ಕರ್ನಾಟಕದಲ್ಲಿ 15 ದಿನ ಲಾಕ್ ಡೌನ್ ..!!! ಹೊಸ ಮಾರ್ಗಸೂಚಿ ಪ್ರಕಟ ಸಾಧ್ಯತೆ..?

ಬೆಂಗಳೂರು : ಕೊರೊನಾ‌‌ ಎರಡನೇ ಅಲೆಯ ಆರ್ಭಟ ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ‌ಗೋಚರಿಸುತ್ತಿಲ್ಲ. ವೀಕೆಂಡ್ ಕರ್ಪ್ಯೂ ಬೆನ್ನಲ್ಲೇ ರಾಜ್ಯದಲ್ಲಿ 15 ದಿನ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆ ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ.

ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂಗೆ ಜನರಿಂದ ಉತ್ತಮ ಬೆಂಬಲ ಸಿಕ್ಕಿದೆ. ಕೊರೊನಾ ನಿಯಂತ್ರಣಕ್ಕೆ ಕನಿಷ್ಟ 15 ದಿನಗಳ ಕಾಲ ಲಾಕ್ ಡೌನ್ ಅನಿವಾರ್ಯ ಅನ್ನುವ ಕುರಿತು ತಜ್ಞರ ಸಮಿತಿ ರಾಜ್ಯ ಸರಕಾರಕ್ಕೆ ವರದಿಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ಸಚಿವ ಸಂಪುಟ ಸಭೆ‌‌ ಮಹತ್ವವನ್ನು ಪಡೆದುಕೊಂಡಿದೆ. ಒಂದೊಮ್ಮೆ ಲಾಕ್ ಡೌನ್ ಹೇರಿಕೆಯಾದ್ರೆ ಹೊಸ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ.

ಮೊದಲ ಅಲೆಗಿಂತಲೂ ಈ ಬಾರಿಯ ಲಾಕ್ ಡೌನ್ ನಲ್ಲಿ ಕಠಿಣ ನಿಯಮಗಳನ್ನು ಜಾರಿಗೆ ತರುವ ಸಾಧ್ಯತೆಯಿದೆ. ಬೆಳಗ್ಗೆ 6 ರಿಂದ 10 ಗಂಟೆಯ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವನ್ನು ಕಲ್ಪಿಸಿ, 10 ಗಂಟೆಯ ನಂತರ ಲಾಕ್ ಡೌನ್ ಹೇರಿಕೆ ಮಾಡುವ ಸಾದ್ಯತೆಯಿದೆ‌. ಕೊರೊನಾ ಲಿಂಕ್ ಕಟ್ ಮಾಡಲು ಲಾಕ್ ಡೌನ್ ಅನಿವಾರ್ಯ ಅನ್ನುವ ಕುರಿತು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದರು. ಇನ್ನು ಕೊರೊನಾ ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಅಂತರ್ ಜಿಲ್ಲಾ ಓಡಾಟಕ್ಕೂ ಬ್ರೇಕ್ ಹಾಕುವ ಸಾಧ್ಯತೆಯಿದೆ.

ಕೊರೊನಾ ಸೋಂಕು ಪತ್ತೆ ಹಚ್ಚುವುದು, ಸೊಂಕಿತರ ಚಿಕಿತ್ಸೆ ಹಾಗೂ ಲಸಿಕೆ ನೀಡುವ ಕುರಿತು ಕೂಡ ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ.

Comments are closed.