ಬೆಂಗಳೂರು : ಕಳೆದ ಒಂದು ವಾರದಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕರಾವಳಿ, ಮಲೆನಾಡಿನ ಭಾಗದ ಜನತೆ ತತ್ತರಿಸಿ ಹೋಗಿದ್ದಾರೆ. ಈ ನಡುವಲ್ಲೇ ಅರಬ್ಬಿ ಸಮುದ್ರ ಹಾಗೂ ಒಡಿಶಾದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ. ಈ ನಡುವಲ್ಲೇ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ 6 ತಾಲೂಕಿನ ಶಾಲೆ, ಕಾಲೇಜುಗಳಿಗೆ (2 days holiday for schools and colleges ) ಮತ್ತೆರಡು ದಿನ ರಜೆರಜೆ ಘೋಷಣೆ ಮಾಡಲಾಗಿದೆ.
ಅರಬ್ಬಿ ಸಮುದ್ರ ಹಾಗೂ ಒಡಿಶಾದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯುವ ಕುರಿತು ಮುನ್ಸೂಚನೆಯನ್ನು ನೀಡಿದೆ. ಈಗ ಸುರಿಯುತ್ತಿರುವ ಮಳೆಗಿಂತಲೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೇ ಅಪಾರ ಪ್ರಮಾಣದಲ್ಲಿ ಅನಾಹುತ ಸಂಭವಿಸುವ ಭೀತಿ ಎದುರಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಯಲ್ಲಿಯೂ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ, ಕೊಪ್ಪ, ಶೃಂಗೇರಿ, ಕಳಸ, ಮೂಡಿಗೆರೆ, ಚಿಕ್ಕಮಗಳೂರು ತಾಲೂಕಿನ ಶಾಲೆ, ಕಾಲೇಜುಗಳಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ರಜೆಯನ್ನು ಘೋಷಣೆ ಮಾಡಿದ್ದಾರೆ. ಉಳಿದಂತೆ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮಳೆ ಆರ್ಭಟಿಸುತ್ತಿದ್ದು, ಸಾಕಷ್ಟು ಅನಾಹುತವನ್ನೇ ಸೃಷ್ಟಿಸಿದೆ.
ಕೇವಲ ಕರಾವಳಿ, ಮಲೆನಾಡಿನ ಜಿಲ್ಲೆಗಳು ಮಾತ್ರವಲ್ಲದೇ ಬೆಳಗಾವಿ, ಹಾವೇರಿ, ಬೀದರ್, ಕಲಬುರಗಿ, ಧಾರವಾಡ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳು ಸಿದ್ದತೆ ಮಾಡಿಕೊಳ್ಳುವಂತೆ ಹವಾಮಾನ ಇಲಾಖೆ ಸೂಚನೆಯನ್ನು ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿನ ಶಾಲೆಗಳಿಗೆ ಕಳೆದ ಶನಿವಾರದ ವರೆಗೂ ರಜೆಯನ್ನು ನೀಡಲಾಗಿತ್ತು. ಆದ್ರೀಗ ಮೂರು ಜಿಲ್ಲೆಗಳಲ್ಲಿನ ಬಹುತೇಕ ಕಡೆಗಳಲ್ಲಿ ನೆರೆ ಹಾವಳಿ ಉಂಟಾಗಿದೆ. ಜೊತೆಗೆ ಮಳೆಯಿಂದಾಗಿ ಶಾಲೆ, ಮನೆಗಳ ಮೇಲೆಯೂ ಗುಡ್ಡ ಕುಸಿತವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳು ರಜೆಯನ್ನು ಮುಂದುವರಿಸಲಿವೆಯೇ ಅನ್ನೋದು ಇನ್ನೂ ನಿರ್ಧಾರವಾಗಿದೆ. ಆದ್ರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾತ್ರವೇ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ : Thunderstorm Safety Measures:ಚಂಡಮಾರುತದ ಸಮಯದಲ್ಲಿ ಸುರಕ್ಷಿತವಾಗಿರಲು ಈ ಹಂತಗಳನ್ನು ಅನುಸರಿಸಿ
ಇನ್ನೂ ಓದಿ : CC camera Accident : ಉಕ್ಕಿ ಹರಿಯುತ್ತಿರುವ ನದಿಗೆ ಹಾರಿದ ಕಾರು : ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ
Karnataka Heavy Rainfall announced 2 days holiday for schools and colleges due to rain