ಬೆಂಗಳೂರು : ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿದ್ದ ಪಾದಯಾತ್ರೆಗೆ ಅವಕಾಶ ನೀಡಿರುವ ಕುರಿತು ಹೈಕೋರ್ಟ್ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ರಾಜ್ಯ ಸರಕಾರ ಎಚ್ಚೆತ್ತುಕೊಂಡಿದೆ. ಇದೀಗ ರಾಜ್ಯ ಸರಕಾರ ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆಗೆ ನಿರ್ಬಂಧ ಹೇರಿದ್ದು, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಆದೇಶ (Mekedatu Government Order)ಹೊರಡಿಸಿದ್ದಾರೆ.
ಹೈಕೋರ್ಟ್ ಆದೇಶದ ಬೆನ್ನಲ್ಲೇ ರಾಜ್ಯ ಸರಕಾರ ಹೊರಡಿಸಿರುವ ಆದೇಶದಲ್ಲಿ, ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆಯನ್ನು ನಿಲ್ಲಿಸಬೇಕು ಎಂದು ರಾಮನಗರ ಎಸ್‌ಪಿ ಹಾಗೂ ಡಿಸಿ ಅವರಿಗೆ ಸೂಚನೆಯನ್ನು ನೀಡಲಾಗಿದೆ. ಒಂದೊಮ್ಮೆ ಸರ್ಕಾರದ ಆದೇಶವನ್ನು ಉಲ್ಲಂಘಿಸಿದರೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿರುವ ಕುರಿತು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಈ ಕುರಿತು ಪ್ರಕರಣ ವಿಚಾರಣೆಯನ್ನು ನಡೆಸಿದ ಹೈಕೋರ್ಟ್ ರಾಜ್ಯ ಸರಕಾರ ಛೀಮಾರಿ ಹಾಕಿತ್ತು. ಅಲ್ಲದೇ ಕಾಂಗ್ರೆಸ್ ಪಕ್ಷಕ್ಕೆ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಇದರ ಬೆನ್ನಲ್ಲೇ ರಾಜ್ಯ ಸರಕಾರ ಈ ಆದೇಶ ಹೊರಡಿಸಿದೆ.

ರಾಜ್ಯ ಸರಕಾರದ ಆದೇಶದ ಬೆನ್ನಲ್ಲೇ ರಾಮನಗರದಲ್ಲಿ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಈಗಾಗಲೇ ಮೇಕದಾಟು ಪಾದಯಾತ್ರೆ ಸಾಗುವ ಹಾದಿಯಲ್ಲೆಲ್ಲಾ ಕಾಂಗ್ರೆಸ್ ನಾಯಕರ ವಿರುದ್ದ ಪ್ರಕರಣ ದಾಖಲಾಗುತ್ತಿದೆ. ಹೈಕೋರ್ಟ್ ಚಾಟಿ ಬೀಸಿದ್ದರೂ ಕೂಡ ಕಾಂಗ್ರೆಸ್ ನಾಯಕರು ಮಾತ್ರ ಪಾದಯಾತ್ರೆಯನ್ನು ನಿಲ್ಲಿಸುವ ಕುರಿತು ಮಾತನಾಡಿಲ್ಲ. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ರಾಜ್ಯ ಸರಕಾರ ಕಾಂಗ್ರೆಸ್ ನಾಯಕರನ್ನು ಬಲವಂತವಾಗಿ ಬಂದ್ ಮಾಡುತ್ತಾರಾ ಅನ್ನೋದನ್ನು ಕಾದು ನೋಡಬೇಕಾಗಿದೆ.
ಇದನ್ನೂ ಓದಿ : ಮೇಕೆದಾಟು ಪಾದಯಾತ್ರೆ ವಿರುದ್ದ ಸರಕಾರಕ್ಕೆ ಹೈಕೋರ್ಟ್ ಚಾಟಿ : ಕೆಪಿಸಿಸಿಗೆ ಶೋಕಾಸ್ ನೋಟಿಸ್ ಜಾರಿ
ಇದನ್ನೂ ಓದಿ : Mekedatu Padayatra : ಮೇಕೆದಾಟು ಪಾದಯಾತ್ರೆ ನಿಲ್ಲಿಸಿ : ಡಿಕೆಶಿಗೆ ಸೂಚನೆ ಕೊಟ್ಟ ಹಿರಿಯ ನಾಯಕರು
ಇದನ್ನೂ ಓದಿ : ಭದ್ರತಾ ಲೋಪದ ಕುರಿತಂತೆ ರಹಸ್ಯ ಕಾರ್ಯಾಚರಣೆಯಲ್ಲಿ ಸ್ಫೋಟಕ ಮಾಹಿತಿ ಬಯಲು
Immediately stop the mekedatu hiking, Government Order