ಭಾನುವಾರ, ಏಪ್ರಿಲ್ 27, 2025
Homekarnatakaದತ್ತಾತ್ರೇಯ ಪೀಠದಲ್ಲಿ ದತ್ತಜಯಂತಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ದತ್ತಾತ್ರೇಯ ಪೀಠದಲ್ಲಿ ದತ್ತಜಯಂತಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

- Advertisement -

ಚಿಕ್ಕಮಗಳೂರು : ವಿವಾದಿತ ಬಾಬಾಬುಡನ್ ಗಿರಿಯ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತ ಜಯಂತಿ ಆಚರಣೆಗೆ (Datta Peeta Datta Jayanti) ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಡಿ 6, 7, 8ಕ್ಕೆ ದತ್ತ ಜಯಂತಿ ದತ್ತ ಜಯಂತಿ ಆಚರಣೆ ನಡೆಯಲಿದೆ. ದತ್ತಪಾದುಕೆ ಪೂಜೆಗೆ ಅವಕಾಶ ಕಲ್ಪಿಸಿದೆ. ಆದರೆ ದತ್ತಾತ್ರೇಯ ಬಾಬಾಬುಡನ್‌ ಗಿರಿ ಸ್ವಾಮಿ ದರ್ಗಾದ ಪೂಜಾ ವಿಧಾನದಲ್ಲಿ (Bababudangiri Inam Datta Peetha) ಯಾವುದೇ ಬದಲಾವಣೆ ಮಾಡುವಂತಿಲ್ಲ. ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದಲ್ಲಿರುವ ಬಾಬಾಬುಡನ್ ಗಿರಿಯಲ್ಲಿರುವ ದತ್ತಜಯಂತಿಯ ವೇಳೆಯಲ್ಲಿ ವಿವಾದಿತ ಸ್ಥಳದಲ್ಲಿ ದತ್ತಜಯಂತಿ ಆಚರಣೆಗೆ ಅನುಮತಿಯನ್ನು ನೀಡಿದೆ. ಅಲ್ಲದೇ ಭಕ್ತರಿಂದ ದತ್ತಪಾದುಕೆ ಪೂಜೆಗೆ ಅವಕಾಶ ನೀಡಲಾಗಿದೆ. ಹಿಂದೂ, ಮುಸ್ಲಿಂ ಸದಸ್ಯರ ಸಮಿತಿಯಿಂದ ಅರ್ಚಕ, ಮುಜಾವರ್ ನೇಮಕ ಮಾಡಲಾಗಿದ್ದು ನಿತ್ಯವೂ ಎರಡೂ ಸಮುದಾಯದವರೂ ಪೂಜೆ ನಡೆಸುತ್ತಿದ್ದಾರೆ. ಹೀಗಾಗಿ ದತ್ತ ಜಯಂತಿಗೆ ಅನುಮತಿ‌ ನೀಡಲು ಮನವಿ ಸಲ್ಲಿಸಲಾಗಿತ್ತು. ಹೈಕೋರ್ಟ್ ಗೆ ಎಜಿ ಪ್ರಭುಲಿಂಗ್ ನಾವದಗಿ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನಡೆಸಿರುವ ಹೈಕೋರ್ಟ್ ದತ್ತಜಯಂತಿ ಆಚರಣೆಗೆ ಅವಕಾಶವನ್ನು ಕಲ್ಪಿಸಿದ್ದು, ವಿಚಾರಣೆಯನ್ನು ಜ.12 ಕ್ಕೆ ಮುಂದೂಡಿದೆ.

ಸರಕಾರದ ಸೂಚನೆಯಲ್ಲೇನಿದೆ ?

ಶ್ರೀಗುರು ದತ್ತಾತ್ರೇಯ ಬಾಬಾ ಬುಡನ್‌ ಸ್ವಾಮಿ ದರ್ಗಾದಲ್ಲಿ ಧಾರ್ಮಿಕ ವಿಧಿಗಳನ್ನು ನೆರವೇರಿಸಲು ಮುಜಾವರ್‌ ಜತೆ ಆಗಮ ಗೊತ್ತಿರುವ ಹಿಂದೂ ಅರ್ಚಕರನ್ನು ನೇಮಿಸಲು ಸರ್ಕಾರ ತೀರ್ಮಾನಿಸಿತ್ತು. ಈ ಸಂಬಂಧ ಕಳೆದ ಆಗಸ್ಟ್ 19ರಂದು ಸುತ್ತೋಲೆ ಹೊರಡಿಸಿದ್ದ ಸರ್ಕಾರವು, ಹಿಂದೂ ಮತ್ತು ಮುಸ್ಲಿಂ ಧರ್ಮಗಳ ಪ್ರತಿನಿಧಿಗಳು ಇರುವ ವ್ಯವಸ್ಥಾಪನಾ ಸಮಿತಿ ರಚಿಸಬೇಕು. ಅರ್ಚಕ ಮತ್ತು ಮುಜಾವರ್‌ ಅವರನ್ನು ಈ ವ್ಯವಸ್ಥಾಪನಾ ಸಮಿತಿಯಿಂದಲೇ ನೇಮಿಸಬೇಕು ಎಂದು ಹೇಳಿತ್ತು.

