ಕೊರೊನಾ ಸಂಕಷ್ಟ, ಸರಕಾರಿ ನೌಕರರ 1 ತಿಂಗಳ ವೇತನ ಕಡಿತ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ…!!!!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆ ಮಾಡಿದೆ. ಕೊರೊನಾ ಆರ್ಥಿಕ ಹೊಡೆತದಿಂದ ತಪ್ಪಿಸಿಕೊಳ್ಳಲು ರಾಜ್ಯ ಸರಕಾರ ಸರಕಾರಿ ನೌಕರರ ಒಂದು ತಿಂಗಳ ವೇತನ ಕಡಿತಕ್ಕೆ ಮುಂದಾಗಿದೆ.

ರಾಜ್ಯದಲ್ಲಿ 14 ದಿನಗಳ ಕಾಲ ಲಾಕ್ ಡೌನ್ ಜಾರಿಯಿಂದಾಗಿ ಬಹುತೇಕ ಆರ್ಥಿಕ ಚಟುವಟಿಕೆ ಸಂಪೂರ್ಣವಾಗಿ ಸ್ತಬ್ದವಾಗಲಿದೆ‌. ಈ ನಿಟ್ಟಿನಲ್ಲಿ ರಾಜ್ಯ ಸರಕಾರದ ಬೊಕ್ಕಸಕ್ಕೆ ಹೊಡೆತ ಬೀಳಲಿದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಈ ಬಾರಿ ಸರಕಾರಿ ನೌಕರರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರ ವೇತನ ಕಡಿತಕ್ಕೆ ಮುಂದಾಗಿದೆ.

ಕೊರೊನಾ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿಗಳನ್ನು ಹೊರತು ಪಡಿಸಿ ಉಳಿದ ಸರಕಾರಿ ನೌಕರರ ವೇತನ ಕಡಿತಕ್ಕೆ ಮುಂದಾಗಿದೆ. ಇದರಿಂದಾಗಿ ರಾಜ್ಯ ಸರಕಾರದ ಬೊಕ್ಕಸಕ್ಕೆ 500 ಕೋಟಿ ರೂಪಾಯಿ ಉಳಿತಾಯ ವಾಗಲಿದೆ. ಸಚಿವ ಸಂಪುಟ ಸಭೆಯಲ್ಲಿ ವೇತನ ಕಡಿತಕ್ಕೆ ಒಪ್ಪಿಗೆ ಸೂಚಿಸಿದ್ದಾರೆನ್ನಲಾಗುತ್ತಿದೆ. 

ಒಂದೊಮ್ಮೆ ಸರಕಾರಿ ನೌಕರರ ವೇತನ ಕಡಿತ ಮಾಡಿದ್ರೆ ಅಸಮಾ ಧಾನ ಸ್ಪೋಟವಾಗುವ ಸಾಧ್ಯತೆಯಿದೆ ಅನ್ನೋ ಬಗ್ಗೆಯೂ ಚರ್ಚೆ ನಡೆದಿದೆ‌. ಈ ಹಿನ್ನೆಲೆಯಲ್ಲಿ ಸರಕಾರ ಸಾಧಕ‌ ಬಾಧಕಗಳನ್ನು ಚರ್ಚಿಸಿ ಆದೇಶ ಹೊರಡಿಸುವ ಸಾಧ್ಯತೆಯಿದೆ.

Comments are closed.