ಕರ್ನಾಟಕದಲ್ಲಿ ವಿಸ್ತರಣೆಯಾಗುತ್ತಾ ಲಾಕ್ ಡೌನ್ : ಸಿಎಂ ಯಡಿಯೂರಪ್ಪ ಹೇಳಿದ್ದೇನು ಗೊತ್ತಾ ..?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಹೇರಿಕೆಯಾಗಿರು ಲಾಕ್ ಡೌನ್ ಮುಂದುವರಿಯುತ್ತಾ ಅನ್ನೋ ಕುರಿತು ಜೂನ್ 5ರಂದು ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕೊರೊನಾ ವೈರಸ್ ಸೋಂಕು ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಪರೆನ್ಸ್ ನಡೆಸಿದ ಸಿಎಂ ಯಡಿಯೂರಪ್ಪ ಜಿಲ್ಲೆಗಳ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್ ಡೌನ್ ಮುಂದುವರಿಸಬೇಕೆ ಎನ್ನುವ ಕುರಿತು ನಿರ್ಧಾರ ಕೈಗೊಂಡಿಲ್ಲ. ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ ನೋಡಿಕೊಂಡು ಲಾಕ್ ಡೌನ್ ವಿಸ್ತರಣೆಯ ಬಗ್ಗೆ ಜೂನ್ 5ರಂದು ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ.

ಜೂನ್ 7ರ ವರೆಗೂ ರಾಜ್ಯದಲ್ಲಿ ಎಂದಿನಂತೆಯೇ ಲಾಕ್ ಡೌನ್ ಜಾರಿಯಲ್ಲಿರಲಿದೆ. ಅಲ್ಲದೇ ರಾಜ್ಯದಾದ್ಯಂತ ಬಿಗಿ ಕ್ರಮವನ್ನು ಮುಂದುವರಿಸುತ್ತೇವೆ. ಆದರೆ ಜನರು ಸಹಕಾರ ನೀಡಬೇಕು. ಕೊರೊನಾ ಸ್ಥಿತಿಗತಿಯನ್ನು ನೋಡಿಕೊಂಡು ತೀರ್ಮಾನ ಕೈಗೊಳ್ಳಲಾಗುತ್ತದೆ. ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಜನರು ಸಹಕಾರ ನೀಡಿದ್ರೆ ಲಾಕ್ ಡೌನ್ ಅಗತ್ಯವಿಲ್ಲ ಎಂದಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚಳವಾಗಿದ್ದು, ಹೆಚ್ಚು ಕೊರೊನಾ ಪರೀಕ್ಷೆಯನ್ನು ನಡೆಸಲು ಸೂಚನೆಯನ್ನು ನೀಡಲಾಗಿದೆ. ಇದೀಗ ಕೊರೊನಾ ಸೋಂಕು ಕಡಿಮೆಯಾಗುತ್ತಿದೆ. ಹಳ್ಳಿಗಳಲ್ಲಿ ಸೋಂಕು ಹರಡದಂತೆ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ. ರಾಜ್ಯದ ಹಲವು ಗ್ರಾಮಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದಿದ್ದಾರೆ.

ಬ್ಲ್ಯಾಕ್ ಫಂಗಸ್ ಔಷಧ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಪ್ರಕರಣ ಅಲ್ಲೊಂದು ಇಲ್ಲೊಂದು ಕಂಡು ಬರುತ್ತಿದೆ. ಕಾಳ ಸಂತೆಯಲ್ಲಿ ಔಷಧ ಮಾರಾಟ ಮಾಡುವವರ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗುವುದು. ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಔಷಧಿ ಪೂರೈಕೆಯ ಕುರಿತು ಕೇಂದ್ರ ಸಚಿವರ ಡಿ.ವಿ.ಸದಾನಂದ ಗೌಡ ಅವರ ಜೊತೆಗೆ ಮಾತನಾಡಿದ್ದೇನೆ. ಇನ್ನು ಪಿಎಂ ಕೇರ್ಸ್ ವೆಂಟಿಲೇಟರ್ ಸಮಸ್ಯೆಯನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದೆ ಎಂದಿದ್ದಾರೆ.

https://kannada.newsnext.live/bollywood-kishwer-merchant-bigboss-casting-couch-actress-model/

Comments are closed.