ಸೋಮವಾರ, ಏಪ್ರಿಲ್ 28, 2025
Homekarnatakaಮೋಚಾ ಚಂಡಮಾರುತ ಅಲೆ : ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ

ಮೋಚಾ ಚಂಡಮಾರುತ ಅಲೆ : ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ

- Advertisement -

ಬೆಂಗಳೂರು : ರಾಜ್ಯದಲ್ಲಿ ಇಂದು ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ (Karnataka Heavy Rainfall in Today) ಸಾಧ್ಯತೆ ಇದೆ. ಅಷ್ಟೇ ಅಲ್ಲದೇ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನ 2 ಗಂಟೆ ನಂತರ ಅಥವಾ ಸಂಜೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೋಚಾ ಚಂಡಮಾರುತದ ಅಲೆ ಎದ್ದಿದ್ದು, ಪರಿಣಾಮ ರಾಜ್ಯದ ಹಲವೆಡೆ ಸೈಕ್ಲೋನ್‌ ಭೀತಿ ಕೂಡ ಕಾಡುತ್ತಿದೆ.

ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಕರಾವಳಿಯ ಎರಡು ಹಾಗೂ ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮೇ. 10ರಿಂದ 12 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : Sringeri : ಚುನಾವಣಾ ಕರ್ತವ್ಯ ಲೋಪ : ಶೃಂಗೇರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಅಮಾನತ್ತು

ಇದನ್ನೂ ಓದಿ : ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ 2023ರ ವೇಳಾಪಟ್ಟಿ ಪ್ರಕಟ

ಇದನ್ನೂ ಓದಿ : ಕರ್ನಾಟಕ ಚುನಾವಣೆ 2023 : ಮತದಾನದ ದಿನಾಂಕ, ಫಲಿತಾಂಶ, ಪ್ರಮುಖ ಕ್ಷೇತ್ರಗಳು ಇಲ್ಲಿದೆ ಸಂಪೂರ್ಣ ವಿವರ

ಮಂಗಳವಾರ ರಾಜ್ಯದ 9 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಸಿಡಿಲು ಗುಡುಗಿನಿಮದ ಕೂಡಿತ್ತು. ಹೀಗಾಗಿ ಮಳೆ ಬರುವ ಸಮಯದಲ್ಲಿ ಮಕ್ಕಳು ವಯೋವೃದ್ಧರನ್ನು ಎಚ್ಚರದಿಂದ ನೋಡಿಕೊಳ್ಳಬೇಕಾಗಿದೆ. ಹಾಗೆಯೇ ಸಿಡಿಲು ಗುಡುಗು ಹಾಗೂ ಮಿಂಚು ಬರುವಾಗ ಎಲ್ಲರೂ ಸಾಧ್ಯವಾದಷ್ಟು ಮೊಬೈಲ್‌ ಯಂತ್ರೋಪಕರಣದಿಂದ ದೂರವಿರುವಂತೆ ಎಚ್ಚರಿಕೆ ವಹಿಸಬೇಕಾಗಿದೆ.

ಇದನ್ನೂ ಓದಿ : ಕರ್ನಾಟಕ ವಿಧಾನಸಭಾ ಚುನಾವಣೆ : ಮತದಾನಕ್ಕೆ ಸಕಲ ಸಿದ್ದತೆ, ಬಿಗಿ ಭದ್ರತೆ

ಇದನ್ನೂ ಓದಿ : Karnataka election 2023 : ಚುನಾವಣೆ ಹಿನ್ನೆಲೆ ಮೂರು ವಿಶೇಷ ರೈಲು ಘೋಷಣೆ

Karnataka Heavy Rainfall in Today : Mocha Cyclone Wave : Heavy rain is likely to occur in the state for the next 4 days

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular