Karnataka heavy rainfall : ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು : (Karnataka heavy rainfall ) ಕಳೆದ ರಾತ್ರಿ ಸುರಿದ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಕರಾವಳಿ ತತ್ತರಿಸಿದೆ. ಅದ್ರಲ್ಲೂ ಮಂಗಳೂರು ನಗರದ ಬಹುತೇಕ ಕಡೆಗಳಲ್ಲಿನ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಅಲ್ಲದೇ ಮುಂದಿನ 5 ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಇಂದು ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ 24 ಗಂಟೆಗಳ ಕಾಲ ಹಳದಿ ಅಲರ್ಟ್ ಘೋಷಿಸಲಾಗಿದೆ. ಇನ್ನು 5 ದಿನ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆಗಸ್ಟ್ 1 ಮತ್ತು 2 ರಂದು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗಿದೆ.

ಮಂಗಳೂರಲ್ಲಿ ಭಾರೀ ಮಳೆ, ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಉಳ್ಳಾಲ, ಮೂಲ್ಕಿ, ಮೂಡುಬಿದಿರೆ, ಬಂಟ್ವಾಳ ತಾಲೂಕಿನಲ್ಲಿ ಇಂದು ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಭಾಗದ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಇಂದು ಮಂಗಳೂರು ಉಪವಿಭಾಗದ (ಮಂಗಳೂರು ಮಹಾನಗರ ಪಾಲಿಕೆ, ಮೂಲ್ಕಿ, ಮೂಡುಬಿದಿರೆ, ಉಳ್ಳಾಲ ಮತ್ತು ಬಂಟ್ವಾಳ ತಾಲೂಕುಗಳು) ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪುತ್ತೂರು ಉಪವಿಭಾಗದ ಇತರ ಸ್ಥಳಗಳಲ್ಲಿ, ತಹಶೀಲ್ದಾರ್ ಮತ್ತು ಬಿಇಒಗಳು ಸ್ಥಳೀಯ ಪರಿಸ್ಥಿತಿಯನ್ನು ನಿರ್ಣಯಿಸಿ ಸ್ಥಳೀಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಗುರುವಾರ ಬೆಳಿಗ್ಗೆ 8:30 ರಿಂದ ಶುಕ್ರವಾರ ಬೆಳಿಗ್ಗೆ 8:30 ರ ನಡುವಿನ 24 ಗಂಟೆಗಳಲ್ಲಿ 20.4 ಮಿಮೀ ಮಳೆ ದಾಖಲಾಗಿದೆ. ಇದಲ್ಲದೆ, ಶುಕ್ರವಾರ ಸಂಜೆ 5:30 ರವರೆಗಿನ ಒಂಬತ್ತು ಗಂಟೆಗಳ ಅವಧಿಯಲ್ಲಿ 2.4 ಮಿಮೀ ಮಳೆ ದಾಖಲಾಗಿದೆ.

ಇದನ್ನೂ ಓದಿ : Heavy Rain School Holiday : ಭಾರೀ ಮಳೆ ಮಂಗಳೂರು, ಮೂಡಬಿದಿರೆ, ಬಂಟ್ವಾಳ ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ

ಇದನ್ನೂ ಓದಿ : Mangalore Night Curfew : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈಟ್‌ ಕರ್ಪ್ಯೂ : ಇಂದು ಶಾಂತಿ ಸಭೆ, ಕರಾವಳಿಯಲ್ಲಿ3 ದಿನ ಕಠಿಣ ಸ್ಥಿತಿ

Karnataka heavy rainfall for next 5 days, issued alert, school holiday Mangalore

Comments are closed.