till June 27

Comments are closed.