Yellow Alert : ಕರ್ನಾಟಕದಲ್ಲಿ ನವೆಂಬರ್‌ 30ರ ವರೆಗೆ ಭಾರೀ ಮಳೆ : 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಬೆಂಗಳೂರು : ಕಳೆದ ಕೆಲವು ದಿನಗಳಿಂದಲೂ ಸುರಿಯುತ್ತಿರುವ ಮಳೆ ಭಾರೀ ಹಾನಿ ಉಂಟು ಮಾಡಿದೆ. ಇದೀಗ ಶ್ರೀಲಂಕಾ ಭಾಗದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ಕರ್ನಾಟಕದಲ್ಲಿ ನವೆಂಬರ್‌ 30ರ ವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದ್ರಲ್ಲೂ ಇಂದು ರಾಜ್ಯದ ಐದು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್‌ (Yellow Alert) ಘೋಷಿಸಲಾಗಿದೆ.

ಈ ವರ್ಷದ ಅಕ್ಟೋಬರ್‌ ಹಾಗೂ ನವೆಂಬರ್‌ ತಿಂಗಳಿನಲ್ಲಿ ರಾಜ್ಯದಲ್ಲಿ ಭಾರೀ ಮಳೆ ಸುರಿದಿದೆ. ಅದ್ರಲ್ಲೂ ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕದಲ್ಲಿ ಸುರಿದ ಮಳೆಯಿಂದಾಗಿ ಜನರು ಕಂಗಾಲಾಗಿದ್ದಾರೆ. ಆದರೆ ಕಳೆದ ಮೂರ್ನಾಲ್ಕು ದಿನಗಳಿಂದಲೂ ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದೆ. ಆದರೆ ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ನೀಡಿದೆ. ಅದ್ರಲ್ಲೂ ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದ್ದು, ನವೆಂಬರ್‌ 30ರ ವರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಮೈಸೂರು, ರಾಮನಗರ, ತುಮಕೂರು, ಕೊಡಗು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈ ಐದು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಆದರೆ ನವೆಂಬರ್‌ 30ರ ನಂತರದಲ್ಲಿ ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗುವ ಸಾಧ್ಯತೆಯಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಮಳೆಯಾಗವ ಕುರಿತು ಯಾವುದೇ ಮುನ್ಸೂಚನೆ ಲಭ್ಯವಾಗಿಲ್ಲ. ಈ ಬಾರಿ ರಾಜ್ಯದಲ್ಲಿ ಮಳೆಯ ಜೊತೆಗೆ ಚಳಿಯ ಅಬ್ಬರವೂ ಹೆಚ್ಚಳವಾಗಿದೆ.

ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ ದಕ್ಷಿಣ ಶ್ರೀಲಂಕಾ ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯು ಚಾಲ್ತಿಯಲ್ಲಿದೆ. ಹೀಗಾಗಿ ಮತ್ತು ತಮಿಳುನಾಡು ಕರಾವಳಿ ಮತ್ತು ಆಂಧ್ರಪ್ರದೇಶದ ದಕ್ಷಿಣ ಕರಾವಳಿಯ ಮೇಲೆ ಬಲವಾದ ಈಶಾನ್ಯ ಮಾರುತಗಳಿದ್ದು ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಅದ್ರಲ್ಲೂ ಮುಂದಿನ ಐದು ದಿನಗಳಲ್ಲಿ ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ದಕ್ಷಿಣ ಒಳನಾಡಿನ ಕರ್ನಾಟಕ, ಕೇರಳ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ.

ರಾಜ್ಯದಲ್ಲಿ ಭೂಕಂಪನ ನಡೆದಿಲ್ಲ : ಕೆಎಸ್‌ಎನ್‌ಡಿಎಂಸಿಎ ಸ್ಪಷ್ಟನೆ

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಶುಕ್ರವಾರ ನಿಗೂಢ ಸದ್ದು ಕೇಲಿಬಂದಿದ್ದು, ಭೂಕಂಪನ ನಡೆದಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡಿತ್ತು. ಆದ್ರೀಗ ಕೆಎಸ್‌ಎನ್‌ಡಿಎಂಸಿ ಭೂಕಂಪ ಸುದ್ದಿಯ ಕುರಿತು ಸ್ಪಷ್ಟನೆಯನ್ನು ನೀಡಿದೆ. ಬೆಂಗಳೂರು ಸುತ್ತಮುತ್ತಲೂ ಶುಕ್ರವಾರ ಬೆಳಿಗ್ಗೆ 11.50 ರಿಂದ 12.15 ರ ನಡುವೆ ದೊಡ್ಡ ನಿಗೂಢ ಶಬ್ದ ಕೇಳಿದ ನಂತರ ರಾಜ್ಯದಲ್ಲಿ ಯಾವುದೇ ಭೂಕಂಪನ ಚಟುವಟಿಕೆ ವರದಿಯಾಗಿಲ್ಲ ಎಂದಿದೆ. ಬೆಂಗಳೂರಿನ ಹೆಮ್ಮಿಗೆಪುರ, ಕೆಂಗೇರಿ, ಜ್ಞಾನಭಾರತಿ, ರಾಜರಾಜೇಶ್ವರಿ ನಗರ ಮತ್ತು ಕಗ್ಗಲಿಪುರದಲ್ಲಿ ಭಾರೀ ಸದ್ದು ಕೇಳಿಬಂದ ಕುರಿತು ವರದಿಯಾಗಿತ್ತು. ಅಲ್ಲದೇ ಕಳೆದ ವರ್ಷ ಬೆಂಗಳೂರಿನ ಸರ್ಜಾಪುರ, ಜೆಪಿ ನಗರ, ಬೆನ್ಸನ್ ಟೌನ್, ಹಲಸೂರು, ಇಸ್ರೋ ಲೇಔಟ್ ಮತ್ತು ಎಚ್‌ಎಸ್‌ಆರ್ ಲೇಔಟ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ನಿಗೂಢ ಸದ್ದು ಕೇಳಿಬಂದಿತ್ತು.

ಇದನ್ನೂ ಓದಿ: ಕರ್ನಾಟಕಕ್ಕೆ ಒಮಿಕ್ರಾನ್‌ ಭೀತಿ : ಬೆಂಗಳೂರಿಗೆ ಬಂದ ಇಬ್ಬರಿಗೆ ಕೊರೊನಾ ಸೋಂಕು ದೃಢ !

ಇದನ್ನೂ ಓದಿ : ABCD ಬರೆಯಲು ಬಾರದ ಶಿಕ್ಷಕ, ಶಿಕ್ಷಕಿ ಸಸ್ಪೆಂಡ್‌ : ವಿಡಿಯೋ ವೈರಲ್‌

(Heavy rains in Karnataka till November 30 : today Yellow Alert in 5 districts)

Comments are closed.