ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆ ಯಲ್ಲಿ ಲಾಕ್‍ಡೌನ್ ಮತ್ತೆ ವಿಸ್ತರಣೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕು ನಿಯಂತ್ರಣವಾಗಿಲ್ಲ, ಹಳ್ಳಿಗಳಲ್ಲಿ ಇನ್ನೂ ಕೊರೊನಾ ಕಡಿಮೆ ಆಗಿಲ್ಲ. ಲಾಕ್‍ಡೌನ್‍ನಲ್ಲಿ ಏನು ಮಾಡಬೇಕು ಎನ್ನುವುದರ ಬಗ್ಗೆ ಇಂದು ಸಂಜೆ ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ.
ಲಾಕ್ ಡೌನ್ ವಿಸ್ತರಣೆಯಾದರೂ ಕೂಡ ಕೆಲವೊಂದು ವಲಯಗಳಿಗೆ ವಿನಾಯಿತಿ ನೀಡಲಾಗುತ್ತದೆ. ಕೈಗಾರಿಕೆಗಳ ರಫ್ತು ಘಟಕಗಳಿಗೆ ಮಾತ್ರ ಅನುಮತಿ ನೀಡುತ್ತೆವೆ. ಅಲ್ಲದೇ ಲಾಕ್ ಡೌನ್ ಸಡಿಲ ಹೇಗೆ ಮಾಡಬೇಕು ಎನ್ನುವುದರ ಬಗ್ಗೆಯೂ ಚರ್ಚೆ ಮಾಡುತ್ತೇವೆ. ಅಲ್ಲದೇ ಲಾಕ್ ಡೌನ್ ವಿಸ್ತರಣೆ ಮಾಡಿ ಬಿಗಿಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.