ರಾಜ್ಯದ 8 ಜಿಲ್ಲೆಗಳಲ್ಲಿ ಮತ್ತೊಂದು ವಾರ ಲಾಕ್ ಡೌನ್ : ಜಿಲ್ಲಾಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಕೆಯಾಗಿದ್ದರೂ ಕೂಡ ಕೆಲವು ಜಿಲ್ಲೆಗಳಲ್ಲಿ ಮಾತ್ರ ಸೋಂಕು ಇಳಿಕೆಯಾಗು ತ್ತಿಲ್ಲ. ಹೀಗಾಗಿ ರಾಜ್ಯದ 8 ಜಿಲ್ಲೆಗಳಲ್ಲಿ ಮತ್ತೊಂದು ವಾರ ಲಾಕ್ ಡೌನ್ ಮುಂದುವರಿಕೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆಯನ್ನು ನೀಡಿದ್ದಾರೆ.

ದಕ್ಷಿಣ ಕನ್ನಡ, ಬೆಳಗಾವಿ, ವಿಜಯಪುರ, ಮೈಸೂರು, ತುಮಕೂರು, ಹಾಸನ, ಶಿವಮೊಗ್ಗ, ಮಂಡ್ಯ ಜಿಲ್ಲೆಗಳಲ್ಲಿನ ಕೊರೊನಾ ಸಕ್ರೀಯ ಪ್ರಕರಣಗಳ ಸಂಖ್ಯೆ 65 ಸಾವಿರಕ್ಕೂ ಅಧಿಕ ಇದೆ. ಹೀಗಾಗಿ ಈ 8 ಜಿಲ್ಲೆಗಳಲ್ಲಿ ಇನ್ನೊಂದು ವಾರ ಲಾಕ್ ಡೌನ್ ಮುಂದುವರಿಸುವಂತೆ ಸಿಎಂ ಸೂಚನೆಯನ್ನು ನೀಡಿದ್ದಾರೆ. ಅಲ್ಲದೇ ಕೊರೊನಾ ನಿಯಂತ್ರಣಕ್ಕೆ ಕಟ್ಟಿನಿಟ್ಟಿನ ಕ್ರಮವನ್ನು ಕೈಗೊಳ್ಳಬೇಕು ಎಂದಿದ್ದಾರೆ.

ಪ್ರಮುಖವಾಗಿ ಕೊರೊನಾ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ ಶೇ5 ಕ್ಕಿಂತ ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು. ಕೊರೊನಾ ಸೋಂಕಿನರ ಜೊತೆ ಸಂಪರ್ಕದಲ್ಲಿ ಇರುವವರ ಪತ್ತೆ ಕಾರ್ಯವನ್ನು ಇನ್ನಷ್ಟು ಚುರುಕುಗೊಳಿ ಸಬೇಕು. ಲಸಿಕೆ ಅಭಿಯಾನವನ್ನು ತೀವ್ರಗೊಳಿಸುವುದು ಸೇರಿದಂತೆ ಹಲವು ಸೂಚನೆಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಸಭೆಯ ನಂತರದಲ್ಲಿ ಸಿಎಂ ಯಡಿಯೂರಪ್ಪ ರಾಜ್ಯದಾದ್ಯಂತ ಲಾಕ್ ಡೌನ್ ವಿಸ್ತರಣೆ ಮಾಡುತ್ತಾರಾ. ಇಲ್ಲಾ ಸೋಂಕು ಹೆಚ್ಚಿರುವ 8 ಜಿಲ್ಲೆಗಳಲ್ಲಿ ಮಾತ್ರವೇ ಲಾಕ್ ಡೌನ್ ಆದೇಶ ಮುಂದುವರಿಸುತ್ತಾರಾ ಅನ್ನೋದು ಗೊತ್ತಾಗಲಿದೆ. ಆದರೆ ದಕ್ಷಿಣ ಕನ್ನಡ, ಮೈಸೂರು, ಹಾಸನ, ತುಮಕೂರು, ಬೆಳಗಾವಿ ಜಿಲ್ಲೆಗಳಲ್ಲಿ ಮತ್ತೊಂದು ವಾರ ಲಾಕ್ ಡೌನ್ ಮುಂದುವರಿಸಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ.

Comments are closed.