ಇನಾಂ ದತ್ತಪೀಠದ ಗುಹೆಯ ಒಳಗೆ ನಂದಾದೀಪ ಬೆಳಗಿಸುವುದು. ದತ್ತಾತ್ರೇಯ ಪೀಠ, ಪಾದುಕೆಗಳಿಗೆ ಹೂ ಸಮರ್ಪಿಸಿ ನಿತ್ಯದ ಧಾರ್ಮಿಕ ವಿಧಿವಿಧಾನ ನಿರ್ವಹಿಸಬೇಕು. ಇದಕ್ಕಾಗಿ ಆಗಮ ಶಾಸ್ತ್ರದಲ್ಲಿ ಉತ್ತೀರ್ಣರಾದ ಅರ್ಹ ಹಿಂದೂ ಅರ್ಚಕರನ್ನು ವ್ಯವಸ್ಥಾಪನಾ ಸಮಿತಿ ನೇಮಿಸಬೇಕು ಎಂದು ಹೇಳಿತ್ತು. ಇದೇ ಸಮಿತಿಯು ಮುಸ್ಲಿಂ ಧಾರ್ಮಿಕ ವಿಧಿಗಳನ್ನು ಬಲ್ಲ ಮುಜಾವರ್ ಅವರನ್ನೂ ಪೀಠದ ಕೈಂಕರ್ಯಕ್ಕೆ ನೇಮಿಸಬೇಕು. ಮುಜಾವರ್ ಅವರು ಪ್ರತಿ ಸೋಮವಾರ ಮತ್ತು ಗುರುವಾರದ ನಮಾಜ್‌ ನಂತರ ಹಾಗೂ ಪ್ರತಿದಿನ ಸಂಜೆ ದರ್ಗಾದಲ್ಲಿ ಲೋಬಾನ ಹಾಕಿ, ಫಾತೇಹ್ ಅರ್ಪಿಸಬೇಕು ಎಂದು ಸರ್ಕಾರದ ಸುತ್ತೋಲೆಯು ಸೂಚಿಸಿತ್ತು.

ದತ್ತ ಮಾಲಾ, ದತ್ತ ಜಯಂತಿ ಮತ್ತು ಇತರ ವಿಶೇಷ ಹಿಂದೂ ಧಾರ್ಮಿಕ ಆಚರಣೆಗಳನ್ನು ಸುಗಮವಾಗಿ ನೆರವೇರಿಸಲು ವ್ಯವಸ್ಥಾಪನಾ ಸಮಿತಿಯು ಕ್ರಮ ಕೈಗೊಳ್ಳಬೇಕು. ಅರ್ಚಕರು, ಮಠಗಳ ಪೀಠಾಧಿಪತಿಗಳು ಅಥವಾ ಗುರುಗಳನ್ನು ಗುಹೆಯ ಒಳಗೆ ಕರೆದೊಯ್ದು ಪಾದುಕೆಗಳಿಗೆ ಗೌರವ ಸಲ್ಲಿಸಲು ಅವಕಾಶ ಮಾಡಿಕೊಡಬೇಕು. ಪ್ರತಿ ವರ್ಷ ಹೋಳಿ ಹುಣ್ಣಿಮೆಯ ಮರುದಿನದಿಂದ ಮೂರು ದಿನಗಳ ಕಾಲ ಉರುಸ್‌ ನಡೆಸುವ ಜವಾಬ್ದಾರಿಯನ್ನೂ ವ್ಯವಸ್ಥಾಪನಾ ಸಮಿತಿಯೇ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ : Bag checking of students : ವಿದ್ಯಾರ್ಥಿಗಳ ಬ್ಯಾಗ್ ಪರಿಶೀಲನೆ ವೇಳೆ ಬೆಚ್ಚಿಬಿದ್ದ ಶಿಕ್ಷಕರು : ಶಾಲಾ ಬ್ಯಾಗ್‌ನಲ್ಲಿತ್ತು ಕಾಂಡೋಮ್, ಮದ್ಯ, ಸಿಗರೇಟ್, ಗರ್ಭನಿರೋಧಕ ಮಾತ್ರೆ !

ಇದನ್ನೂ ಓದಿ : Cyber Case : ನ್ಯಾಯಾಧೀಶರ ಪತ್ನಿಯ ಬ್ಯಾಂಕ್ ಖಾತೆಗೆ ಕನ್ನ : 13 ಲಕ್ಷ ರೂ. ದೋಚಿದ ಸೈಬರ್ ಕಳ್ಳರು

ಇಂಗ್ಲಿಷ್‌ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ತಮಿಳು ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

Karnataka high court give permission to Datta Jayanti in Datta Peeta

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular