ಬೆಂಗಳೂರು : ಕೊರೊನಾ ಸೋಂಕಿನ ಇಳಿಕೆಯ ಬೆನ್ನಲ್ಲೇ ರಾಜ್ಯದಲ್ಲಿ ಮೆಡಿಕಲ್ ಕಾಲೇಜುಗಳ ಆರಂಭಕ್ಕೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ನರ್ಸಿಂಗ್, ಪ್ಯಾರಾ ಮೆಡಿಕಲ್ ಸೇರಿದಂತೆ ಎಲ್ಲಾ ಯಮೆಡಿಕಲ್ ಕಾಲೇಜ್ ಗಳನ್ನು ತೆರೆಯಲು ಅನುಮತಿ ನೀಡಿ ಆದೇಶ ಹೊರಡಿಸಿದೆ.

ಆರೋಗ್ಯ ಮತ್ತು ಮೆಡಿಕಲ್ ಸೆಕ್ಟರ್ ( ಮೆಡಿಕಲ್, ಡೆಂಟಲ್ ಕಾಲೇಜ್, ಆಯುಷ್ ಕಾಲೇಜು ಮತ್ತು ಇನ್ಸಿಟಿಟ್ಯೂಷನ್ನ್, ನರ್ಸಿಂಗ್ ಕಾಲೇಜು ಮತ್ತು ಹೆಲ್ತ್ ಕೇರ್ ಅಕಾಡೆಮಿಕ್ ಇನ್ಟಿಟ್ಯೂಷನ್, ಕಾಲೇಜು ಇತರೆ) ಸಂಸ್ಥೆಗಳು ಕೂಡಲೇ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಹಲವು ಷರತ್ತುಗಳನ್ನು ವಿಧಿಸಿ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ ಪ್ರಸಾದ್ ಆದೇಶ ಹೊರಡಿಸಿದ್ದಾರೆ.

ಕೊರೊನಾ ಮಾರ್ಗಸೂಚಿಗಳನ್ನು ಕಾಲೇಜುಗಳು ಕಡ್ಡಾಯವಾಗಿ ಪಾಲನೆ ಮಾಡಬೇಕು. ಅಲ್ಲದೇ ಕಾಲೇಜುಗಳಲ್ಲಿ ಆಫ್‌ಲೈನ್ ತರಗತಿಗಳಲ್ಲಿ ಭಾಗಿಯಾಗುವ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂಧಿಗಳು ಕಡ್ಡಾಯವಾಗಿ ಒಂದು ಡೋಸ್ ಕೊರೊನಾ ಲಸಿಕೆಯನ್ನು ಪಡಡೆದಿರಬೇಕು.

ಕಾಲೇಜುಗಳಲ್ಲಿ ಕೊರೊನಾ ನಿಯಮ ಉಲ್ಲಂಘನೆಯಾದ್ರೆ ಅಂತಹ ಸಂದರ್ಭದಲ್ಲಿ ಕಾಲೇಜುಗಳ ವಿರುದ್ದ ರೋನಾ ಸೋಂಕಿನ ನಿಯಂತ್ರಣ ಕಾನೂನು ಕ್ರಮ ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ 2005ರ ಸೆಕ್ಷನ್ 51 ರಿಂದ 60 ರಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆದೇಶದಲ್ಲಿ ಎಚ್ಚರಿಕೆಯನ್ನ ನೀಡಲಾಗಿದೆ.
