ಸಾರಿಗೆ ಸಂಘಟನೆಗಳಿಗೆ ಬಿಗ್ ಶಾಕ್ : ಮುಷ್ಕರ ನಡೆಸದಂತೆ ಹೈಕೋರ್ಟ್ ಆದೇಶ

ಸಾರಿಗೆ ನೌಕರರು ಕರೆ ನೀಡಿರುವ ಮುಷ್ಕರ ಪ್ರಶ್ನಿಸಿ ಕೆಲಸದ ಮಹಿಳೆ ಮತ್ತು ಕಟ್ಟಡ ಕಾರ್ಮಿಕರೊಬ್ಬರು ಪಿಐಎಲ್ ಸಲ್ಲಿಕೆ ಮಾಡಿದ್ದರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಮುಷ್ಕರ ನಡೆಸಲು ನಿರ್ಧರಿಸಿದ್ದ ಸಾರಿಗೆ ಇಲಾಖೆಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಸಾರಿಗೆ ಸಂಘಟನೆಗಳು ಸರ್ಕಾರದೊಂದಿಗೆ ಚರ್ಚೆ ನಡೆಸಲಿ , ಮುಷ್ಕರ ಮಾಡುವುದು ಬೇಡ ಎಂದು ನ್ಯಾಯಮೂರ್ತಿ ಸೂರಜ್ ಗೋವಿಂದ್ ರಾಜ್ ಹಾಗೂ ನ್ಯಾಯಮೂರ್ತಿ ಕೆ. ಮನ್ಮಥರಾವ್ ಅವರ ನೇತೃತ್ವದ ಪೀಠವು ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಸಾರಿಗೆ ನೌಕರರ ಮುಷ್ಕರ ರದ್ದಾಗಿದೆ .

ಸಾರಿಗೆ ನೌಕರರು ಕರೆ ನೀಡಿರುವ ಮುಷ್ಕರ ಪ್ರಶ್ನಿಸಿ ಕೆಲಸದ ಮಹಿಳೆ ಮತ್ತು ಕಟ್ಟಡ ಕಾರ್ಮಿಕರೊಬ್ಬರು ಪಿಐಎಲ್ ಸಲ್ಲಿಕೆ ಮಾಡಿದ್ದರು.ಇವರ ಪರವಾಗಿ ವಕೀಲ ವಿಕ್ರಂ ಹುಯಿಲಗೋಳ ವಾದ ಮಂಡಿಸಿದ್ದರು.ಈ ಅರ್ಜಿ ಕೈಗೆತ್ತಿಕೊಂಡ ರಾಜ್ಯ ಹೈಕೋರ್ಟ್, ಸರ್ಕಾರ ಹಾಗೂ ಸಾರಿಗೆ ಸಂಘಟನೆಗಳಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಸರ್ಕಾರ ಹಾಗೂ ಸಾರಿಗೆ ಸಂಘಟನೆಗಳು ಚರ್ಚೆ ನಡೆಸಿ ಈ ವಿಚಾರ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದೆ.

ಇದನ್ನೂ ಓದಿ :ಮೂಡದ ಒಮ್ಮತ : ರಾಜ್ಯದಲ್ಲಿ ಮೆಡಿಕಲ್ ಶಾಪ್ ಸಂಪೂರ್ಣ ಬಂದ್

KESMA ಅಡಿ ಜನವರಿ 1ರಿಂದ ಜೂನ್ 30ರವರೆಗೆ ಮುಷ್ಕರ ನಿರ್ಬಂಧಿಸಲಾಗಿದೆ. 2025ರ ಜುಲೈ18ರ ಕಾರ್ಮಿಕ ಆಯುಕ್ತರ ರಾಜಿ ಸಂಧಾನ ಪ್ರಕ್ರಿಯೆ ಮುಂದುವರಿದಿದೆ. ರಾಜಿ ಸಂಧಾನದ ಮುಂದಿನ ವಿಚಾರಣೆ ಮೇ 25ಕ್ಕೆ ನಿಗದಿಯಾಗಿದೆ. ಈ ಮಧ್ಯೆ ಮುಷ್ಕರ ನಡೆಸುವುದು ಕಾನೂನುಬಾಹಿರವಾಗಿದೆ.

14 ದಿನಗಳ ನೋಟಿಸ್ ಬದಲು ಮುಷ್ಕರಕ್ಕೆ 7 ದಿನಗಳ ನೋಟಿಸ್ ನೀಡಲಾಗಿದೆ. SSLC ಪೂರಕ ಪರೀಕ್ಷೆಗಳೂ ನಡೆಯುತ್ತಿರುವ ಕಾರಣ ಮುಷ್ಕರ ನಡೆಸದಂತೆ ಸಾರಿಗೆ ಸಂಘಟನೆಗಳ ಬಳಿ ಮನವಿ ಮಾಡಲಾಗಿತ್ತು. ಆದರೆ ಸಾರಿಗೆ ಸಂಘಟನೆಗಳು ಇವೆಲ್ಲವನ್ನು ಮೀರಿ ಬಂದ್ಗೆ ಮುಂದಾದ ಹಿನ್ನೆಲೆಯಲ್ಲಿ ಹೈಕೋರ್ಟ್ ಖಡಕ್ ಆದೇಶ ನೀಡಿದೆ.

Exit mobile version